ಟೆಸ್ಟ್ಗೆ ಪಾದಾರ್ಪಣೆ ಮಾಡಿದ ಮೊದಲ ಇನಿಂಗ್ಸ್ನಲ್ಲಿ ಐದು ವಿಕೆಟ್ ಪಡೆದ ಮೊಹಮ್ಮದ್ ಸಿರಾಜ್ ತಮ್ಮ ಟೆಸ್ಟ್ ಕ್ರಿಕೆಟ್ ವೃತ್ತಿಜೀವನಕ್ಕೆ ಉತ್ತಮ ಆರಂಭ ನೀಡಿದ್ದಾರೆ. ಅವರು ಕೇವಲ 7 ಪಂದ್ಯಗಳಲ್ಲಿ 27 ವಿಕೆಟ್ ಪಡೆದಿದ್ದಾರೆ. ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಅವರು ಲಾರ್ಡ್ಸ್‌ನಲ್ಲಿ ಎರಡೂ ಇನ್ನಿಂಗ್ಸ್ಗಳಲ್ಲಿ 8 ವಿಕೆಟ್ ಪಡೆದಿದ್ದಾರೆ.
ಈ ಅದ್ಭುತ ಪ್ರದರ್ಶನದಿಂದಾಗಿ, ಮೊಹಮ್ಮದ್ ಸಿರಾಜ್ ಅವರ ಅಭಿಮಾನಿಗಳು ಪ್ರಪಂಚದಾದ್ಯಂತ ಹೆಚ್ಚಾಗಿದ್ದಾರೆ. ಇವರಲ್ಲಿ ಪಾಕಿಸ್ತಾನದ ಕ್ರೀಡಾ ಪತ್ರಕರ್ತ ಜೈನಾಬ್ ಅಬ್ಬಾಸ್ ಕೂಡ ಅವರ ಅಭಿಮಾನಿಯಾಗಿದ್ದಾರೆ.
ಪಾಕಿಸ್ತಾನದ ಕ್ರೀಡಾ ಪತ್ರಕರ್ತೆ ಜೈನಾಬ್ ಅಬ್ಬಾಸ್, ಕಳೆದ ಕೆಲವು ವರ್ಷಗಳಿಂದ ಪ್ರಮುಖ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಿಗೆ ಹಾಜರಾಗುತ್ತಿದ್ದು, ಸಿರಾಜ್ ಅವರನ್ನು ಹೊಗಳಿದ್ದಾರೆ. ಅವರು ಸಿರಾಜ್ಗೆ ವಿಶ್ವ ದರ್ಜೆಯ ಬೌಲರ್ ಎಂಬ ಬಿರುದನ್ನು ಕೂಡ ಕೊಟ್ಟಿದ್ದಾರೆ.
ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತದ ವಿಜಯವನ್ನು ಜೈನಾಬ್ ಶ್ಲಾಘಿಸಿದರು ಮತ್ತು ಎಲ್ಲಾ ಬೌಲರ್‌ಗಳನ್ನು ಅಭಿನಂದಿಸಿದರು. ಈ ಬಗ್ಗೆ ಮಾತನಾಡಿದ ಅವರು ಬುಮ್ರಾ ಆಟವನ್ನು ಹೊಗಳಲು ನನ್ನಲ್ಲಿ ಪದಗಳಿಲ್ಲ. ಇಶಾಂತ್ ಕೂಡ ಅದ್ಭುತ ಆಟಗಾರ. ಶಮಿ ಬೌಲಿಂಗ್ನಲ್ಲಿ ಮಾತ್ರವಲ್ಲದೆ ಬ್ಯಾಟಿಂಗ್ನಲ್ಲೂ ಉತ್ತಮ ಕೊಡುಗೆ ನೀಡಿದರು ಎಂದು ಜೈನಾಬ್ ಹೇಳಿದ್ದಾರೆ.
33ವರ್ಷದ ಜೈನಾಬ್, ಮೂಲತಃ ಪಾಕಿಸ್ತಾನದ ಲಾಹೋರ್‌ನವರು. ಇಂಗ್ಲೆಂಡ್‌ನಲ್ಲಿ ದೀರ್ಘಕಾಲದಿಂದ ವಾಸಿಸುತ್ತಿದ್ದಾರೆ. ಜೊತೆಗೆ ತನ್ನ ಶಿಕ್ಷಣವನ್ನು ಇಂಗ್ಲೆಂಡ್ ವಿಶ್ವವಿದ್ಯಾಲಯದಿಂದ ಪೂರ್ಣಗೊಳಿಸಿದಳು. ಜೈನಾಬ್ ಐಸಿಸಿ ವಿಶ್ವಕಪ್‌ನಲ್ಲಿ ಪಾಕಿಸ್ತಾನದ ಮೊದಲ ಮಹಿಳಾ ಕಾಮೆಂಟೇಟರ್ ಎಂದು ಪ್ರಸಿದ್ಧರಾಗಿದ್ದಾರೆ.
Published On - 2:57 pm, Fri, 20 August 21