Paralympics 2024: 56 ವರ್ಷಗಳಲ್ಲಿ ಮೊದಲ ಬಾರಿಗೆ ಪ್ಯಾರಾಲಿಂಪಿಕ್ಸ್‌ನಲ್ಲಿ ಇತಿಹಾಸ ಸೃಷ್ಟಿಸಿದ ಭಾರತ
Paralympics 2024: ಕ್ರೀಡಾಕೂಟದ ಒಂದೇ ಸೀಸನ್ನಲ್ಲಿ ಭಾರತ ಇಷ್ಟು ಚಿನ್ನದ ಪದಕಗಳನ್ನು ಗೆದ್ದಿರುವುದು ಇದೇ ಮೊದಲು. ಇದಕ್ಕೂ ಮೊದಲು ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ ತಂಡ ಐದು ಚಿನ್ನದ ಪದಕಗಳನ್ನು ಗೆದ್ದಿತ್ತು. ಹಾಗಾದರೆ ಈ ಆವೃತ್ತಿಯಲ್ಲಿ ಭಾರತಕ್ಕೆ ಯಾರ್ಯಾರು ಚಿನ್ನದ ಪದಕವನ್ನು ಗೆದ್ದುಕೊಟ್ಟಿದ್ದಾರೆ ಎಂಬುದನ್ನು ನೋಡುವುದಾದರೆ..
1 / 7
ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಇದುವರೆಗೆ ಭಾರತದ ಪ್ಯಾರಾ ಅಥ್ಲೀಟ್ಗಳು ನಿರೀಕ್ಷೆಗೂ ಮೀರಿದ ಪ್ರದರ್ಶನ ನೀಡಿದ್ದಾರೆ. ಈ ಮೂಲಕ ಪ್ಯಾರಾಲಿಂಪಿಕ್ಸ್ ಇತಿಹಾಸದಲ್ಲೇ ಒಂದು ಆವೃತ್ತಿಯಲ್ಲಿ ಅತ್ಯಧಿಕ ಪದಕ ಗೆದ್ದ ಸಾಧನೆಯನ್ನು ಭಾರತದ ಅಥ್ಲೀಟ್ಗಳು ನಿರ್ಮಿಸಿದ್ದಾರೆ. ಇದುವರೆಗೆ ಭಾರತ 26 ಪದಕಗಳನ್ನು ಗೆದ್ದಿದ್ದು, ಇದರಲ್ಲಿ 6 ಚಿನ್ನ, 9 ಬೆಳ್ಳಿ ಮತ್ತು 11 ಕಂಚಿನ ಪದಕಗಳು ಸೇರಿವೆ.
2 / 7
ಇನ್ನು ಕ್ರೀಡಾಕೂಟದ 9ನೇ ದಿನ ಪುರುಷರ ಹೈಜಂಪ್ T54 ಈವೆಂಟ್‌ನಲ್ಲಿ ಪ್ರವೀಣ್ ಕುಮಾರ್ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತದ ಚಿನ್ನದ ಪದಕಗಳ ಸಂಖ್ಯೆಯನ್ನು 6ಕ್ಕೇರಿಸಿದರು. ಈ ಕ್ರೀಡಾಕೂಟದ ಒಂದೇ ಸೀಸನ್ನಲ್ಲಿ ಭಾರತ ಇಷ್ಟು ಚಿನ್ನದ ಪದಕಗಳನ್ನು ಗೆದ್ದಿರುವುದು ಇದೇ ಮೊದಲು. ಇದಕ್ಕೂ ಮೊದಲು ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ ತಂಡ ಐದು ಚಿನ್ನದ ಪದಕಗಳನ್ನು ಗೆದ್ದಿತ್ತು. ಹಾಗಾದರೆ ಈ ಆವೃತ್ತಿಯಲ್ಲಿ ಭಾರತಕ್ಕೆ ಯಾರ್ಯಾರು ಚಿನ್ನದ ಪದಕವನ್ನು ಗೆದ್ದುಕೊಟ್ಟಿದ್ದಾರೆ ಎಂಬುದನ್ನು ನೋಡುವುದಾದರೆ..
3 / 7
ಶೂಟರ್ ಅವನಿ ಲೆಖರಾ ಈ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕವನ್ನು ಗೆದ್ದುಕೊಟ್ಟರು . ಮಹಿಳೆಯರ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಅವನಿ ಚಿನ್ನದ ಪದಕ ಗೆದ್ದರೆ, ಇದೇ ಸ್ಪರ್ಧೆಯಲ್ಲಿ ಭಾರತದ ಮೋನಾ ಅಗರ್ವಾಲ್ ಕಂಚಿನ ಪದಕ ಗೆದ್ದಿದ್ದರು.
4 / 7
ಪುರುಷರ ಸಿಂಗಲ್ಸ್ ಬ್ಯಾಡ್ಮಿಂಟನ್ ಎಸ್‌ಎಲ್ 3 ಸ್ಪರ್ಧೆಯಲ್ಲಿ ನಿತೇಶ್ ಕುಮಾರ್ ಭಾರತಕ್ಕೆ ಎರಡನೇ ಚಿನ್ನದ ಪದಕವನ್ನು ಗೆದ್ದುಕೊಟ್ಟರು. ಕಳೆದ ಪ್ಯಾರಾಲಿಂಪಿಕ್ಸ್‌ನಲ್ಲೂ ಭಾರತ ಈ ಸ್ಪರ್ಧೆಯಲ್ಲಿ ಚಿನ್ನ ಗೆದ್ದಿತ್ತು. ಆಗ ಪ್ರಮೋದ್ ಭಗತ್ ಭಾರತದ ಕಡೆಯಿಂದ ಚಿನ್ನ ವಶಪಡಿಸಿಕೊಂಡಿದ್ದರು.
5 / 7
ಸುಮಿತ್ ಅಂತಿಲ್ ಭಾರತಕ್ಕೆ ಮೂರನೇ ಚಿನ್ನದ ಪದಕವನ್ನು ಗೆದ್ದುಕೊಟ್ಟರು . ಜಾವೆಲಿನ್ ಎಸೆತ ಸ್ಪರ್ಧೆಯಲ್ಲಿ ಸುಮಿತ್ 70.59 ಮೀಟರ್ ದೂರ ಜಾವೆಲಿನ್ ಎಸೆದು ಇತಿಹಾಸ ನಿರ್ಮಿಸಿದ್ದಲ್ಲದೆ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡರು. ಕಳೆದ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲೂ ಸುಮಿತ್ ಚಿನ್ನ ಗೆದ್ದಿದ್ದರು.
6 / 7
ಹರ್ವಿಂದರ್ ಸಿಂಗ್ ಆರ್ಚರಿ ಸ್ಪರ್ಧೆಯಲ್ಲಿ ಭಾರತಕ್ಕೆ ಪ್ಯಾರಾಲಿಂಪಿಕ್ಸ್ ಇತಿಹಾಸದಲ್ಲಿ ಮೊದಲ ಚಿನ್ನವನ್ನು ಗೆದ್ದುಕೊಟ್ಟರು. ಹರ್ವಿಂದರ್ ಅವರ ಪದಕ ಭಾರತ ಗೆದ್ದ ನಾಲ್ಕನೇ ಚಿನ್ನದ ಪದಕವಾಗಿದೆ. ಇದಕ್ಕೂ ಮುನ್ನ ಹರ್ವಿಂದರ್ ಸಿಂಗ್ ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದರು.
7 / 7
ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಅಥ್ಲೆಟಿಕ್ಸ್ ಅಡಿಯಲ್ಲಿ ಕ್ಲಬ್ ಥ್ರೋ F51 ಸ್ಪರ್ಧೆಯಲ್ಲಿ 34.92 ಮೀಟರ್ ದೂರ ಎಸೆದು ಏಷ್ಯನ್ ದಾಖಲೆ ನಿರ್ಮಿಸಿ ಧರಂಬೀರ್ ನೈನ್ ಚಿನ್ನ ಗೆದ್ದರು. ಈ ಚಿನ್ನವು ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ ಗೆದ್ದ ಐದನೇ ಚಿನ್ನದ ಪದಕವಾಗಿದೆ.