Parineeti Chopra: ಬಾಲಿವುಡ್ ಬೆಡಗಿ ಪರಿಣೀತಿ ಚೋಪ್ರಾ ನಿಶ್ಚಿತಾರ್ಥದ ಹೊಸ ಫೋಟೋಸ್
ಈಗ ಪರಿಣೀತಿ ಚೋಪ್ರಾ ಅವರು ಹೊಸ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಎಂಗೇಜ್ಮೆಂಟ್ ಕಾರ್ಯಕ್ರಮ ಹೇಗಿತ್ತು ಎಂಬುದರ ಝಲಕ್ ಈ ಫೋಟೋದಲ್ಲಿದೆ.
Updated on: May 18, 2023 | 2:21 PM
Share

ಬಾಲಿವುಡ್ ನಟಿ ಪರಿಣೀತಿ ಚೋಪ್ರಾ ಹಾಗೂ ಆಮ್ ಆದ್ಮಿ ನಾಯಕ ರಾಘವ್ ಚಡ್ಡಾ ಅವರು ಇತ್ತೀಚೆಗೆ ನಿಶ್ಚಿತಾರ್ಥ ಮಾಡಿಕೊಂಡರು. ಈ ವಿಚಾರವನ್ನು ಸ್ವತಃ ಪರಿಣೀತಿ ಅವರು ಅಧಿಕೃತ ಮಾಡಿದರು.

ಈಗ ಪರಿಣೀತಿ ಚೋಪ್ರಾ ಅವರು ಹೊಸ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಎಂಗೇಜ್ಮೆಂಟ್ ಕಾರ್ಯಕ್ರಮ ಹೇಗಿತ್ತು ಎಂಬುದರ ಝಲಕ್ ಈ ಫೋಟೋದಲ್ಲಿದೆ.

ಸಿಖ್ ಶೈಲಿಯಲ್ಲಿ ನಿಶ್ಚಿತಾರ್ಥ ನೆರವೇರಿದೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ. ನಟಿಗೆ ಎಲ್ಲರೂ ಮತ್ತೊಮ್ಮೆ ಶುಭಾಶಯ ಕೋರಿದ್ದಾರೆ.

ಪರಿಣೀತಿ ಚೋಪ್ರಾ ಹಾಗೂ ರಾಘವ್ ಚಡ್ಡಾ ಒಟ್ಟಿಗೆ ಓದಿದವರು. ಲಂಡನ್ನಲ್ಲಿ ಇಬ್ಬರೂ ಒಂದೇ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದಿದ್ದಾರೆ. ಈ ವೇಳೆ ಇಬ್ಬರ ಮಧ್ಯೆ ಪ್ರೀತಿ ಮೂಡಿದೆ ಎನ್ನಲಾಗಿದೆ.

ಇಬ್ಬರೂ ಹಲವು ಕಡೆಗಳಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಆಗಲೇ ಮದುವೆ ಬಗ್ಗೆ ಸುದ್ದಿ ಹರಿದಾಡಿತ್ತು. ಈಗ ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡು ಸರ್ಪ್ರೈಸ್ ನೀಡಿದ್ದಾರೆ.
Related Photo Gallery
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ




