ಭಾರತದ ಸ್ಟಾರ್ ಷಟ್ಲರ್ ಲಕ್ಷ್ಯ ಸೇನ್ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ಸೆಮಿಫೈನಲ್ ತಲುಪಿದ್ದರು. ಆದೆ ಸೆಮಿಫೈನಲ್ ಪಂದ್ಯದಲ್ಲಿ ಅವರು ಸೋಲನುಭವಿಸಬೇಕಾಯಿತು. ಇದಾದ ಬಳಿಕ ಕಂಚಿನ ಪದಕದ ಪಂದ್ಯದಲ್ಲಿ ಆರಂಭದಲ್ಲಿ ಮುನ್ನಡೆ ಸಾಧಿಸಿದ ಅವರು ಆ ಬಳಿಕ ತಮ್ಮ ಲಯ ಕಳೆದುಕೊಂಡು ಮಲೇಷ್ಯಾದ ಲೀ ಜಿ ಜಿಯಾ ಅವರ ವಿರುದ್ಧ 13-21, 21-16, 21-11 ಅಂತರದಿಂದ ಸೋಲೊಪ್ಪಿಕೊಂಡರು.