Paris Olympics 2024: ಹ್ಯಾಟ್ರಿಕ್ ಪದಕ ಗೆಲ್ಲುವ ಅವಕಾಶ; ಮನು ಭಾಕರ್ ಮುಂದಿನ ಸ್ಪರ್ಧೆ ಯಾವಾಗ?
Paris Olympics 2024: ಮನು ಭಾಕರ್ ಪ್ಯಾರಿಸ್ ಒಲಿಂಪಿಕ್ಸ್ಗೆ 3 ಸ್ಪರ್ಧೆಗಳಲ್ಲಿ ಅರ್ಹತೆ ಪಡೆದಿದ್ದರು. ಈಗ ಅವರು ಆಗಸ್ಟ್ 2 ರಂದು 25 ಮೀಟರ್ ಏರ್ ಪಿಸ್ತೂಲ್ ಶೂಟಿಂಗ್ ಈವೆಂಟ್‌ನಲ್ಲಿ ಆಡಲಿದ್ದಾರೆ. ಈ ಪಂದ್ಯ ಆಗಸ್ಟ್ 2 ರಂದು ಮಧ್ಯಾಹ್ನ 12:30 ಕ್ಕೆ ನಡೆಯಲಿದೆ. ಮನು ಈ ಸ್ಪರ್ಧೆಯಲ್ಲಿ ಪದಕ ಗೆಲ್ಲುವ ಪ್ರಬಲ ಸ್ಪರ್ಧಿ ಎಂದು ಪರಿಗಣಿಸಲಾಗಿದೆ. ಒಂದು ವೇಳೆ ಮನು ಪದಕ ಗೆಲ್ಲುವಲ್ಲಿ ಯಶಸ್ವಿಯಾದರೆ, ಇದು ಹೊಸ ದಾಖಲೆಯಾಗಲಿದೆ.
Updated on:Jul 30, 2024 | 3:33 PM

ಭಾರತದ ಮಹಿಳಾ ಶೂಟರ್ ಮನು ಭಾಕರ್ 2024 ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ದಾಖಲೆ ನಿರ್ಮಿಸಿದ್ದಾರೆ . ಮನು ಭಾಕರ್ ಒಂದೇ ಒಲಿಂಪಿಕ್ಸ್‌ನಲ್ಲಿ 2 ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮನು ಈ ಹಿಂದೆ 10 ಮೀಟರ್ ಏರ್ ಪಿಸ್ತೂಲ್ ಮಹಿಳೆಯರ ವಿಭಾಗದಲ್ಲಿ ಭಾರತಕ್ಕೆ ಕಂಚಿನ ಪದಕ ಗೆದ್ದಿದ್ದರು. ಈಗ ಅವರು ಸರಬ್ಜೋತ್ ಸಿಂಗ್ ಅವರೊಂದಿಗೆ ಟೀಮ್ ಈವೆಂಟ್‌ನಲ್ಲಿ ಮತ್ತೊಂದು ಕಂಚಿನ ಪದಕ ಗೆದ್ದಿದ್ದಾರೆ.

ಮನು ಭಾಕರ್ ಅವರ ಈ ಸಾಧನೆಗೆ ಇಡೀ ದೇಶವೇ ಸಂಭ್ರಮಿಸುತ್ತಿದೆ. ಆದರೆ ಮನು ಭಾಕರ್ ಮತ್ತೊಂದು ಪದಕ ಗೆಲ್ಲುವ ತಯಾರಿಯಲ್ಲಿದ್ದಾರೆ. ವಾಸ್ತವವಾಗಿ ಮನು ಭಾಕರ್ ಅವರು ಜುಲೈ 28 ರಂದು ತಮ್ಮ ಮೊದಲ ಪದಕವನ್ನು ಗೆದ್ದರು. ಈ ಗೆಲುವಿನೊಂದಿಗೆ ಭಾರತದ ಪದಕದ ಖಾತೆಯನ್ನೂ ತೆರೆದಿದ್ದರು.

ಈ ಮೂಲಕ ಮನು ಭಾಕರ್ ಅವರು ಒಲಿಂಪಿಕ್ಸ್‌ನಲ್ಲಿ ಶೂಟಿಂಗ್ ಸ್ಪರ್ಧೆಯಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಇದೀಗ ಮನು 10 ಮೀಟರ್ ಏರ್ ಪಿಸ್ತೂಲ್‌ನ ಟೀಮ್ ಈವೆಂಟ್‌ನಲ್ಲಿ ಸರಬ್ಜೋತ್ ಸಿಂಗ್ ಅವರೊಂದಿಗೆ ಕಂಚಿನ ಪದಕ್ಕೆ ಕೊರಳ್ಳೊಡಿದ್ದಾರೆ.

ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್ ಜೋಡಿ ದಕ್ಷಿಣ ಕೊರಿಯಾ ತಂಡವನ್ನು 16-10 ಅಂತರದಿಂದ ಸೋಲಿಸಿ ಕಂಚಿನ ಪದಕವನ್ನು ಗೆದ್ದುಕೊಂಡಿತು. ಈ ಪದಕ ಗೆಲ್ಲುವ ಮೂಲಕ ಮನು ಒಲಿಂಪಿಕ್ಸ್‌ನ ಒಂದೇ ಆವೃತ್ತಿಯಲ್ಲಿ 2 ಪದಕ ಗೆದ್ದ ಭಾರತದ ಮೊದಲ ಸ್ಪರ್ಧಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಈ ಹಿಂದೆ ಕುಸ್ತಿಪಟು ಸುಶೀಲ್ ಕುಮಾರ್ ಹಾಗೂ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಗೆದ್ದ ಸಾಧನೆ ಮಾಡಿದ್ದರು. ಆದರೆ ಅವರು ವಿವಿಧ ಆವೃತ್ತಿಗಳಲ್ಲಿ ಈ ಪದಕ ಗೆದ್ದಿದ್ದರು. ಸುಶೀಲ್ ಕುಮಾರ್ 2008ರಲ್ಲಿ ಕಂಚಿನ ಪದಕ ಹಾಗೂ 2012ರಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. ಹಾಗೆಯೇ ಪಿವಿ ಸಿಂಧು 2016ರಲ್ಲಿ ಬೆಳ್ಳಿ ಹಾಗೂ 2021ರಲ್ಲಿ ಕಂಚಿನ ಪದಕ ಗೆದ್ದಿದ್ದರು.

ಇನ್ನು ಮನು ಭಾಕರ್ ಪ್ಯಾರಿಸ್ ಒಲಿಂಪಿಕ್ಸ್ಗೆ 3 ಸ್ಪರ್ಧೆಗಳಲ್ಲಿ ಅರ್ಹತೆ ಪಡೆದಿದ್ದರು. ಈಗ ಅವರು ಆಗಸ್ಟ್ 2 ರಂದು 25 ಮೀಟರ್ ಏರ್ ಪಿಸ್ತೂಲ್ ಶೂಟಿಂಗ್ ಈವೆಂಟ್‌ನಲ್ಲಿ ಆಡಲಿದ್ದಾರೆ. ಈ ಪಂದ್ಯ ಆಗಸ್ಟ್ 2 ರಂದು ಮಧ್ಯಾಹ್ನ 12:30 ಕ್ಕೆ ನಡೆಯಲಿದೆ. ಮನು ಈ ಸ್ಪರ್ಧೆಯಲ್ಲಿ ಪದಕ ಗೆಲ್ಲುವ ಪ್ರಬಲ ಸ್ಪರ್ಧಿ ಎಂದು ಪರಿಗಣಿಸಲಾಗಿದೆ. ಒಂದು ವೇಳೆ ಮನು ಪದಕ ಗೆಲ್ಲುವಲ್ಲಿ ಯಶಸ್ವಿಯಾದರೆ, ಇದು ಹೊಸ ದಾಖಲೆಯಾಗಲಿದೆ.
Published On - 3:30 pm, Tue, 30 July 24




