Pathaan Teaser: ಧೂಳೆಬ್ಬಿಸುತ್ತಿದೆ ‘ಪಠಾಣ್’ ಟೀಸರ್; ಶಾರುಖ್ ಖಾನ್ ಅವತಾರ ಕಂಡು ಫ್ಯಾನ್ಸ್ ಫಿದಾ
TV9 Web | Updated By: ಮದನ್ ಕುಮಾರ್
Updated on:
Nov 02, 2022 | 3:21 PM
Shah Rukh Khan | Deepika Padukone: 2023ರ ಜನವರಿ 25ರಂದು ವಿಶ್ವಾದ್ಯಂತ ‘ಪಠಾಣ್’ ಚಿತ್ರ ಬಿಡುಗಡೆ ಆಗಲಿದೆ. ಶಾರುಖ್ ಖಾನ್ ಜನ್ಮದಿನದ ಪ್ರಯುಕ್ತ ರಿಲೀಸ್ ಆಗಿರುವ ಟೀಸರ್ ಗಮನ ಸೆಳೆಯುತ್ತಿದೆ.
1 / 5
ಶಾರುಖ್ ಖಾನ್ ಅವರ 57ನೇ ವರ್ಷದ ಜನ್ಮದಿನದ ಪ್ರಯುಕ್ತ ‘ಪಠಾಣ್’ ಚಿತ್ರದ ಟೀಸರ್ ಬಿಡುಗಡೆ ಆಗಿದೆ. ಕೆಲವೇ ನಿಮಿಷಗಳಲ್ಲಿ ಈ ಟೀಸರ್ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ. ಆ ಮೂಲಕ ಹೈಪ್ ಹೆಚ್ಚಿದೆ.
2 / 5
‘ಪಠಾಣ್’ ಟೀಸರ್ನಲ್ಲಿನ ಸಾಹಸ ದೃಶ್ಯಗಳನ್ನು ನೋಡಿ ಅಭಿಮಾನಿಗಳು ವಾವ್ ಎನ್ನುತ್ತಿದ್ದಾರೆ. ಈ ಚಿತ್ರದಿಂದ ಶಾರುಖ್ ಖಾನ್ ಅವರು ಭರ್ಜರಿಯಾಗಿ ಕಮ್ ಬ್ಯಾಕ್ ಮಾಡುವುದು ಖಚಿತವಾಗಿದೆ.
3 / 5
ಈ ಚಿತ್ರಕ್ಕೆ ಸಿದ್ದಾರ್ಥ್ ಆನಂದ್ ನಿರ್ದೇಶನ ಮಾಡಿದ್ದಾರೆ. ಮುಖ್ಯ ಪಾತ್ರದಲ್ಲಿ ದೀಪಿಕಾ ಪಡುಕೋಣೆ ಕೂಡ ಬಣ್ಣ ಹಚ್ಚಿದ್ದಾರೆ. ಅವರ ಪಾತ್ರದ ಬಗ್ಗೆ ತಿಳಿದುಕೊಳ್ಳಲು ಫ್ಯಾನ್ಸ್ ಕಾತುರರಾಗಿದ್ದಾರೆ.
4 / 5
2023ರ ಜನವರಿ 25ರಂದು ವಿಶ್ವಾದ್ಯಂತ ‘ಪಠಾಣ್’ ಚಿತ್ರ ಬಿಡುಗಡೆ ಆಗಲಿದೆ. ಈ ಸಿನಿಮಾಗಾಗಿ ಶಾರುಖ್ ಅವರು ಸಿಕ್ಕಾಪಟ್ಟೆ ಶ್ರಮಪಟ್ಟಿದ್ದಾರೆ. ಸಿಕ್ಸ್ ಪ್ಯಾಕ್ಸ್ ಗೆಟಪ್ನಲ್ಲಿ ಫೈಟ್ ಮಾಡಿದ್ದಾರೆ.
5 / 5
ಈ ಚಿತ್ರದಲ್ಲಿ ಆ್ಯಕ್ಷನ್ ಝಲಕ್ ಹೇಗಿರಲಿದೆ ಎಂಬುದು ಈ ಟೀಸರ್ ನೋಡಿದರೆ ತಿಳಿಯುತ್ತದೆ. ಜಾನ್ ಅಬ್ರಹಾಂ ಮತ್ತು ಶಾರುಖ್ ಖಾನ್ ನಡುವಿನ ಮುಖಾಮುಖಿ ದೃಶ್ಯಗಳು ಪ್ರೇಕ್ಷಕರಿಗೆ ಮಸ್ತ್ ಮನರಂಜನೆ ನೀಡಲಿವೆ ಎಂದು ಎಲ್ಲರೂ ನಿರೀಕ್ಷಿಸುತ್ತಿದ್ದಾರೆ.