Matthe Maduve: ‘ಮತ್ತೆ ಮದುವೆ’ ಬಗ್ಗೆ ಮಾತನಾಡುತ್ತಾ ಖುಷಿ ಖುಷಿಯಾಗಿ ಕಾಣಿಸಿಕೊಂಡ ಪವಿತ್ರಾ ಲೋಕೇಶ್​-ನರೇಶ್​; ಇಲ್ಲಿದೆ ಫೋಟೋ ಗ್ಯಾಲರಿ

Pavithra Lokesh Naresh Press Meet: ‘ಮತ್ತೆ ಮದುವೆ’ ಸಿನಿಮಾವನ್ನು ನರೇಶ್ ಅವರೇ ನಿರ್ಮಾಣ ಮಾಡಿದ್ದಾರೆ. ಹೀರೋ ಆಗಿ ನಟಿಸಿರುವ ಅವರಿಗೆ ಪವಿತ್ರಾ ಲೋಕೇಶ್​ ಜೋಡಿ ಆಗಿದ್ದಾರೆ. ಕನ್ನಡದಲ್ಲಿ ಜೂನ್ 9ರಂದು ರಿಲೀಸ್​ ಆಗಲಿದೆ.

ಮದನ್​ ಕುಮಾರ್​
|

Updated on: Jun 05, 2023 | 7:15 AM

ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಗಮನಸೆಳೆದಿದ್ದ ‘ಮತ್ತೆ ಮದುವೆ’ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಜೂನ್ 9ಕ್ಕೆ ರಾಜ್ಯಾದ್ಯಂತ ಚಿತ್ರ ರಿಲೀಸ್ ಆಗಲಿದೆ. ಮೇ‌ 26ರಂದು ತೆಲುಗಿನಲ್ಲಿ ‘ಮಳ್ಳಿ ಪೆಳ್ಳಿ’ ಟೈಟಲ್​ನಡಿ ತೆರೆಕಂಡ ಈ ಸಿನಿಮಾಗೆ ಯಶಸ್ಸು ಸಿಕ್ಕಿದೆ. ಇದರ ಬೆನ್ನಲ್ಲೇ ಕನ್ನಡದಲ್ಲಿ ಚಿತ್ರ ಬಿಡುಗಡೆಯಾಗುತ್ತಿದ್ದು, ಪವಿತ್ರಾ ಲೋಕೇಶ್​ ಹಾಗೂ ನರೇಶ್ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ.

1 / 5
ಶನಿವಾರ (ಜೂನ್​ 3) ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರಾ ಲೋಕೇಶ್​ ಹಾಗೂ ನರೇಶ್ ಅವರು ಖುಷಿ ಖುಷಿಯಾಗಿ ಕಾಣಿಸಿಕೊಂಡರು. ‘ಮತ್ತೆ ಮದುವೆ’ ಬಗ್ಗೆ ಸಾಕಷ್ಟು ವಿಷಯ ಹಂಚಿಕೊಂಡರು. ನರೇಶ್ ಮಾತನಾಡಿ, ‘ಈಗಾಗಲೇ ತೆಲುಗಿನಲ್ಲಿ ಸಿನಿಮಾ ಬಿಡುಗಡೆಯಾಗಿ ಪ್ರೇಕ್ಷಕರನ್ನು ರಂಜಿಸಿದೆ. ಮತ್ತೆ‌ ಮದುವೆ ಒಳ್ಳೆಯ ಕಂಟೆಂಟ್ ಇರುವ ಸಿನಿಮಾ. ಸಮಾಜದಲ್ಲಿ ಗಂಡ-ಹೆಂಡತಿ ಎದುರಿಸುತ್ತಿರುವ ಸಮಸ್ಯೆಗಳ ಕುರಿತ ಕಥಾಹಂದರವನ್ನು ಈ ಚಿತ್ರ ಹೊಂದಿದೆ’ ಎಂದರು.

2 / 5
‘ರಂಗಸ್ಥಳಂ, RRR, ಪುಷ್ಪ ಅಂತಹ ಪರಭಾಷೆಯ ಸಿನಿಮಾಗಳಿಗೆ ಕನ್ನಡದಲ್ಲಿ ಡಬ್ಬಿಂಗ್ ಜೊತೆಗೆ ಹಾಡುಗಳನ್ನ ಬರೆದಿರುವ ವರದರಾಜ್ ಚಿಕ್ಕಬಳ್ಳಾಪುರ ಅವರು ‘ಮತ್ತೆ ಮದುವೆ’ ಸಿನಿಮಾಗೆ ಬಹಳ ಅಚ್ಚುಕಟ್ಟಾಗಿ ಡಬ್ಬಿಂಗ್ ಜೊತೆಗೆ ಅದ್ಭುತ ಹಾಡುಗಳನ್ನ ಕನ್ನಡದಲ್ಲಿ ಬರೆದಿದ್ದಾರೆ. ಇವರ ಸಹಾಯದಿಂದ ಮತ್ತೆ ಮದುವೆ ಚಿತ್ರದ ನನ್ನ ಪಾತ್ರಕ್ಕೆ ನಾನೇ ಡಬ್ಬಿಂಗ್ ಮಾಡಿದ್ದೇನೆ’ ಎಂದರು ನರೇಶ್​.

3 / 5
ಪವಿತ್ರಾ‌ ಲೋಕೇಶ್ ಮಾತನಾಡಿ, ‘ವಿಜಯ್ ಕೃಷ್ಣ ಮೂವೀಸ್ ಬ್ಯಾನರ್​ನಲ್ಲಿ ಹಿಂದೆ ಬಂದ ಸಿನಿಮಾಗಳು ಮೆಸೇಜ್ ಓರಿಯೆಂಟೆಡ್ ಆಗಿದ್ದವು. ಸಮಾಜಕ್ಕೆ ಒಳ್ಳೆಯ ವಿಷಯ ತಲುಪಿಸುವ ಕೆಲಸ ಮಾಡಲಾಗಿತ್ತು. ಮತ್ತೊಂದು ಮೆಸೇಜ್ ಕೊಡುವಂತಹ ಸ್ಟ್ರಾಂಗ್ ಸಿನಿಮಾ ಮಾಡಬೇಕು ಎಂಬುವುದು ನರೇಶ್ ಅವರ ಉದ್ದೇಶವಾಗಿತ್ತು. ಮತ್ತೆ ಮದುವೆ ಕಥೆಯನ್ನು ಎಂ.ಎಸ್. ರಾಜು ಅವರು ತಂದಾಗ ಕನ್ನಡದಲ್ಲಿಯೂ ಮಾಡಬೇಕು ಅಂತ ತೀರ್ಮಾನ ಮಾಡಿದೆವು’ ಎಂದರು.

4 / 5
‘ಮತ್ತೆ ಮದುವೆ’ ಸಿನಿಮಾವನ್ನು ನರೇಶ್ ಅವರೇ ನಿರ್ಮಾಣ ಮಾಡಿದ್ದಾರೆ. ಅವರ ಬ್ಯಾನರ್‌ಗೆ ಭರ್ತಿ 50 ವರ್ಷ ತುಂಬಿದೆ. ಇದೊಂದು ಫ್ಯಾಮಿಲಿ ಎಂಟರ್ಟೈನ್ಮೆಂಟ್ ಸಿನಿಮಾವಾಗಿದೆ. ಜಯಸುಧ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ. ವನಿತಾ ವಿಜಯ್​ಕುಮಾರ್, ಅನನ್ಯಾ ನಾಗೆಲ್ಲ, ರೋಷನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ, ಮಧು ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.‌

5 / 5
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ