- Kannada News Photo gallery Pavitra Lokesh And Naresh starrer Malli Pelli Or Matte Maduve will be released on May 26
Matte Maduve: ಮೇ 26ರಂದು ‘ಮತ್ತೆ ಮದುವೆ’ ಆಗಲಿದ್ದಾರೆ ನರೇಶ್-ಪವಿತ್ರಾ ಲೋಕೇಶ್
ಟೀಸರ್ ಮೂಲಕ ಸಿನಿಮಾ ಎಲ್ಲರ ಗಮನ ಸೆಳೆದಿದೆ. ಈಗ ಚಿತ್ರದ ರಿಲೀಸ್ ದಿನಾಂಕ ರಿವೀಲ್ ಆಗಿದೆ.
Updated on: May 04, 2023 | 6:30 AM

ಟಾಲಿವುಡ್ ನಟನ ನರೇಶ್ ಹಾಗೂ ಪವಿತ್ರಾ ಲೋಕೇಶ್ ಸದ್ಯ ಸುದ್ದಿಯಲ್ಲಿದ್ದಾರೆ. ಇವರ ಮಧ್ಯೆ ಪ್ರೇಮ ಚಿಗುರಿದೆ ಎನ್ನಲಾಗಿತ್ತು. ಇದಕ್ಕೆ ನರೇಶ್ ಪತ್ನಿ ರಮ್ಯಾ ರಘುಪತಿ ಅವರು ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದರು. ಈಗ ಇದೇ ವಿಚಾರ ಇಟ್ಟುಕೊಂಡು ‘ಮತ್ತೆ ಮದುವೆ’ ಸಿನಿಮಾ ಸಿದ್ಧಗೊಂಡಿದೆ.

ಟೀಸರ್ ಮೂಲಕ ಸಿನಿಮಾ ಎಲ್ಲರ ಗಮನ ಸೆಳೆದಿದೆ. ಈಗ ಚಿತ್ರದ ರಿಲೀಸ್ ದಿನಾಂಕ ರಿವೀಲ್ ಆಗಿದೆ. ಮೇ 26ರಂದು ಸಿನಿಮಾ ರಿಲೀಸ್ ಆಗಲಿದೆ. ಈ ವಿಚಾರವನ್ನು ಸೋಶಿಯಲ್ ಮೀಡಿಯಾ ಮೂಲಕ ತಂಡದವರು ಅಧಿಕೃತ ಮಾಡಿದ್ದಾರೆ.

ಪವಿತ್ರಾ ಲೋಕೇಶ್ ಹಾಗೂ ನರೇಶ್ ಮಧ್ಯೆ ಪ್ರೀತಿ ಚಿಗುರಿದೆ ಎನ್ನುವ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಈ ವಿಚಾರದಲ್ಲಿ ನರೇಶ್ ಹಾಗೂ ಅವರ ಪತ್ನಿ ರಮ್ಯಾ ಕಿತ್ತಾಡಿಕೊಂಡಿದ್ದರು. ಮೈಸೂರಿನಲ್ಲಿ ನರೇಶ್ ಹಾಗೂ ಪವಿತ್ರಾ ಲೋಕೇಶ್ ಒಟ್ಟಾಗಿ ಇದ್ದಾಗ ಅಲ್ಲಿಗೆ ರಮ್ಯಾ ರಘುಪತಿ ಬಂದಿದ್ದರು. ಈ ವೇಳೆ ಸಿಳ್ಳೆ ಹೊಡೆದು ನರೇಶ್ ಓಡಿದ್ದರು. ಇದನ್ನು ಟೀಸರ್ನಲ್ಲಿ ತೋರಿಸಲಾಗಿದೆ.

ಮದುವೆ ದೃಶ್ಯವನ್ನು ಪೋಸ್ಟ್ ಮಾಡಿ, ‘ಹೊಸ ಪಯಣ. ಶಾಂತಿ ಮತ್ತು ನೆಮ್ಮದಿಯ ಜೀವನಕ್ಕೆ ನಿಮ್ಮ ಆಶೀರ್ವಾದ ಇರಲಿ. ಒಂದು ಪವಿತ್ರ ಬಂಧ. ಎರಡು ಮನಸ್ಸುಗಳು, ಏಳು ಹೆಜ್ಜೆಗಳು, ನಿಮ್ಮ ಆಶೀರ್ವಾದವನ್ನು ಕೋರಿ. ನಿಮ್ಮ ಪವಿತ್ರಾ ನರೇಶ್’ ಎಂದು ನರೇಶ್ ಟ್ವೀಟ್ ಮಾಡಿದ್ದರು.

ಕನ್ನಡ ಹಾಗೂ ತೆಲುಗಿನಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ. ತೆಲುಗಿನಲ್ಲಿ ಈ ಚಿತ್ರಕ್ಕೆ ‘ಮಳ್ಳಿ ಪೆಲ್ಲಿ’ ಎಂದು ಹೆಸರು ಇಡಲಾಗಿದೆ. ಸಿನಿಮಾದಲ್ಲಿ ಇನ್ನೂ ಏನೆಲ್ಲ ಇರಬಹುದು ಎನ್ನುವ ಕುತೂಹಲ ಮೂಡಿದೆ.



















