Updated on:May 18, 2022 | 9:55 AM
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ಧಾರಾಕಾರ ಮಳೆಯಾಗಿದೆ. ಬಿರುಗಾಳಿ ಸಹಿತ ಭಾರಿ ಮಳೆಗೆ ಗೂಡಂಗಡಿಗಳು ಉರುಳಿ ಬಿದ್ದಿವೆ.
ಬೆಂಗಳೂರಿನ ಬಸವೇಶ್ವರನಗರದಲ್ಲಿ ಮಳೆಯ ನೀರು ಮನೆಗಳಿಗೆ ನುಗ್ಗಿದೆ. ರಸ್ತೆಗಳಲ್ಲೂ ನೀರು ಹರಿದ ಪರಿಣಾಮ ವಾಹನ ಸವಾರರು ಪರದಾಡಿದ್ದಾರೆ.
ಬೆಂಗಳೂರಿನ ಕಾಟನ್ ಪೇಟೆಯಲ್ಲಿ ಮಳೆ ಅವಾಂತರಕ್ಕೆ ಜನರು ಹೈರಾಣಾಗಿದ್ದಾರೆ. ನೀರು ಮನೆಗಳಿಗೆ ನುಗ್ಗಿದೆ.
ಮಳೆ ಅವಾಂತರಕ್ಕೆ ಮರ ನೆಲಕ್ಕುರುಳಿದೆ. ಪ್ರಮುಖ ರಸ್ತೆಯಲ್ಲಿಯೇ ಮರ ಬಿದ್ದು ಸಮಸ್ಯೆಯಾಗಿದೆ.
ವಡ್ಡರಪಾಳ್ಯದಲ್ಲೂ ಮನೆಗಳಿಗೆ ನೀರು ನುಗ್ಗಿದೆ. ಭಾರೀ ಪ್ರಮಾಣದ ನೀರಿಗೆ ಜನರು ಹೈರಾಣಾಗಿದ್ದಾರೆ.
ಹಾಸನ ಜಿಲ್ಲಾದ್ಯಂತ ನಿನ್ನೆ ರಾತ್ರಿಯಿಂದ ಧಾರಾಕಾರ ಮಳೆ ಸುರಿದಿದೆ. ನಿರಂತರ ಮಳೆ ಹಿನ್ನೆಲೆ ಹಿರಿಸಾವೆ ದೊಡ್ಡ ಕೆರೆ ಕೋಡಿ ಬಿದ್ದಿದೆ.
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನಲ್ಲಿ ಕೆರೆಗಳು ತುಂಬಿ ಕೋಡಿ ಹರಿಯುತ್ತಿವೆ. ಮಳೆಗೆ ತುಂಬಿ ಹರಿಯುತ್ತಿರುವ ಕೆರೆ ಕಟ್ಟೆಗಳನ್ನ ಕಂಡು ರೈತರ ಮುಖದಲ್ಲಿ ಸಂತಸ ಮೂಡಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. ಮುಂಡಗೋಡ, ಕುಮಟಾದಲ್ಲಿ ಮರ ಬಿದ್ದು ಮನೆಗಳಿಗೆ ಹಾನಿಯಾಗಿದೆ.
ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಮಳೆ ಆರ್ಭಟಕ್ಕೆ ಹಲವು ಮನೆಗಳಿಗೆ ಚರಂಡಿ ನೀರು ನುಗ್ಗಿದೆ. ರಸ್ತೆಯಲ್ಲಿ ಓಡಾಡಲೂ ಆಗುತ್ತಿಲ್ಲವೆಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯದಲ್ಲಿ ರಾತ್ರಿಯಿಡಿ ಸುರಿದ ಮಳೆಯಿಂದ ರಾಜಕಾಲುವೆ ಬ್ಲಾಕ್ ಆಗಿದೆ.
Published On - 9:51 am, Wed, 18 May 22