
ಇಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಹುಟ್ಟುಹಬ್ಬ. ಈ ಹಿನ್ನೆಲೆ ಯಡಿಯೂರಪ್ಪ ಅವರು ಬೆಂಗಳೂರಿನ ಸಂಜಯನಗರದಲ್ಲಿರುವ ರಾಧಾಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಯಡಿಯೂರಪ್ಪ ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ ಗೋವಿಗೆ ಬಾಳೆಹಣ್ಣು ತಿನ್ನಿಸಿದರು.

ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಬೃಹತ್ ಗಾತ್ರದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಯಡಿಯೂರಪ್ಪ, ತನ್ನ ಪುತ್ರನಿಗೆ ಕೇಕ್ ತಿನ್ನಿಸಿದರು.

ಕುಟುಂಬಸ್ಥರು ಯಡಿಯೂರಪ್ಪ ಅವರಿಗೆ ಆರತಿ ಬೆಳಗಿ ಹುಟ್ಟುಹಬ್ಬದ ಶುಭಕೋರಿದರು.