ವಿದೇಶದ ಅತಿ ದೊಡ್ಡ ಹಿಂದೂ ದೇಗುಲ ಉದ್ಘಾಟನೆಗೆ ಸಿದ್ಧ, ಎಲ್ಲಿದೆ ಈ ದೇವಸ್ಥಾನ? ಏನೆಲ್ಲಾ ವಿಶೇಷತೆಗಳಿವೆ? ಇಲ್ಲಿದೆ ವಿವರ

| Updated By: ರಮೇಶ್ ಬಿ. ಜವಳಗೇರಾ

Updated on: Sep 25, 2023 | 10:24 AM

ಭಾರತದ ಹೊರಗೆ ಅಂದರೆ ವಿದೇಶದಲ್ಲಿ ನಿರ್ಮಿಸಲಾಗುತ್ತಿರುವ ಅತಿ ದೊಡ್ಡ ಹಿಂದೂ ದೇವಾಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಮೆರಿಕದ ನ್ಯೂ ಜೆರ್ಸಿಯ ಸ್ವಾಮಿ ನಾರಾಯಣ ದೇಗುಲ ಬಹುತೇಕ ಪೂರ್ಣಗೊಂಡಿದ್ದು, ಅಕ್ಟೋಬರ್ 8ರಂದು ಉದ್ಘಾಟನೆಗೆ ಸಿದ್ಧವಾಗಿದೆ. ಹಾಗಾದ್ರೆ, ಈ ದೇಗುಲ ಹೇಗಿದೆ. ಏನೆಲ್ಲ ವಿಶೇಷತೆಗಳಿವೆ ಎನ್ನುವ ವಿವರ ಇಲ್ಲಿದೆ.

1 / 6
 ಅತಿ ದೊಡ್ಡ ಹಿಂದೂ ದೇವಾಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಮೆರಿಕದ ಅಮೆರಿಕಾದ ನ್ಯೂ ಜೆರ್ಸಿಯ ಸ್ವಾಮಿ ನಾರಾಯಣ ದೇಗುಲ ಬಹುತೇಕ ಪೂರ್ಣಗೊಂಡಿದ್ದು, ಅಕ್ಟೋಬರ್ 8 ರಂದು ಉದ್ಘಾಟನೆಯಾಗಲಿದೆ.

2 / 6
ನ್ಯೂ ಜೆರ್ಸಿಯ ರಾಬಿನ್ಸ್‌ವಿಲ್ಲೆಯಲ್ಲಿ  ಬರೋಬ್ಬರಿ 183 ಎಕರೆ ಜಾಗದಲ್ಲಿರುವ ಸ್ವಾಮಿನಾರಾಯಣ ದೇವಸ್ಥಾನವನ್ನು 2011ರಿಂದ 2023ರವರೆಗಿನ 12 ವರ್ಷಗಳ ಅವಧಿಯಲ್ಲಿ ಸುಮಾರು 12,500 ಸ್ವಯಂಸೇವಕರು ನಿರ್ಮಿಸಿದ್ದಾರೆ.

3 / 6
ಇದನ್ನು ಪ್ರಾಚೀನ ಹಿಂದೂ ಧರ್ಮಗ್ರಂಥ ಪ್ರಕಾರ ಸ್ಥಾಪಿಸಲಾಗಿದ್ದು, ದೇವಸ್ಥಾನದಲ್ಲಿ ಪ್ರತಿಮೆಗಳು, ಭಾರತೀಯ ಸಂಗೀತ ವಾದ್ಯಗಳು, ಭಾರತೀಯ ಸಂಸ್ಕ್ರತಿ ಮತ್ತು ನೃತ್ಯ ಪ್ರಕಾರದ ಕೆತ್ತನೆಗಳು ಸೇರಿದಂತೆ ಸುಮಾರು 10,000 ಕೆತ್ತನೆಗಳು ಅಥವಾ ಪ್ರತಿಮೆಗಳನ್ನು ಒಳಗೊಂಡಿದೆ.

4 / 6
ಈ ದೇವಾಲಯವು ಕಾಂಬೋಡಿಯಾದಲ್ಲಿರುವ ವಿಶ್ವದ ಅತಿ ದೊಡ್ಡ ಹಿಂದೂ ದೇವಾಲಯವಾದ ಪುರಾತನ ಅಂಕೋರ್‌ ವಾಟ್‌ ನಂತರದ 2ನೇ ದೊಡ್ಡ ದೇವಾಲಯವಾಗಿದೆ ಎನ್ನಲಾಗಿದೆ.

5 / 6
ಅಂಕೋರ್‌ವಾಟ್‌  ದೇಗುಲ 500 ಮೀ. ಪ್ರದೇಶದಲ್ಲಿದೆ. ಸ್ವಾಮಿನಾರಾಯಣ ದೇವಾಲಯವನ್ನು ಸುಣ್ಣದ ಕಲ್ಲು, ಗುಲಾಬಿ ಮರಳುಗಲ್ಲು, ಅಮೃತ ಶಿಲೆ ಮತ್ತು ಗ್ರಾನೈಟ್‌ಗಳಿಂದ ನಿರ್ಮಿಸಲಾಗಿದೆ.

6 / 6
ಇದು ಮುಖ್ಯ ದೇವಾಲಯದ ಹೊರತುಪಡಿಸಿ ಒಟ್ಟು 12 ಉಪ ದೇಗುಲಗಳನ್ನು ಹೊಂದಿದೆ. ಔಪಚಾರಿಕವಾಗಿ ದೇವಸ್ಥಾನ ಉದ್ಘಾಟನೆಯಾಗದಿದ್ದರೂ ಈಗಾಗಲೇ ಹಿಂದೂಗಳು ಸೇರಿದಂತೆ ಇತರ ಧರ್ಮೀಯರು ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ.