AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi at White House; ಶ್ವೇತಭವನದಲ್ಲಿ ಮೋದಿ ಮೋಡಿ; ಚಿತ್ರಗಳು ಇಲ್ಲಿವೆ ನೋಡಿ

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ಶ್ವೇತಭವನದಲ್ಲಿ ಭಾರತೀಯರ ಸಮುದಾಯದವರು ಹಾಗೂ ಇತರ ಗಣ್ಯರನ್ನು ಉದ್ದೇಶಿಸಿ ಮಾತನಾಡಿದರು. ಅಮೆರಿಕದ ಅಧ್ಯಕ್ಷ ಜೋ ಬೈಡನ್ ದಂಪತಿ ಹಾಗೂ ಇತರ ಸಚಿವರಿಂದ ಮೋದಿ ಅವರಿಗೆ ಆತ್ಮೀಯ ಸ್ವಾಗತ ದೊರೆಯಿತು. ನಂತರ ಉಭಯ ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸಿದರು. ಚಿತ್ರಗಳು ಇಲ್ಲಿವೆ ನೋಡಿ.

ಗಣಪತಿ ಶರ್ಮಾ
|

Updated on: Jun 22, 2023 | 9:24 PM

Share
PM Modi at White House with Joe Biden First lady Jill Biden US ministers and Indian community people see photos here

ಅಮೆರಿಕ ಅಧ್ಯಕ್ಷ ಜೋ ಬೈಡನ್ ಮಾತನಾಡಿದ ನಂತರ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಬೈಡನ್ ಅವರನ್ನು ತಬ್ಬಿಕೊಂಡರು. ಶ್ವೇತಭವನದಲ್ಲಿ ಪ್ರಧಾನಿ ಮೋದಿ ಅವರು ಎರಡನೇ ಬಾರಿಗೆ ಭಾಷಣ ಮಾಡಿದ್ದಾರೆ.

1 / 6
PM Modi at White House with Joe Biden First lady Jill Biden US ministers and Indian community people see photos here

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರಿಗೆ ಹಸ್ತಲಾಘವ ಮಾಡಿದರು. ನಂತರ ಮಾತನಾಡಿದ ಮೋದಿ ಅವರು, ಅಮೆರಿಕದಲ್ಲಿರುವ ಭಾರತೀಯ ಸಮುದಾಯದವರನ್ನು ಕೊಂಡಾಡಿದರು.

2 / 6
PM Modi at White House with Joe Biden First lady Jill Biden US ministers and Indian community people see photos here

ಅಮೆರಿಕದ ಪ್ರಥಮ ಮಹಿಳೆ ಜಿಲ್ ಬಿಡೆನ್, ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಜೋ ಬೈಡನ್ ಅವರು ಶ್ವೇತಭವನದ ಬಾಲ್ಕನಿಯಿಂದ ನೆರೆದಿದ್ದ ಗಣ್ಯರು, ಭಾರತೀಯ ಸಮುದಾಯದವರತ್ತ ಕೈಬೀಸಿ ಹಾರೈಸಿದರು.

3 / 6
PM Modi at White House with Joe Biden First lady Jill Biden US ministers and Indian community people see photos here

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ಅಲ್ಲಿನ ಮಂತ್ರಿಗಳು ಮತ್ತು ಅಧಿಕಾರಿಗಳನ್ನು ಪರಿಚಯಿಸಿದರು.

4 / 6
PM Modi at White House with Joe Biden First lady Jill Biden US ministers and Indian community people see photos here

ಮೂರು ದಶಕದ ಹಿಂದೆ ನಾನು ಸಾಮಾನ್ಯ ವ್ಯಕ್ತಿಯಾಗಿ ಅಮೇರಿಕಾ ಪ್ರವಾಸಕ್ಕೆ ಬಂದಿದ್ದೆ. ಆಗ ವೈಟ್ ಹೌಸ್ ಅನ್ನು ಹೊರಗಡೆಯಿಂದ ನೋಡಿದ್ದೆ. ಈಗ ಪ್ರಧಾನಿಯಾಗಿ ಇಲ್ಲಿಗೆ ಬಂದಿದ್ದೇನೆ. ಮೊದಲ ಬಾರಿಗೆ ಇಷ್ಟು ಪ್ರಮಾಣದ ಭಾರತೀಯರನ್ನು ನೋಡುತ್ತಿದ್ದೇನೆ. ಭಾರತೀಯ ಸಮುದಾಯದ ಜನರು ತಮ್ಮ ಜ್ಞಾನ, ಶಕ್ತಿ, ಸಾಮರ್ಥ್ಯ, ನಿಷ್ಠೆಯಿಂದ ಅಮೇರಿಕಾದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಮೋದಿ ಭಾಷಣದಲ್ಲಿ ಬಣ್ಣಿಸಿದರು.

5 / 6
PM Modi at White House with Joe Biden First lady Jill Biden US ministers and Indian community people see photos here

ಪ್ರಧಾನಿ ಮೋದಿ ಅವರು ಭಾಷಣ ಮಾಡುತ್ತಿರುವಾಗ ಜೋ ಬೈಡನ್ ಅವರು ವೀಕ್ಷಿಸುತ್ತಿದ್ದಾರೆ. ಭಾರತೀಯ ಸಮುದಾಯದವರು ಹಾಗೂ ಗಣ್ಯರು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.

6 / 6
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್

‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ

ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು

ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ

ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ

ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ

ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ

ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ

ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ