AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Ayodhya: ರಾಮನ ನಾಡಿಗೆ ನಮೋ, ಅಯೋಧ್ಯೆಯಲ್ಲಿ ಮೋದಿ ಮೇಗಾ ರೋಡ್​ ಶೋ

ಇದೇ ವರ್ಷ ಜನವರಿ 22 ರಂದು ಧರ್ಮಭೂಮಿ ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ನೆರವೇರಿತು. ಪ್ರಧಾನಿ ನರೇಂದ್ರ ಮೋದಿಯವರು ಮನೆ ಯಜಮಾನ ಹಾಗೆ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿದರು. ಶ್ರೀರಾಮನ ಪ್ರಾಣ ಪ್ರತಿಷ್ಠಪನೆ ನೆರವೇರಿಸಿದ ಬಳಿಕ ಪ್ರಧಾನಿ ಮೋದಿ ಇದೇ ಮೊದಲ ಬಾರಿಗೆ ಮತ್ತೆ ಅಯೋಧ್ಯೆಗೆ ಭೇಟಿ ನೀಡಿದ್ದಾರೆ.

ವಿವೇಕ ಬಿರಾದಾರ
|

Updated on:May 06, 2024 | 12:03 AM

Share
PM Narendra Modi visit Ayodhya and mega roadshow

ಜನವರಿ 22 ರಂದು ಧರ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆ ನೆರವೇರಿತು. ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ಇಂದು (ಮೇ 05) ಮೊದಲ ಬಾರಿಗೆ ಅಯೋಧ್ಯೆಗೆ ಭೇಟಿ ನೀಡಿದರು.

1 / 10
PM Narendra Modi visit Ayodhya and mega roadshow

ಅಯೋಧ್ಯೆಗೆ ಬಂದಿಳಿದ ಪ್ರಧಾನಿ ಮೋದಿ ನೇರವಾಗಿ ಶ್ರೀರಾಮನ ದೇವಸ್ಥಾನಕ್ಕೆ ತೆರಳಿ ಬಾಲರಾಮನಿಗೆ ಪೂಜೆ ಸಲ್ಲಿಸಿ ದರ್ಶನ ಪಡೆದರು. ಪ್ರಧಾನಿ ಮೋದಿ ಆಗಮನ ಹಿನ್ನೆಲೆಯಲ್ಲಿ ರಾಮ ಮಂದಿರವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು.

2 / 10
PM Narendra Modi visit Ayodhya and mega roadshow

ಬಾಲರಾಮ ರಾಮನ ದರ್ಶನ ಪಡೆದುಕೊಂಡ ಬಳಿಕ ಪ್ರಧಾನಿ ಮೋದಿ ಶ್ರೀರಾಮನ ದೇವಸ್ಥಾನದ ದ್ವಾರದಿಂದ ಲತಾ ಮಂಗೇಶ್ಕರ್ ಚೌಕ್ ವರೆಗೆ ರೋಡ್​ ಶೋ ನಡೆಸಿದರು.

3 / 10
PM Narendra Modi visit Ayodhya and mega roadshow

ಎರಡು ಕಿಮೀ ಉದ್ದ ರೋಡ್​​ ಶೋನಲ್ಲಿ ಪ್ರಧಾನಿ ಮೋದಿಯವರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಅಯೋಧ್ಯೆ ಫೈಜಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಲಲ್ಲು ಸಿಂಗ್ ಸಾಥ್​ ನೀಡಿದರು.

4 / 10
PM Narendra Modi visit Ayodhya and mega roadshow

ರೋಡ್ ಶೋ ಪ್ರಾರಂಭವಾಗುವ ಮತ್ತು ಕೊನೆಗೊಳ್ಳುವ ಸ್ಥಳಗಳನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಪ್ರಧಾನಿ ಮೋದಿ ಅವರನ್ನು ಅಯೋಧ್ಯೆಯ ಜನರು ಅದ್ಧೂರಿಯಾಗಿಯೇ ಸ್ವಾಗತಿಸಿದರು.

5 / 10
PM Narendra Modi visit Ayodhya and mega roadshow

ಎರಡು ಕಿಮೀ ಉದ್ದದ ರೋಡ್​ ಶೋನಲ್ಲಿ ಪ್ರಧಾನಿ ಮೋದಿಯವರು ಅಯೋಧ್ಯೆ ಫೈಜಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಲಲ್ಲು ಸಿಂಗ್ ಪರ ಮತಯಾಚಿಸಿದರು.

6 / 10
PM Narendra Modi visit Ayodhya and mega roadshow

ರೋಡ್​ ಶೋ ವೇಳೆ ಪ್ರಧಾನಿ ಮೋದಿಯವರಿಗೆ ಮಹಿಳೆಯರು ಆರತಿ ಮಾಡಿ ಹರಸಿದರು.

7 / 10
PM Narendra Modi visit Ayodhya and mega roadshow

ಪ್ರಧಾನಿ ಮೋದಿಯವರನ್ನು ನೋಡಲು ರಸ್ತೆ ಅಕ್ಕ-ಪಕ್ಕದಲ್ಲಿ ಸಾಕಷ್ಟು ಜನರು ಸೇರಿದ್ದರು.

8 / 10
PM Narendra Modi visit Ayodhya and mega roadshow

ಅಯೋಧ್ಯೆಯ ಜನರ ಹೃದಯವು ಶ್ರೀರಾಮನಷ್ಟೇ ದೊಡ್ಡದು. ರೋಡ್ ಶೋನಲ್ಲಿ ಆಶೀರ್ವಾದ ನೀಡಲು ಆಗಮಿಸಿದ್ದ ಸಾರ್ವಜನಿಕರಿಗೆ ಪ್ರಧಾನಿ ಮೋದಿ ಟ್ವೀಟ್​ ಮೂಲಕ ಧನ್ಯವಾದ ಹೇಳಿದರು.

9 / 10
PM Narendra Modi visit Ayodhya and mega roadshow

ಮೇ 20 ರಂದು ಐದನೇ ಹಂತದಲ್ಲಿ ಅಯೋಧ್ಯೆಯಲ್ಲಿ ಮತದಾನ ನಡೆಯಲಿದೆ.

10 / 10

Published On - 12:01 am, Mon, 6 May 24

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ