AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇನೆಗೆ ಮೋದಿಯಿಂದ ಪೂರ್ತಿ ಅಧಿಕಾರ, ಪಾಕಿಸ್ತಾನಕ್ಕೆ ಕೈ ಕೊಟ್ಟ ಟರ್ಕಿ, ವಿಶ್ವ ಸಂಸ್ಥೆಯಲ್ಲಿ ಪಾಕ್ ವಿರುದ್ಧ ಭಾರತ ತರಾಟೆ; ಇಂದಿನ ಬೆಳವಣಿಗೆಗಳಿವು

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 26 ಜನರು ಮೃತಪಟ್ಟಿದ್ದಾರೆ. ಈ ಪ್ರಕರಣದ ತನಿಖೆ ಮಾಡುತ್ತಿರುವ ಎನ್​ಐಎ ಜಮ್ಮು ಕಾಶ್ಮೀರದ ಸ್ಥಳೀಯ ನಿವಾಸಿಗಳು ಮತ್ತು ಆ ದಿನ ಆ ಸ್ಥಳದಲ್ಲಿದ್ದ ಸಂತ್ರಸ್ತರಿಂದ ಮಾಹಿತಿ ಕಲೆ ಹಾಕುತ್ತಿದೆ. ಈ ನಡುವೆ ಇಂದು ಉನ್ನತ ಮಟ್ಟದ ಸಭೆ ನಡೆಸಿದ ಪ್ರಧಾನಿ ಮೋದಿ ಸಶಸ್ತ್ರ ಪಡೆಗೆ ಎಲ್ಲ ರೀತಿಯ ನಿರ್ಧಾರ ತೆಗೆದುಕೊಳ್ಳಲು ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ. ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ತರಾಟೆ ತೆಗೆದುಕೊಂಡಿದೆ. ಇಂದು ಭಾರತ-ಪಾಕಿಸ್ತಾನದ ನಡುವೆ ಏನೇನಾಯ್ತು? ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ಸುಷ್ಮಾ ಚಕ್ರೆ
|

Updated on:Apr 29, 2025 | 10:03 PM

Share
ದೆಹಲಿಯ ಪ್ರಧಾನಿ ನರೇಂದ್ರ ಮೋದಿಯವರ ನಿವಾಸದಲ್ಲಿ ಇಂದು ಉನ್ನತ ಮಟ್ಟದ ಸಭೆ ನಡೆಸಲಾಗಿದೆ. ಈ ಸಭೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಎನ್ಎಸ್ಎ ಅಜಿತ್ ದೋವಲ್, ಸಿಡಿಎಸ್, ಮೂರು ಸೇನಾ ಮುಖ್ಯಸ್ಥರು ಭಾಗವಹಿಸಿದ್ದರು. 90 ನಿಮಿಷ ನಡೆದ ಈ ಸಭೆಯಲ್ಲಿ ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತದ ಮಿಲಿಟರಿ ಪ್ರತಿಕ್ರಿಯೆಯ ವಿಧಾನ, ಗುರಿಗಳು ಮತ್ತು ಸಮಯವನ್ನು ನಿರ್ಧರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸಶಸ್ತ್ರ ಪಡೆಗಳಿಗೆ 'ಸಂಪೂರ್ಣ ಸ್ವಾತಂತ್ರ್ಯ' ನೀಡಿದ್ದಾರೆ.

1 / 10
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಅವರ ಎಕ್ಸ್ ಖಾತೆಯನ್ನು ಭಾರತದಲ್ಲಿ ಸ್ಥಗಿತಗೊಳಿಸಲಾಗಿದೆ. ಆಸಿಫ್ ತಮ್ಮ ಒಂದು ಹೇಳಿಕೆಯಲ್ಲಿ ಚೀನಾ ಕೂಡ ಕಾಶ್ಮೀರದ ಒಂದು ಭಾಗವನ್ನು ಹೊಂದಿದೆ ಎಂದು ಹೇಳಿದ್ದರು. ಅವರ ಇಂತಹ ಹೇಳಿಕೆಗಳಿಂದ ಅವರ ಎಕ್ಸ್ ಖಾತೆಯನ್ನು ಬ್ಯಾನ್ ಮಾಡಲಾಗಿದೆ.

2 / 10
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸಂದರ್ಭದಲ್ಲಿ "ಅಲ್ಲಾಹು ಅಕ್ಬರ್" ಎಂದು ಜಪಿಸುತ್ತಿರುವ ವೀಡಿಯೋ ವೈರಲ್ ಆಗಿತ್ತು. ಇದೀಗ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಜಿಪ್‌ಲೈನ್ ಆಪರೇಟರ್ ಮುಜಮ್ಮಿಲ್ ಅವರನ್ನು ಮತ್ತೊಮ್ಮೆ ಪ್ರಶ್ನಿಸಲು ಸಜ್ಜಾಗಿದೆ. ತನಿಖೆ ನಡೆಯುತ್ತಿರುವಾಗ ಮುಜಮ್ಮಿಲ್ ಆಗಾಗ ತಮ್ಮ ಹೇಳಿಕೆಗಳನ್ನು ಬದಲಾಯಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕೇಂದ್ರ ತನಿಖಾ ಸಂಸ್ಥೆಯಿಂದ ಎರಡು ಬಾರಿ ವಿಚಾರಣೆಗೆ ಒಳಗಾದ ಮುಜಮ್ಮಿಲ್, "ಭಯ"ದಿಂದ "ಅಲ್ಲಾಹು ಅಕ್ಬರ್" ಎಂದು ಜಪಿಸಿದ್ದೇನೆ ಎಂದು ಹೇಳಿದ್ದಾರೆ. ಆದರೆ, ಈ ದಾಳಿಯಲ್ಲಿ ಅವರ ಕೈವಾಡದ ಬಗ್ಗೆ ಎನ್​ಐಎ ತನಿಖೆ ನಡೆಸಿದೆ.

3 / 10
ಕೇಂದ್ರಾಡಳಿತ ಪ್ರದೇಶದ 87 ಪ್ರವಾಸಿ ತಾಣಗಳ ಪೈಕಿ 48 ಪ್ರವಾಸಿ ತಾಣಗಳನ್ನು ತಾತ್ಕಾಲಿಕವಾಗಿ ಮುಚ್ಚಲು ಆದೇಶಿಸಿದೆ. ಈ ಪ್ರವಾಸಿ ತಾಣಗಳು ದುರ್ಬಲ ಪ್ರದೇಶಗಳಲ್ಲಿ ಬರುತ್ತವೆ ಅಥವಾ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ತೀವ್ರಗೊಂಡ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಯೂಸ್ಮಾರ್ಗ್, ತೌಸಾ ಮೈದಾನ, ದೂದ್​ಪತ್ರಿ, ಬಂಗುಸ್, ಕರಿವಾನ್ ಡೈವರ್ ಚಂಡಿಗಮ್, ಅಹರ್ಬಲ್, ಕೌಸರ್ನಾಗ್, ವುಲರ್/ವಾಟ್ಲಾಬ್, ರಾಮ್ಪೋರಾ ಬಂಗುಸ್ ವ್ಯಾಲಿ, ರಾಜ್ಪೋರಾ ಮತ್ತು ಚೀರ್​ಹಾರ್​ ಮುಚ್ಚಲು ನಿರ್ಧರಿಸಲಾಗಿದೆ.

4 / 10
ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರದ ಬೆಳವಣಿಗೆಗಳ ನಡುವೆ ಗೃಹ ಸಚಿವಾಲಯ ಕೂಡ ಉನ್ನತ ಮಟ್ಟದ ಭದ್ರತಾ ಸಭೆಯನ್ನು ನಡೆಸಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರದ ಬೆಳವಣಿಗೆಗಳ ನಡುವೆ ಇಂದು ಗೃಹ ಸಚಿವಾಲಯದಲ್ಲಿ ಉನ್ನತ ಮಟ್ಟದ ವಿಶೇಷ ಭದ್ರತಾ ಸಭೆ ನಡೆಯಿತು. ಎಲ್ಲಾ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು (CAPF), ಗಡಿ ಭದ್ರತಾ ಪಡೆ (BSF), ಕೇಂದ್ರ ಮೀಸಲು ಪೊಲೀಸ್ ಪಡೆ (CRPF), ಸಶಸ್ತ್ರ ಸೀಮಾ ಬಲ್ (SSB), ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ (ITBP), ರಾಷ್ಟ್ರೀಯ ಭದ್ರತಾ ಪಡೆ (NSG) ಮತ್ತು ಅಸ್ಸಾಂ ರೈಫಲ್ಸ್‌ನ ಮಹಾನಿರ್ದೇಶಕರು ಈ ಸಭೆಯಲ್ಲಿ ಹಾಜರಿದ್ದರು. ಈ ಸಭೆಯ ಅಧ್ಯಕ್ಷತೆಯನ್ನು ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ವಹಿಸಿದ್ದರು.

5 / 10
ಉಗ್ರರು

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಭಾಗಿಯಾಗಿದ್ದ ಲಷ್ಕರ್​ ಉಗ್ರನೊಬ್ಬ ಪಾಕಿಸ್ತಾನ ಸೇನೆಯ ಮಾಜಿ ಕಮಾಂಡೋ ಎನ್ನಲಾಗಿದೆ. ಆತ ಹತ್ಯಾಕಾಂಡ ನಡೆಸುವ ಉದ್ದೇಶಕ್ಕಾಗಿಯೇ ಸೇನೆ ತೊರೆದು ಲಷ್ಕರ್​-ಎ-ತೊಯ್ಬಾ ಉಗ್ರ ಸಂಘಟನೆಗೆ ಸೇರಿದ್ದ. ಪಹಲ್ಗಾಮ್​ ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಎಂದು ಗುರುತಿಸಲಾದ ಪಾಕಿಸ್ತಾನಿ ಭಯೋತ್ಪಾದಕ ಹಾಶಿಮ್ ಮೂಸಾ ಪಾಕಿಸ್ತಾನ ಸೇನೆಯ ವಿಶೇಷ ಪಡೆಗಳ ಮಾಜಿ ಪ್ಯಾರಾ ಕಮಾಂಡೋ ಎಂಬುದು ದೃಢಪಟ್ಟಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

6 / 10
ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಹಲವಾರು ದಶಕಗಳಿಂದ ಭಯೋತ್ಪಾದಕ ಗುಂಪುಗಳಿಗೆ ಹಣಕಾಸು ಮತ್ತು ಬೆಂಬಲ ನೀಡುತ್ತಿರುವುದಾಗಿ ಬಹಿರಂಗವಾಗಿ ಒಪ್ಪಿಕೊಂಡ ನಂತರ ಭಾರತ ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನವನ್ನು ತೀವ್ರವಾಗಿ ಟೀಕಿಸಿದೆ. ಏಪ್ರಿಲ್ 22ರಂದು 26 ಪ್ರವಾಸಿಗರನ್ನು ಬಲಿ ತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ತೀವ್ರ ವಾಗ್ದಾಳಿ ನಡೆಸಿತು. ಭಯೋತ್ಪಾದನೆಗೆ ಪಾಕಿಸ್ತಾನ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿತು. ವಿಶ್ವಸಂಸ್ಥೆಯಲ್ಲಿ ನಡೆದ ಭಯೋತ್ಪಾದನಾ ಸಂತ್ರಸ್ತರ ಸಂಘದ ಜಾಲ (VOTAN) ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಭಾರತದ ಉಪ ಖಾಯಂ ಪ್ರತಿನಿಧಿ ರಾಯಭಾರಿ ಯೋಜನಾ ಪಟೇಲ್, ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಅವರು ಇತ್ತೀಚಿನ ದೂರದರ್ಶನ ಸಂದರ್ಶನದಲ್ಲಿ ಭಯೋತ್ಪಾದಕ ಸಂಘಟನೆಗಳಿಗೆ ಬೆಂಬಲ, ತರಬೇತಿ ಮತ್ತು ಹಣಕಾಸು ಒದಗಿಸುವ ಪಾಕಿಸ್ತಾನದ ಇತಿಹಾಸವನ್ನು ಒಪ್ಪಿಕೊಂಡಿದ್ದಾರೆ ಎಂದು ಇಡೀ ಜಗತ್ತು ಕೇಳಿದೆ" ಎಂದು ಹೇಳಿದರು.

7 / 10
ಭಾರತದೊಂದಿಗೆ ಯುದ್ಧ ಮಾಡದಿರುವುದೇ ಉತ್ತಮ ಎಂದು ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್​ಗೆ ಸಹೋದರ ನವಾಜ್ ಷರೀಫ್ ಸಲಹೆ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಭಾರತದೊಂದಿಗೆ ಯುದ್ಧ ಮಾಡಬೇಡಿ ಮತ್ತು ಶಾಂತವಾಗಿರಿ ಎಂದು ನವಾಜ್ ಷರೀಫ್ ಪ್ರಧಾನಿ ಶಹಬಾಜ್ ಅವರಿಗೆ ಸಲಹೆ ನೀಡಿದ್ದಾರೆ ಎನ್ನಲಾಗುತ್ತಿದೆ.

8 / 10
ಭಾರತದೊಂದಿಗಿನ ಯುದ್ಧದ ಭೀತಿ ನಡುವೆಯೇ ಟರ್ಕಿ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರಗಳನ್ನು ಕಳುಹಿಸಿದೆ ಎನ್ನುವ ವರದಿಯನ್ನು ಟರ್ಕಿ ತಳ್ಳಿ ಹಾಕಿದೆ. ಟರ್ಕಿ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರಗಳ ಸರಬರಾಜು ಮಾಡಿಲ್ಲ ಹೇಳಿಕೆ ನೀಡಿದೆ. ಶಸ್ತ್ರಾಸ್ತ್ರಗಳನ್ನು ಹೊತ್ತ ಟರ್ಕಿಶ್ ವಾಯುಪಡೆಯ ಸಿ -130 ಹರ್ಕ್ಯುಲಸ್ ಮಿಲಿಟರಿ ಸಾರಿಗೆ ವಿಮಾನ ಭಾನುವಾರ ಕರಾಚಿಗೆ ಬಂದಿಳಿದಿತ್ತು ಎನ್ನಲಾಗಿತ್ತು, ಆದರೆ ಟರ್ಕಿಯಿಂದ ಹೊರಟ ಸರಕು ವಿಮಾನ ಇಂಧನ ತುಂಬಲು ಪಾಕಿಸ್ತಾನದಲ್ಲಿ ಇಳಿದಿತ್ತು, ಯಾವುದೇ ಊಹಾಪೋಹಗಳಿಗೂ ಕಿವಿಗೊಡಬೇಡಿ ಎಂದು ಹೇಳಿದೆ.

9 / 10
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಗೆ ಸಂಬಂಧಿಸಿದಂತೆ ಒಗ್ಗಟ್ಟು ಪ್ರದರ್ಶಿಸಲು ಸಂಸತ್ತಿನ ಎರಡೂ ಸದನಗಳಲ್ಲಿ ವಿಶೇಷ ಅಧಿವೇಶನ ಕರೆಯುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ಈ ಘಟನೆಯ ಬಗ್ಗೆ ಸಾಮೂಹಿಕ ಪ್ರತಿಕ್ರಿಯೆಯನ್ನು ಆಲಿಸಲು ಎರಡೂ ಸದನಗಳ ವಿಶೇಷ ಅಧಿವೇಶನ ಕರೆಯುವಂತೆ ಒತ್ತಾಯಿಸಲಾಗಿದೆ. ಈ ಅಧಿವೇಶನವು ಸಂಸತ್ತು ಭಯೋತ್ಪಾದನೆ ವಿರುದ್ಧ ಒಗ್ಗಟ್ಟಿನ ಹೋರಾಟ ನಡೆಸಲು, ಬೆದರಿಕೆಗಳನ್ನು ಎದುರಿಸಲು, ದೇಶದ ಬಗ್ಗೆ ದೃಢ ಸಂಕಲ್ಪ ಪ್ರದರ್ಶಿಸಲು ನೆರವಾಗುತ್ತದೆ ಎಂದು ಮಲ್ಲಿಕಾರ್ಜುನ ಖರ್ಗೆ ಪತ್ರದಲ್ಲಿ ತಿಳಿಸಿದ್ದಾರೆ.

10 / 10

Published On - 9:45 pm, Tue, 29 April 25

ರೆಬೆಲ್ ನಾಯಕರಲ್ಲಿ ಕುಮಾರ ಬಂಗಾರಪ್ಪ ಉಳಿದವರಿಗಿಂತ ಜಾಸ್ತಿ ಜನಪ್ರಿಯ

ಅಘೋಷಿತ ಬಂದ್ ಸ್ಥಿತಿಯಲ್ಲಿ ರಾಜ್ಯದ ಮಹಾನಗರ ಪಾಲಿಕೆಗಳು

ಮಂತ್ರಿ ಸ್ಥಾನ ಬೇಕಿಲ್ಲ, ಶಿವಕುಮಾರ್ ಮುಖ್ಯಮಂತ್ರಿಯಾದರೆ ಸಾಕು: ಯೋಗೇಶ್ವರ್

ಅಮ್ಮನಿಗೆ ಕಾರು ಗಿಫ್ಟ್ ಕೊಟ್ಟ ಪ್ರತಾಪ್, ಬಿಕ್ಕಿ ಬಿಕ್ಕಿ ಅತ್ತ ತಾಯಿ

Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು

ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ

ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!

ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್

ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!