AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Roadshow: ಬಿಜೆಪಿಯನ್ನು ಬೆಂಗಳೂರು ಬಯಸುತ್ತಿದೆ, ಸಾಕ್ಷಿ ಇಲ್ಲಿದೆ ನೋಡಿ; ಪ್ರಧಾನಿ ಮೋದಿ

ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಶನಿವಾರ ಬೆಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ಈ ವೇಳೆ ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದಕ್ಕೆ ಅವರು ಹರ್ಷ ವ್ಯಕ್ತಪಡಿಸಿದ್ದು, ಬೆಂಗಳೂರಿನ ಜನತೆಗೆ ಧನ್ಯವಾದ ಸಮರ್ಪಿಸಿದ್ದಾರೆ.

Ganapathi Sharma
|

Updated on:May 06, 2023 | 3:34 PM

Share
PM Modi Happy after Roadshow  said It is clear Bengaluru wants BJP

ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಶನಿವಾರ ಬೆಂಗಳೂರಿನಲ್ಲಿ ಮೆಗಾ ರೋಡ್​ ಶೋ ನಡೆಸಿದರು. ಸುಮಾರು ಎರಡೂವರೆ ಗಂಟೆ ಕಾಲ ನಡೆದ ರೋಡ್​​ ಶೋದಲ್ಲಿ ಮೋದಿ ಅವರು 13 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಿದ್ದಾರೆ. ಮೊದಲ ದಿನದ ರೋಡ್​ ಶೋದಲ್ಲಿ ಮೋದಿ 26 ಕಿಲೋಮೀರ್​ಗೂ ಹೆಚ್ಚು ಸಂಚರಿಸಿದ್ದಾರೆ.

1 / 6
PM Modi Happy after Roadshow  said It is clear Bengaluru wants BJP

ಜೆಪಿ ನಗರದ ಬ್ರಿಗೇಡ್‌ ಮಿಲೇನಿಯಂನ ಬಳಿ ಆರಂಭವಾದ ರೋಡ್‌ ಶೋ ಮಲ್ಲೇಶ್ವರದ ಸರ್ಕಲ್‌ ಮಾರಮ್ಮ ದೇವಸ್ಥಾನದ ಬಳಿ ಅಂತ್ಯವಾಯಿತು. ರೋಡ್​ ಶೋ ಕೊನೆಯಲ್ಲಿ ಮೋದಿ ಅವರು ಕಾಡುಮಲ್ಲೇಶ್ವರ ದೇಗುಲಕ್ಕೆ ಭೇಟಿ ನೀಡಿ ದರ್ಶನ ಪಡೆದರು.

2 / 6
PM Modi Happy after Roadshow  said It is clear Bengaluru wants BJP

ಬೆಂಗಳೂರಿನ ರೋಡ್​ ಶೋಕ್ಕೆ ಜನರಿಂದ ವ್ಯಕ್ತವಾದ ಅಭೂತಪೂರ್ವ ಸ್ಪಂದನೆಗೆ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು ಸಂಭ್ರಮ ಹಂಚಿಕೊಂಡಿದ್ದಾರೆ. ಜತೆಗೆ, ರೋಡ್​ ಶೋದ ಸಂಭ್ರಮದ ಕ್ಷಣಗಳ ಚಿತ್ರಗಳನ್ನು ಟ್ವೀಟ್ ಮಾಡಿದ್ದಾರೆ.

3 / 6
PM Modi Happy after Roadshow  said It is clear Bengaluru wants BJP

ಬೆಂಗಳೂರು ಬಿಜೆಪಿಯನ್ನು ಬಯಸುತ್ತಿದೆ ಎಂಬುದು ಸ್ಪಷ್ಟ. ನಮ್ಮ ಪಕ್ಷವು ಉತ್ತಮ ಆಡಳಿತ ಮತ್ತು ಅಭಿವೃದ್ಧಿಯನ್ನು ನೀಡುವುದನ್ನು ಮುಂದುವರಿಸಲಿದೆ ಎಂಬ ಬಗ್ಗೆ ಈ ನಗರದ ಜನತೆಗೆ ನಂಬಿಕೆ ಇದೆ ಎಂದು ಮೋದಿ ಹೇಳಿದ್ದಾರೆ.

4 / 6
PM Modi Happy after Roadshow  said It is clear Bengaluru wants BJP

ನಾನು ಬೆಂಗಳೂರಿನಲ್ಲಿ ಕಂಡದ್ದನ್ನು ಕೇವಲ ಪದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ. ಈ ಅದ್ಭುತ ನಗರದ ಜನರು ನನ್ನ ಮೇಲೆ ಪ್ರೀತಿಯ ಮಳೆ ಸುರಿಸಿದ್ದಕ್ಕಾಗಿ ಜೀವಮಾನವಿಡೀ ನಾನು ಕೃತಜ್ಞನಾಗಿರಲಿದ್ದೇನೆ ಎಂದು ಮೋದಿ ಖುಷಿಯಿಂದ ಹೇಳಿಕೊಂಡಿದ್ದಾರೆ.

5 / 6
PM Modi Happy after Roadshow  said It is clear Bengaluru wants BJP

ಭಾನುವಾರವೂ ನಗರದಲ್ಲಿ ಪ್ರಧಾನಿ ಅವರ ರೋಡ್​ ಶೋ ನಡೆಯಲಿದೆ. ಭಾನುವಾರ (ಮೇ 7) ಬೆಳಗ್ಗೆ 9 ರಿಂದ ಬೆಳಗ್ಗೆ 11.30ರವರೆಗೆ ರೋಡ್ ಶೋ ನಡೆಯಲಿದೆ. ಭಾನುವಾರವೂ ಅಪಾರ ಸಂಖ್ಯೆಯಲ್ಲಿ ಜನರು ಭಾಗವಹಿಸುವ ನಿರೀಕ್ಷೆ ಇದ್ದು, ನಗರದಾದ್ಯಂತ ಬಿಗಿ ಭದ್ರತೆ ಒದಗಿಸಲಾಗಿದೆ.

6 / 6

Published On - 3:14 pm, Sat, 6 May 23

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!