ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿಗೆ ಆಗಮಿಸಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ.
ವಿಧಾನಸೌಧದ ಸಮೀಪ ಕನಕದಾಸರ ಪ್ರತಿಮೆಗೆ ಮೋದಿ ಮಾಲಾರ್ಪಣೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಮೋದಿ ಪುಷ್ಪಾರ್ಚನೆ ಮಾಡಿದ್ದಾರೆ.
ಕೆಂಪೇಗೌಡರ ಬೃಹತ್ ಪ್ರತಿಮೆಯನ್ನೂ ಮೋದಿ ಅವರು ಅನಾವರಣಗೊಳಿಸಿದರು. ಇದಕ್ಕೂ ಮೊದಲು ವಿಮಾನ ನಿಲ್ದಾಣದ 2ನೇ ಟರ್ಮಿನಲ್ಗೆ ಚಾಲನೆ ನೀಡಿದರು.
ಬೆಂಗಳೂರು ನಗರವನ್ನು ನಾಡಪ್ರಭು ಕೆಂಪೇಗೌಡರ ಪರಿಕಲ್ಪನೆಯಂತೆಯೇ ಅಭಿವೃದ್ಧಿಪಡಿಸುತ್ತೇವೆ. ಕೆಂಪೇಗೌಡರು ಬೆಂಗಳೂರನ್ನು ಆರ್ಥಿಕವಾಗಿ ಮಾತ್ರವಲ್ಲ ಸಾಂಸ್ಕೃತಿವಕಾಗಿಯೂ ಸದೃಢಗೊಳಿಸಬೇಕು ಎಂದು ಚಿಂತಿಸಿದ್ದರು. ಬೆಂಗಳೂರು ಇಂದು ಜಾಗತಿಕ ನಗರವಾಗಿ ಬೆಳೆದಿದೆ. ಬೆಂಗಳೂರಿನ ಪರಂಪರೆ ಸಂರಕ್ಷಿಸುವ ಜೊತೆಗೆ ಆಧುನಿಕ ಸೌಲಭ್ಯಗಳನ್ನೂ ಒದಗಿಸಬೇಕು. ಈ ಕಾರ್ಯಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮೋದಿ ಹೇಳಿದರು.
ಕನಕದಾಸರು ಒಂದು ಕಡೆಯಿಂದ ಕೃಷ್ಣನ ಭಕ್ತಿಯ ಮಾರ್ಗ ತೋರಿದರು. ಮತ್ತೊಂದೆಡೆ ‘ಕುಲಕುಲವೆಂದು ಹೊಡೆದಾಡದಿರಿ’ ಎಂದು ಕಿವಿಮಾತು ಹೇಳಿದರು. ಇಂದು ಜಗತ್ತಿನಲ್ಲಿ ಕಿರುಧಾನ್ಯದ ಬಗ್ಗೆ ಮಾತು ಕೇಳಿಬರುತ್ತಿದೆ. ‘ರಾಮಧಾನ್ಯ ಚರಿತ್ರೆ’ ಮೂಲಕ ಕಿರುಧಾನ್ಯವಾದ ರಾಗಿಯ ಉದಾಹರಣೆ ನೀಡಿ ಸಾಮಾಜಿಕ ಸಮಾನತೆಯ ಸಂದೇಶ ನೀಡಿದರು ಎಂದು ಮೋದಿ ಹೇಳಿದರು.
ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಬೃಹತ್ ಕಂಚಿನ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದರು.
100 ಟನ್ ಕಂಚು, 120 ಟಕ್ ಉಕ್ಕು ಬಳಸಿ ಪ್ರತಿಮೆಯನ್ನು ನಿರ್ಮಿಸಲಾಗಿದೆ. ಪ್ರತಿಮೆ ಸುತ್ತಲಿನ ಸ್ಥಳದಲ್ಲಿ ಥೀಮ್ ಪಾರ್ಕ್ ಅಭಿವೃದ್ಧಿಪಡಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು ರೈಲು ನಿಲ್ದಾಣದಲ್ಲಿ ‘ಭಾರತ್ ಗೌರವ್ ಕಾಶಿ ದರ್ಶನ್’ ವಿಶೇಷ ರೈಲಿಗೆ ಶುಕ್ರವಾರ ಚಾಲನೆ ನೀಡಿದರು.
ಈ ರೈಲು ಯಾತ್ರಿಗಳನ್ನು ಕಾಶಿ, ಅಯೋಧ್ಯೆ ಸೇರಿದಂತೆ ಹಲವು ಪ್ರಮುಖ ಯಾತ್ರಾ ಸ್ಥಳಗಳಿಗೆ ಕೊಂಡೊಯ್ಯಲಿದ್ದು, ಒಂದು ವಾರದಲ್ಲಿ ಮರಳಿ ಬರಲಿದೆ. ರೈಲಿಗೆ ₹ 20,000 ಶುಲ್ಕ ನಿಗದಿಪಡಿಸಲಾಗಿದ್ದು, ರಾಜ್ಯ ಸರ್ಕಾರವು ₹ 5 ಸಾವಿರ ಸಹಾಯನಧನ ಒದಗಿಸುತ್ತಿದೆ.
ಪ್ರಧಾನಿ ನರೇಂದ್ರ ಮೋದಿಯನ್ನು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸ್ವಾಗತಿಸಿದರು. ಪ್ಲಾಟ್ಫಾರಂ ಸಂಖ್ಯೆ 7ರಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು.
ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನೊಳಗೆ ಪ್ರವೇಶಿಸಿದ ಮೋದಿ ಪ್ರಯಾಣಿಕರೊಂದಿಗೆ ಮಾತುಕತೆ ನಡೆಸಿದರು.
ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು.
ಬೆಂಗಳೂರಿನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ
ಕೆಂಪೇಗೌಡರ ಪ್ರತಿಮೆಗೆ ಮೋದಿ ಪುಷ್ಪಾರ್ಚನೆ
ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪವಿರುವ ಭುವನಹಳ್ಳಿಯಲ್ಲಿ ಬಿಜೆಪಿ ಸಮಾವೇಶದಲ್ಲಿ ಜನಜಾತ್ರೆಯೇ ನೆರೆದಿತ್ತು.
ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2 ನೀಲನಕ್ಷೆ ವೀಕ್ಷಿಸಿದ ಮೋದಿ
ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು ರೈಲು ನಿಲ್ದಾಣಕ್ಕೆ ತೆರಳುವ ಮಾರ್ಗದಲ್ಲಿ ಕಾರಿನಿಂದ ಕೆಳಗೆ ಇಳಿದು ಕಾರ್ಯಕರ್ತರಿಗೆ ಕೈ ಮುಗಿದು, ಕೈ ಬೀಸಿದರು.
ಮೋದಿ ಅವರನ್ನು ಸ್ವಾಗತಿಸಲೆಂದು ರಸ್ತೆಯ ಇಕ್ಕೆಲಗಳಲ್ಲಿ ಬಿಜೆಪಿ ಕಾರ್ಯಕರ್ತರು ಭಾರೀ ಸಂಖ್ಯೆಯಲ್ಲಿ ಸೇರಿದ್ದರು.
ಈ ಕ್ರಿಯಾಶೀಲ ಬೆಂಗಳೂರಿನ ಭೇಟಿಯನ್ನು ಅತ್ಯಂತ ಸ್ಮರಣೀಯವಾಗಿಸಿದ್ದಕ್ಕೆ ಧನ್ಯವಾದಗಳು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
Published On - 3:35 pm, Fri, 11 November 22