PM Modi in Kedarnath: ವಿಶೇಷ ಉಡುಗೆ ತೊಟ್ಟು ಕೇದಾರನಾಥದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
TV9 Web | Updated By: ಸುಷ್ಮಾ ಚಕ್ರೆ
Updated on:
Oct 21, 2022 | 9:44 AM
ಮೋದಿ ಭೇಟಿ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಕೇದಾರನಾಥ ದೇವಾಲಯವನ್ನು ಹೂವಿನಿಂದ ಅಲಂಕರಿಸಲಾಗಿತ್ತು. ಈ ವರ್ಷ ಚಾರ್‌ಧಾಮ್‌ಗೆ ಭೇಟಿ ನೀಡಿದ ದಾಖಲೆಯ 41 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಸೇರಿದ್ದಾರೆ.
1 / 12
ಭಾರತದಾದ್ಯಂತ ದೀಪಾವಳಿಯ ಸಂಭ್ರಮ ಶುರುವಾಗಿದೆ. ಇದರ ನಡುವೆ ಪ್ರಧಾನಿ ನರೇಂದ್ರ ಮೋದಿ 2 ದಿನಗಳ ಕೇದಾರನಾಥ- ಬದರಿನಾಥ ಪ್ರವಾಸ ಕೈಗೊಂಡಿದ್ದಾರೆ.
2 / 12
ಕೇದಾರನಾಥ ದೇವಸ್ಥಾನದ ಭೇಟಿಗೆ ಉತ್ತರಾಖಂಡಕ್ಕೆ ಬಂದಿಳಿದ ಪ್ರಧಾನಿ ಮೋದಿ
3 / 12
ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ ಪ್ರವಾಸದಲ್ಲಿದ್ದು, ಶುಕ್ರವಾರ ಕೇದಾರನಾಥಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
4 / 12
ಇಂದು ಬೆಳಗ್ಗೆ ಕೇದಾರನಾಥಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರು ಕೇದಾರನಾಥ ಧಾಮದಲ್ಲಿ ಬೆಳಗಿನ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡರು.
5 / 12
ಈ ವೇಳೆ ಪ್ರಧಾನಿ ನರೇಂದ್ರ ಮೋದಿ ವಿಶೇಷ ಉಡುಗೆ ಧರಿಸಿ ಗಮನ ಸೆಳೆದರು.
6 / 12
ಹಿಮಾಚಲ ಪ್ರದೇಶದ ಚಂಬಾ ಮಹಿಳೆಯರು ಕೈಯಿಂದ ಮಾಡುವ ಉಡುಗೆಯನ್ನು ಮೋದಿ ಧರಿಸಿದ್ದರು. ಇದನ್ನು ಚೋಳ ಡೋರಾ ಉಡುಗೆ ಎಂದು ಕರೆಯಲಾಗುತ್ತದೆ.
7 / 12
ಇತ್ತೀಚೆಗೆ ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಿದ ಪ್ರಧಾನಿಯವರಿಗೆ ಈ ಉಡುಪನ್ನು ಉಡುಗೊರೆಯಾಗಿ ನೀಡಲಾಗಿದ್ದು, ಉತ್ತಮವಾದ ಕುಸುರಿ ಕೆಲಸದಿಂದ ಇದನ್ನು ಸಿದ್ಧಪಡಿಸಲಾಗಿದೆ. ಚಂಬಾಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಯಾವುದಾದರೂ ತಂಪಾದ ಸ್ಥಳಕ್ಕೆ ಭೇಟಿ ನೀಡಿದಾಗ ಈ ಉಡುಗೆಯನ್ನು ಧರಿಸುವುದಾಗಿ ಚಂಬಾ ಮಹಿಳೆಯರಿಗೆ ಭರವಸೆ ನೀಡಿದ್ದರು. ಅದರಂತೆ ಇಂದು ಕೇದಾರನಾಥದಲ್ಲಿ ಮೋದಿ ಈ ಉಡುಗೆ ಧರಿಸಿದ್ದಾರೆ.
8 / 12
ಮೋದಿ ಭೇಟಿ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಕೇದಾರನಾಥ ದೇವಾಲಯವನ್ನು ಹೂವಿನಿಂದ ಅಲಂಕರಿಸಲಾಗಿತ್ತು.
9 / 12
ಈ ವರ್ಷ ಚಾರ್‌ಧಾಮ್‌ಗೆ ಭೇಟಿ ನೀಡಿದ ದಾಖಲೆಯ 41 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಸೇರಿದ್ದಾರೆ.
10 / 12
ಇಂದು ಕೇದಾರನಾಥಕ್ಕೆ ಸಂಪರ್ಕಿಸುವ 9.7 ಕಿಮೀ ಉದ್ದದ ಗೌರಿಕುಂಡ್ ರೋಪ್ವೇಗೆ ಶಂಕುಸ್ಥಾಪನೆ ನೆರವೇರಿದೆ. ಇದು ಎರಡು ಸ್ಥಳಗಳ ನಡುವಿನ ಪ್ರಯಾಣದ ಸಮಯವನ್ನು ಪ್ರಸ್ತುತ 6-7 ಗಂಟೆಗಳ ಸಮಯವನ್ನು 30 ನಿಮಿಷಗಳಿಗೆ ಕಡಿಮೆ ಮಾಡುತ್ತದೆ. ಕೇದಾರನಾಥದಲ್ಲಿ ರೋಪ್‌ವೇ ಸುಮಾರು 9.7 ಕಿಮೀ ಉದ್ದವಿರುತ್ತದೆ ಮತ್ತು ಗೌರಿಕುಂಡ್ ಅನ್ನು ಕೇದಾರನಾಥಕ್ಕೆ ಸಂಪರ್ಕಿಸುತ್ತದೆ.
11 / 12
ಇದಾದ ಬಳಿಕ ಬದರಿನಾಥ ದೇಗುಲದಲ್ಲಿ ಪ್ರಾರ್ಥನೆಯಲ್ಲಿ ಪಾಲ್ಗೊಂಡು ನದಿ ತೀರದ ಅಭಿವೃದ್ಧಿಯನ್ನು ಪರಿಶೀಲಿಸಲಿದ್ದಾರೆ. ನಂತರ ಮಾಣ ಗ್ರಾಮದಲ್ಲಿ ರಸ್ತೆ ಮತ್ತು ರೋಪ್ ವೇ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
12 / 12
ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಮತ್ತು ಜನಸಂದಣಿಯನ್ನು ನಿಯಂತ್ರಿಸಲು ಕೇದಾರನಾಥದಲ್ಲಿ ನಿರ್ಮಿಸಲಾದ ಹೊಸ ಮಂದಾಕಿನಿ ಆಸ್ತ ಪಥ ಮತ್ತು ಸರಸ್ವತಿ ಆಸ್ತ ಪಥವನ್ನು ಮೋದಿ ಪರಿಶೀಲಿಸಿದ್ದಾರೆ. ಬಳಿಕ ಈ ಯೋಜನೆಗಳನ್ನು ನಿರ್ಮಿಸಿದ ಕಾರ್ಮಿಕರೊಂದಿಗೆ ಸಂವಾದ ನಡೆಸಿದ್ದಾರೆ.