
ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಿಜೆಪಿಯ ಕೇಂದ್ರ ನಾಯಕರು ರಾಜ್ಯ ಬಿಜೆಪಿ ನಾಯಕರ ಪರ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ತೊಡಗಿದ್ದಾರೆ.

ಈ ಹಿನ್ನೆಲೆ ಇಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾಗೆ ಭೇಟಿ ನೀಡಿದ್ದರು. ಈ ವೇಳೆ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಪದ್ಮ ಪ್ರಶಸ್ತಿ ಪುರಸ್ಕೃತರಾದ ತುಳಸಿ ಗೌಡ ಮತ್ತು ಸುಕ್ರಿ ಬೊಮ್ಮಗೌಡ ಅವರನ್ನು ಪ್ರಧಾನಿ ಮೋದಿ ಭೇಟಿ ಮಾಡಿ, ಗೌರವ ನಮನ ಸಲ್ಲಿಸಿದ್ದಾರೆ.

ರಾಜ್ಯದ ವಿವಿಧ ಕ್ಷೇತ್ರಗಳಿಗೆ ಪ್ರಧಾನಿ ಮೋದಿ ಭೇಟಿ ನೀಡುತ್ತಿದ್ದಾರೆ. ಅಭ್ಯರ್ಥಿಗಳ ಪರ ಮತಯಾಚನೆಯ ಮಧ್ಯೆಯೂ ತುಳಸಿ ಗೌಡ ಮತ್ತು ಸುಕ್ರಿ ಬೊಮ್ಮಗೌಡ ಅವರನ್ನು ಮೋದಿ ಮರೆಯದಿರುವುದು ವಿಶೇಷ.

ಹಾಲಕ್ಕಿ ಸಮುದಾಯಕ್ಕೆ ಸೇರಿದ ಈ ಮಾಹಾನ್ ಮಹಿಳೆಯರ ಸಾಧನೆಗೆ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಯನ್ನು ಭಾರತ ಸರ್ಕಾರ ನೀಡಿ ಗೌರವಿಸಿತ್ತು.

ಪ್ರಧಾನಿ ಮೋದಿ ಅವರನ್ನು ವೃಕ್ಷ ಮಾತೆ ತುಳಸಿ ಗೌಡ ಅವರು ಆರ್ಶೀವದಿಸಿದರು.