Updated on:Jun 30, 2023 | 12:17 PM
ದೆಹಲಿ ವಿಶ್ವವಿದ್ಯಾನಿಲಯದ ಶತಮಾನೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ
ಮೋದಿ ಇಂದು (ಜೂನ್ 30) ದೆಹಲಿ ವಿಶ್ವವಿದ್ಯಾಲಯಕ್ಕೆ ತೆರಳಲು ದೆಹಲಿ ಮೆಟ್ರೋ ಬಳಸಿದ್ದಾರೆ.
ಮೋದಿ ಈ ಹಿಂದೆ ರಸ್ತೆ ಮೂಲಕ ದೆಹಲಿ ವಿಶ್ವವಿದ್ಯಾಲಯಕ್ಕೆ ಹೋಗುವ ಯೋಜನೆ ಹಾಕಿಕೊಂಡಿದ್ದರು. ಕೊನೆ ಕ್ಷಣದಲ್ಲಿ ಈ ಯೋಜನೆಯನ್ನು ಬದಲಾಯಿಸಿಕೊಂಡಿದ್ದಾರೆ
ಮೋದಿ ಕಾರ್ಡ್ ಸ್ವೈಪ್ ಮಾಡುವ ಮೂಲಕ ಮೆಟ್ರೋ ಪ್ರವೇಶಿಸಿದ ನಂತರ ರೈಲಿನಲ್ಲಿ ಕುಳಿತು ಪ್ರಯಾಣಿಸಿದರು.
ಬಿಗಿ ಭದ್ರತಾ ನಡುವೆಯು ಮೆಟ್ರೋದಲ್ಲಿ ಸಂಚಾರಿಸಿರುವುದು ಎಲ್ಲರಿಗೂ ಅಚ್ಚರಿ ತಂದಿದೆ. ದೆಹಲಿ ಮೆಟ್ರೋದ ಸಿಬ್ಬಂದಿಗಳು ಹಾಗೂ ಅಧಿಕಾರಗಳ ಜತೆಗೂ ಸಂವಾದ ನಡೆಸಿದ್ದಾರೆ.
ಇಂದು ಪ್ರಧಾನಿ ಮೋದಿ ಅವರು ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಮೂರು ಕಟ್ಟಡಗಳ ಶಂಕುಸ್ಥಾಪನೆ ಮತ್ತು ಕಾಫಿ ಟೇಬಲ್ ಪುಸ್ತಕಗಳ ಸೆಟ್ ಅನ್ನು ಬಿಡುಗಡೆ ಮಾಡಲಿದ್ದಾರೆ.
ಪ್ರಧಾನಿ ಮೋದಿ 1978 ರಲ್ಲಿ ದೆಹಲಿ ವಿಶ್ವವಿದ್ಯಾಲಯದಲ್ಲಿ ಬಿಎ ಪದವಿ ಮಾಡಿದ್ದು. 2013 6 ಫೆಬ್ರವರಿಯಲ್ಲಿ ಮೋದಿ SRACC ಕಾಲೇಜಿನಲ್ಲಿ ಭಾಷಣ ಮಾಡಿದರು.
Published On - 12:12 pm, Fri, 30 June 23