ಕರ್ನಾಟಕ ಗೆಲ್ಲಲು BJP ಮಾಸ್ಟರ್‌ ಪ್ಲಾನ್‌, ಖರ್ಗೆ ಕೋಟೆಯಿಂದಲೇ ಮೋದಿ ರಣಕಹಳೆ

| Updated By: ರಮೇಶ್ ಬಿ. ಜವಳಗೇರಾ

Updated on: Mar 15, 2024 | 6:33 PM

2024ರ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು ರಾಜ್ಯದಲ್ಲಿ ಬಿಜೆಪಿ ಗೆಲ್ಲಲು ರಣತಂತ್ರ ರೂಪಿಸುತ್ತಿದೆ. ಈಗಾಗಲೇ ರಾಜ್ಯದ 20 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದೆ. ಇದರ ಬೆನ್ನಲ್ಲೇ ಕಲಬುರಗಿಯ ಬೃಹತ್ ಕಾರ್ಯಕ್ರಮದಲ್ಲಿ ನಾಳೆ (ಮಾರ್ಚ್ 15) ಪ್ರಧಾನಿ ಮೋದಿಯವರು ಭಾಗಿಯಾಗಿ ಚುನಾವಣೆ ರಣಕಹಳೆ ಮೊಳಗಿಸಲಿದ್ದಾರೆ. ಇದಾದ ಬಳಿಕ ಮಾರ್ಚ್​ 18ರಂದು ಮಲೆನಾಡಿನಲ್ಲೂ ಅಬ್ಬರಿಸಲಿದ್ದಾರೆ.

1 / 7
2024ರ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು ರಾಜ್ಯದಲ್ಲಿ ಬಿಜೆಪಿ ಗೆಲ್ಲಲು ರಣತಂತ್ರ ರೂಪಿಸುತ್ತಿದೆ. ಈಗಾಗಲೇ ರಾಜ್ಯದ 20 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದ ಬೆನ್ನಲ್ಲೇ ಮೋದಿ ಚುನಾವಣಾ ಪ್ರಚಾರಕ್ಕಿಳಿದಿದ್ದಾರೆ.

2 / 7
ನಾಳೆ (ಮಾರ್ಚ್ 16) ಮಧ್ಯಾಹ್ನ ಲಬುರಗಿಯ ನಗರದ ಎನ್​ವಿ ಕಾಲೇಜ್ ಮೈದಾನದಲ್ಲಿ ಬಿಜೆಪಿ ಬೃಹತ್ ಎಲೆಕ್ಷನ್ ಪ್ರಚಾರ ಕಾರ್ಯಕ್ರಮ ಹಮ್ಮಿಕೊಂಡಿದ್ದು ಇದರಲ್ಲಿ ಪ್ರಧಾನಿ ಮೋದಿಯವರು ಭಾಗಿಯಾಗಲಿದ್ದಾರೆ.  ಈ ಮೂಲಕ ಲೋಕಸಭಾ ಚುನಾವಣೆ ರಣಕಹಳೆ ಮೊಳಗಿಸಲಿದ್ದಾರೆ.

3 / 7
ಮಧ್ಯಾಹ್ನ 1 ಗಂಟೆಗೆ ವಿಶೇಷ ವಿಮಾನದ ಮೂಲಕ ಕಲಬುರಗಿಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಅಲ್ಲಿಂದ ಸೇನಾ ಕಾಪ್ಟರ್ ಮೂಲಕ ಮಧ್ಯಾಹ್ನ 1:20ಕ್ಕೆ ಪೊಲೀಸ್ ಪರೇಡ್ ಮೈದಾನಕ್ಕೆ ತಲುಪಲಿದ್ದಾರೆ. ಎನ್​ವಿ ಮೈದಾನಕ್ಕೆ ರಸ್ತೆ ಮೂಲಕ ತೆರಳಲಿದ್ದು ಇದು ಸುಮಾರು ಸುಮಾರು 2.5 ರಿಂದ 3 ಕಿ.ಮೀ ಇದ್ದು ಈ ವೇಳೆ ಮೋದಿಯವರು ಸೆಮಿ ರೋಡ್ ಶೋ ಮಾಡಲಿದ್ದಾರೆ.

4 / 7
ಸರಿಯಾಗಿ 1:50ಕ್ಕೆ ಎನ್​ವಿ ಮೈದಾನವನ್ನು ಪ್ರಧಾನಿ ಮೋದಿ ತಲುಪಲಿದ್ದು ಬೃಹತ್ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಲೋಕ ಗೆಲ್ಲಲು ಜನರನ್ನುದ್ದೇಶಿಸಿ ಮೋದಿ ಮಾತನಾಡಲಿದ್ದಾರೆ.

5 / 7
ಬಿಜೆಪಿಯ ಬೃಹತ್ ಕಾರ್ಯಕ್ರಮ ಹಿನ್ನೆಲೆಯಲ್ಲಿ ಎನ್​ವಿ ಮೈದಾನದಲ್ಲಿ ಬೃಹತ್ ವೇದಿಕೆಯನ್ನು ಈಗಾಗಲೇ ಸಿದ್ಧ ಮಾಡಲಾಗುತ್ತಿದೆ. ವೇದಿಕೆಯ ಮುಂಭಾಗದಲ್ಲಿ ಒಟ್ಟು 80 ಸಾವಿರಕ್ಕೂ ಅಧಿಕ ಆಸನಗಳ ವ್ಯವಸ್ಥೆ ಮಾಡಲಾಗುತ್ತಿದ್ದು 2 ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ಈ ವೇಳೆ ಪೊಲೀಸ್ ಬಿಗಿ ಬಂದೋಬಸ್ತ್ ಇರುತ್ತದೆ. ಕಾರ್ಯಕ್ರಮಕ್ಕೆ ವಾಹನದಲ್ಲಿ ಬರುವವರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

6 / 7
ಇನ್ನು ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿ ಹಲವು ನಾಯಕರು ಭಾಗಿಯಾಗಲಿದ್ದಾರೆ.

7 / 7
ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ