ವಯನಾಡು ಭೂಕುಸಿತ ಪ್ರದೇಶಕ್ಕೆ ಭೇಟಿ ನೀಡಿ, ಸಂತ್ರಸ್ತರ ಕಷ್ಟಗಳ ಆಲಿಸಿದ ಮೋದಿ

ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದಾಗಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ಸಾವಿರಾರು ಮಂದಿ ಮನೆಗಳನ್ನು ಕಳೆದುಕೊಂಡಿದ್ದಾರೆ. ಈ ಪ್ರದೇಶಗಳಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ನೀಡಿದ್ದು, ಜನರ ಸಂಕಷ್ಟಗಳನ್ನು ಆಲಿಸಿದ್ದಾರೆ.

ನಯನಾ ರಾಜೀವ್
|

Updated on: Aug 10, 2024 | 4:34 PM

ವೈಮಾನಿಕ ಸಮೀಕ್ಷೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ವಯನಾಡಿನಲ್ಲಿ ಭೂಕುಸಿತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು. ಅಲ್ಲಿ ಅಧಿಕಾರಿಗಳಿಂದ ಪರಿಹಾರ ಮತ್ತು ರಕ್ಷಣಾ ಕಾರ್ಯಗಳ ಕುರಿತು ಮಾಹಿತಿ ಪಡೆದರು. ಈ ವೇಳೆ ಪ್ರಧಾನಿ ಮೋದಿಯವರೊಂದಿಗೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಕೇಂದ್ರ ಸಚಿವ ಸುರೇಶ್ ಗೋಪಿ ಕೂಡ ಉಪಸ್ಥಿತರಿದ್ದರು.

1 / 6
ಕೇರಳದ ವಯನಾಡ್‌ಗೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರು ಭೂಕುಸಿತ ಸಂತ್ರಸ್ತರನ್ನು ಭೇಟಿಯಾದರು. ಪ್ರಧಾನಿಯವರು ನಿರಾಶ್ರಿತರ ಶಿಬಿರಗಳಿಗೆ ಭೇಟಿ ನೀಡಿ ಸಂತ್ರಸ್ತರನ್ನು ಭೇಟಿ ಮಾಡಿ ಅವರ ಕಷ್ಟಗಳನ್ನು ಆಲಿಸಿದರು. ಸಂತ್ರಸ್ತರಿಗೆ ಸಾಂತ್ವನ ಹೇಳಿದ ಪ್ರಧಾನಿ, ಸರ್ಕಾರ ಅವರೊಂದಿಗಿದೆ ಎಂದು ಹೇಳಿದರು.

2 / 6
ಭೂಕುಸಿತದ ವೈಮಾನಿಕ ಸಮೀಕ್ಷೆಯ ಸಂದರ್ಭದಲ್ಲಿ, ಭೂಕುಸಿತಕ್ಕೆ ಕಾರಣವೇನು ಎಂದು ಪ್ರಧಾನಿ ಕೇಳಿದರು ಮತ್ತು ಭೂಕುಸಿತದಿಂದ ಹೆಚ್ಚು ಹಾನಿಗೊಳಗಾದ ಪ್ರದೇಶಗಳಾದ ಪುಂಚಿರಿಮಟ್ಟಂ, ಮುಂಡಕ್ಕೈ ಮತ್ತು ಚುರಲ್ಮಲಾಗಳ ಪರಿಸ್ಥಿತಿಯನ್ನು ಸಹ ಪರಿಶೀಲಿಸಿದರು. ಈ ವೇಳೆ ಸಿಎಂ ಪಿ ವಿಜಯನ್ ಕೂಡ ಜೊತೆಗಿದ್ದರು.

3 / 6
ಭೂಕುಸಿತ ಪೀಡಿತ ಪ್ರದೇಶಗಳಿಗೆ ಪ್ರಧಾನಿ ಮೋದಿ ಭೇಟಿ ನೀಡಿದ್ದು, ಸಿಎಂ ಪಿ ವಿಜಯನ್, ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಕೇಂದ್ರ ರಾಜ್ಯ ಸಚಿವ ಸುರೇಶ್ ಗೋಪಿ ಉಪಸ್ಥಿತರಿದ್ದರು.

4 / 6
ಪ್ರಧಾನಿ ನರೇಂದ್ರ ಮೋದಿ ಅವರು ವಯನಾಡಿನಲ್ಲಿ ಭೂಕುಸಿತ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿ ಅಧಿಕಾರಿಗಳಿಂದ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು.

5 / 6
ಭೂಕುಸಿತದಲ್ಲಿ ಮೃತಪಟ್ಟವರಿಗೆ ತಲಾ 2 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಆರ್ಥಿಕ ನೆರವು ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿರುವುದು ಗಮನಾರ್ಹ. ಸಂತ್ರಸ್ತರಿಗೆ ರಾಜ್ಯ ಸರ್ಕಾರ ಎಲ್ಲ ರೀತಿಯ ನೆರವು ನೀಡುತ್ತಿದೆ ಎಂದು ಕೇರಳ ಮುಖ್ಯಮಂತ್ರಿ ಪಿ.ವಿಜಯನ್ ಹೇಳಿದ್ದಾರೆ. ಭೂಕುಸಿತದಿಂದ ಸಂತ್ರಸ್ತರಾದ ಜನರಿಗೆ ವಸತಿ, ಆಹಾರ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ.

6 / 6
Follow us