ಗಯಾನಾದಲ್ಲಿ ಏಕ್ ಪೇಡ್ ಮಾಕೆ ನಾಮ್, ಗಯಾನಾದ ಅಧ್ಯಕ್ಷ ಡಾ. ಮೊಹಮ್ಮದ್ ಇರ್ಫಾನ್ ಅಲಿ ಮತ್ತು ಅವರ ಕುಟುಂಬ ಸದಸ್ಯರೊಂದಿಗೆ ಪ್ರಧಾನಿ ಮೋದಿ ಸಸಿ ನೆಟ್ಟರು.
ಕುವೈತ್‌ನ ಗಲ್ಫ್ ಸ್ಪಿಕ್ ಲೇಬರ್ ಕ್ಯಾಂಪ್‌ಗೆ ಭೇಟಿ ನೀಡಿದ ಪ್ರಧಾನಿ ಮೋದಿ ಭಾರತೀಯ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು.
ಕೀವ್ನಲ್ಲಿ ಪ್ರಧಾನಿ ಮೋದಿ ಮತ್ತು ಉಕ್ರೇನ್ ಅಧ್ಯಕ್ಷ ವೊಲಿಡಿಮಿರ್ ಝೆಲೆನ್ಸ್ಕಿಯವರೊಂದಿಗೆ ಮಾತನಾಡಿದರು.
ವಿಶ್ವದ ಶಕ್ತಿಶಾಲಿ ರಾಷ್ಟ್ರಗಳಲ್ಲಿ ಒಂದಾದ ರಷ್ಯಾಗೆ ಮತ್ತೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದರು. ಕಜಾನ್‌ನಲ್ಲಿ ನಡೆದ 16ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ ಮೋದಿ ತೆರಳಿದ್ದರು.
ಪ್ರಧಾನಿ ಮೋದಿ ಇಟಲಿಯಲ್ಲಿ ಪೋಪ್ ಫ್ರಾನ್ಸಿಸ್ ಭೇಟಿಯಾದ ಸಂದರ್ಭ
ತಂತ್ರಜ್ಞಾನ, ಎಐ, ಡಿಜಿಟಲ್ ರೂಪಾಂತರ, ಸುಸ್ಥಿರತೆ ಬಗ್ಗೆ ಬಿಲ್ಗೇಟ್ಸ್ ಬಳಿ ಚರ್ಚಿಸುತ್ತಿರುವ ಮೋದಿ
ಭಾರತದಲ್ಲಿ ಶೇ.90 ಭಾಗದಷ್ಟು ಜನರು ಅಳವಡಿಸಿಕೊಂಡಿರುವ ಯುಪಿಐ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರಾನ್ಗೆ ವಿವರಿಸುತ್ತಿರುವ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ ತಿಂಗಳಲ್ಲಿ ಪೋಲೆಂಡ್‌ಗೆ ಭೇಟಿ ನೀಡಿದ್ದರು. 40 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಪೋಲೆಂಡ್‌ಗೆ ಭೇಟಿ ನೀಡಿದ್ದರು. ಪೋಲೆಂಡ್ ಪ್ರವಾಸದ ಬಳಿಕ ಪ್ರಧಾನಿ ಮೋದಿ ಉಕ್ರೇನ್‌ಗೆ ಭೇಟಿ ನೀಡಿದ್ದರು. ರಷ್ಯಾ ಯುದ್ಧದ ಬಳಿಕ ಉಕ್ರೇನ್‌ಗೆ ನೀಡುತ್ತಿರುವ ಮೊದಲ ಭೇಟಿ ಇದಾಗಿತ್ತು. ಪೋಲೆಂಡ್‌ನಿಂದ ಪ್ರಧಾನಿ ಮೋದಿ ಆಗಸ್ಟ್ 23 ರಂದು ಉಕ್ರೇನ್ ರಾಜಧಾನಿ ಕೀವ್‌ಗೆ ಟ್ರೇನ್ ಫೋರ್ಸ್ ಒನ್ ಐಶಾರಾಮಿ ರೈಲಿನಲ್ಲಿ ಪ್ರಯಾಣಿಸಿದ್ದರು. ಅಜಿತ್ ದೋವಲ್ ಕೂಡ ಅವರ ಜತೆಯಲ್ಲಿದ್ದರು.
ಜಿ 7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಟಲಿಗೆ ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಲ್ಲಿನ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಹೊಸ ಸೆಲ್ಫಿ ಸಾಮಾಜಿಕ ಜಾಲತಾಣದಲ್ಲಿ ಮತ್ತೆ ಸದ್ದು ಮಾಡಿತ್ತು.
Published On - 12:11 pm, Tue, 31 December 24