Narendra Modi In ISRO: ಬೆಂಗಳೂರಿನಲ್ಲಿ ಮೋದಿ, ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ
TV9 Web | Updated By: ಆಯೇಷಾ ಬಾನು
Updated on:
Aug 26, 2023 | 11:03 AM
ಚಂದ್ರಯಾನ-3 ಯಶಸ್ಸಿ ಹಿನ್ನೆಲೆ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರಿನ ಪೀಣ್ಯದ ಇಸ್ರೋ ಕೇಂದ್ರಕ್ಕೆ ಆಗಮಿಸಿದ ಮೋದಿ ಅವರಿಗೆ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್, ಯು.ಆರ್.ರಾವ್ ಬಾಹ್ಯಾಕಾಶ ಕೇಂದ್ರದ ನಿರ್ದೇಶಕ ಎಂ.ಶಂಕರನ್, ಇಸ್ಟ್ರಾಕ್ ನಿರ್ದೇಶಕ ಬಿ.ಎನ್.ರಾಮಕೃಷ್ಣ ಸ್ವಾಗತಿಸಿದರು.
1 / 9
ಚಂದ್ರಯಾನ-3 ಯಶಸ್ಸಿ ಆಗುತ್ತಿದ್ದಂತೆ ಐತಿಹಾಸಿಕ ಸಾಧನೆಗೆ ಕಾರಣರಾದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಹೆಚ್ಎಎಲ್ ಏರ್ಪೋರ್ಟ್ಗೆ ಬಂದಿಳಿದರು.
2 / 9
HAL ಏರ್ಪೋರ್ಟ್ನಲ್ಲಿ ಪ್ರಧಾನಿ ಮೋದಿ ಹಿರಿಯ ಅಧಿಕಾರಿಗಳು ಸ್ವಾಗತ ಕೋರಿದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಬೆಂಗಳೂರು ಪ್ರಾದೇಶಿಕ ಆಯುಕ್ತ ಆದಿತ್ಯ ಅಮ್ಲಾನ್ ಬಿಸ್ವಾಸ್, ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ರಿಂದ ಸ್ವಾಗತಿಸಿದರು.
3 / 9
ಜಾಲಹಳ್ಳಿ ಕ್ರಾಸ್ ಬಳಿ ಸಾವಿರಾರು ಕಾರ್ಯಕರ್ತರು ಮೋದಿಗಾಗಿ ಸೇರಿದ್ದರು. ವೀರಗಾಸೆ, ಡೊಳ್ಳು ಕುಣಿತ ಮೂಲಕ ಮೋದಿ ಅವರನ್ನು ಸ್ವಾಗತಿಸಲಾಯಿತು. ಪೋಸ್ಟರ್‌ಗಳು ಮತ್ತು ರಾಷ್ಟ್ರಧ್ವಜದೊಂದಿಗೆ ಎಚ್‌ಎಎಲ್ ವಿಮಾನ ನಿಲ್ದಾಣದ ಹೊರಗೆ ಬೀದಿಗಳಲ್ಲಿ ಜಮಾಯಿಸಿದ್ದರು.
4 / 9
ಹೆಚ್ಎಎಲ್ ಏರ್ಪೋರ್ಟ್ ಬಳಿ ಕಾರಿನಿಂದ ಇಳಿದು ಪ್ರಧಾನಿ ನರೇಂದ್ರ ಮೋದಿ ಜನರತ್ತ ಕೈಬೀಸಿದರು. ತ್ರಿವರ್ಣ ಧ್ವಜ ಹಿಡಿದು ಕಾರ್ಯಕರ್ತರು ಜೈಕಾರ ಹಾಕಿದರು. ಎಚ್‌ಎಎಲ್ ವಿಮಾನ ನಿಲ್ದಾಣದಿಂದ ಪೀಣ್ಯದಲ್ಲಿರುವ ಇಸ್ರೋ ಪ್ರಧಾನ ಕಚೇರಿಗೆ ಮೋದಿ ತೆರಳಿದರು.
5 / 9
ಹೆಚ್ಎಎಲ್ ಏರ್ಪೋರ್ಟ್ ಬಳಿ ಪ್ರಧಾನಮಂತ್ರಿ ಮೋದಿ ಭಾಷಣ ಮಾಡಿದರು. ಈ ವೇಳೆ ಜೈಜವಾನ್, ಕೈ ಕಿಸಾನ್, ಜೈ ವಿಜ್ಞಾನ ಎಂದು ಭಾಷಣ ಆರಂಭಿಸಿದರು. ವಿಜ್ಞಾನಿಗಳ ಸಾಧನೆ ಬಗ್ಗೆ ಇಡೀ ದೇಶವೇ ಹೆಮ್ಮೆ ಪಡುತ್ತಿದೆ. ನಮ್ಮ ವಿಜ್ಞಾನಿಗಳ ಶಕ್ತಿ ಇಡೀ ವಿಶ್ವಕ್ಕೆ ಗೊತ್ತಾಗಿದೆ ಎಂದರು.
6 / 9
ಪೀಣ್ಯದ ಬಳಿಯ ಇಸ್ರೋ ಕೇಂದ್ರಕ್ಕೆ ಮೋದಿ ಭೇಟಿಕೊಟ್ಟು ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದರು. ಮೋದಿ ಅವರಿಗೆ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್, ಯು.ಆರ್.ರಾವ್ ಬಾಹ್ಯಾಕಾಶ ಕೇಂದ್ರದ ನಿರ್ದೇಶಕ ಎಂ.ಶಂಕರನ್, ಇಸ್ಟ್ರಾಕ್ ನಿರ್ದೇಶಕ ಬಿ.ಎನ್.ರಾಮಕೃಷ್ಣ ಸ್ವಾಗತಿಸಿದರು.
7 / 9
ಚಂದ್ರಯಾನ-3 ಯೋಜನೆ, ಪ್ರಜ್ಞಾನ್ ರೋವರ್ ಕಾರ್ಯನಿರ್ವಹಣೆ, ಅನ್ವೇಷಣೆ ಬಗ್ಗೆ ಇಸ್ರೋ ವಿಜ್ಞಾನಿಗಳು ನರೇಂದ್ರ ಮೋದಿಯವರಿಗೆ ಮಾಹಿತಿ ನೀಡಿದರು. ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಅನ್ವೇಷಣೆ ಬಗ್ಗೆ ವಿವರಿಸಿದರು.
8 / 9
ಐತಿಹಾಸಿಕ ಸಾಧನೆಗೆ ಕಾರಣರಾದ ಇಸ್ರೋ ವಿಜ್ಞಾನಿಗಳಿಗೆ ಮೋದಿ ಅಭಿನಂದನೆ ಸಲ್ಲಿಸಿದ್ದು ಇಸ್ರೋ ಸಂಸ್ಥೆಯ ಅಧ್ಯಕ್ಷ ಹಾಗೂ ಹಿರಿಯ ವಿಜ್ಞಾನಿಗಳ ಜೊತೆ 45 ನಿಮಿಷಗಳ ಕಾಲ ಸಂವಾದ ನಡೆಸಿದರು. ಈ ವೇಳೆ ಚಂದ್ರಯಾನ-3 ರ ಚಂದ್ರನ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವಶಕ್ತಿ' ಎಂದು ಪ್ರಧಾನಿ ನರೇಂದ್ರ ಮೋದಿ ಅವರು ನಾಮಕರಣ ಮಾಡಿದರು.
9 / 9
ಚಂದ್ರಯಾನ-3 ಯಶಸ್ವಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪೀಣ್ಯಾದ ಇಸ್ರೋಗೆ ಭೇಟಿ ನೀಡಿದ್ದರು. ಈ ವೇಳೆ ಚಂದ್ರಯಾನ-3 ನೌಕೆ ಸೆರೆ ಹಿಡಿದ ಮೊದಲ ಇಸ್ರೋ ಅಧ್ಯಕ್ಷರಾದ ಎಸ್. ಸೋಮನಾಥ್ ಅವರು ಪ್ರಧಾನಿ ಮೋದಿಯವರಿಗೆ ಉಡುಗೊರೆಯಾಗಿ ನೀಡಿದರು.
Published On - 8:22 am, Sat, 26 August 23