- Kannada News Photo gallery PM Narendra Modi in Shivamogga and Belagavi Detailed Image Gallery IN PICS
PM Modi in Karnataka: ಶಿವಮೊಗ್ಗ, ಬೆಳಗಾವಿಯಲ್ಲಿ ಮೋದಿ ಮೋಡಿ; ಚಿತ್ರಗಳಲ್ಲಿ ನೋಡಿ
ಪ್ರಧಾನಿ ನರೇಂದ್ರ ಮೋದಿಯವರು ಇಂದು (ಫೆ. 27) ಶಿವಮೊಗ್ಗ ಹಾಗೂ ಬೆಳಗಾವಿಗೆ ಭೇಟಿ ನೀಡಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ದೆಹಲಿಗೆ ವಾಪಸಾಗಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ, ಬೆಳಗಾವಿಯಲ್ಲಿ ರೋಡ್ಶೋ, ಪಿಎಂ ಕಿಸಾನ್ ಸಮ್ಮಾನ್ 13ನೇ ಕಂತಿನ ಹಣ ರೈತರ ಖಾತೆಗೆ ವರ್ಗಾವಣೆ ಸೇರಿ ಹಲವು ಕಾರ್ಯಕ್ರಮಗಳಲ್ಲಿ ಪ್ರಧಾನಿ ಬಾಗಿಯಾಗಿದ್ದಾರೆ. ಪ್ರಧಾನಿ ರಾಜ್ಯ ಭೇಟಿಯ ಚಿತ್ರಗಳು ಇಲ್ಲಿವೆ.
Updated on:Feb 27, 2023 | 8:13 PM

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸ್ವಾಗತಿಸಿದ ಕ್ಷಣ

ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್ನಲ್ಲಿ ಪ್ರಧಾನಿ ನರೇಂದ್ರ ಮೋದಿ

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮದಲ್ಲಿ ಜನರತ್ತ ಕೈಬೀಸಿದ ಪ್ರಧಾನಿ ನರೇಂದ್ರ ಮೋದಿ. ಯಡಿಯೂರಪ್ಪ ಹಾಗೂ ಈಶ್ವರಪ್ಪ ಜತೆಗಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಟರ್ಮಿನಲ್ನಲ್ಲಿ ಒಂದು ಸುತ್ತು ತೆರಳಿ ಪರಿಶೀಲಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಇದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್ ನಕ್ಷೆಯನ್ನು ವೀಕ್ಷಿಸಿದ ಪ್ರಧಾನಿ ಮೋದಿ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಎಸ್ವೈ ಜತೆಗಿದ್ದಾರೆ.

ಬೆಳಗಾವಿಯಲ್ಲಿ ನಡೆದ ರೋಡ್ಶೋದಲ್ಲಿ ಪ್ರಧಾನಿ ನರೇಂದ್ರ ಮೋದಿ. ಮೋದಿ ಅವರಿಗೆ ಕಾರ್ಯಕರ್ತರಿಂದ ಹೂಮಳೆಯ ಭರ್ಜರಿ ಸ್ವಾಗತ ದೊರೆಯಿತು.

ಬೆಳಗಾವಿಯ ಮಾಲಿಸಿ ಸಿಟಿ ಮೈದಾನದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಅಭಿಮಾನಿಗಳು, ಕಾರ್ಯಕರ್ತರು ಹಾಗೂ ತಮ್ಮನ್ನು ನೋಡಲು ಬಂದ ಜನರತ್ತ ಕೈಬೀಸಿದ ಪ್ರಧಾನಿ ನರೇಂದ್ರ ಮೋದಿ
Published On - 8:12 pm, Mon, 27 February 23




