- Kannada News Photo gallery PM Narendra Modi inspects Odisha train accident site, takes stock of situation
Odisha Train Accident: ಒಡಿಶಾಗೆ ಭೇಟಿ ನೀಡಿ ರೈಲು ದುರಂತ ಸಂಭವಿಸಿದ ಸ್ಥಳ ಪರಿಶೀಲಿಸಿದ ಪ್ರಧಾನಿ ಮೋದಿ
ರೈಲು ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅಲ್ಲಿ ನಡೆಯುತ್ತಿರುವ ಪರಿಹಾರ ಕಾರ್ಯಗಳನ್ನು ಪರಿಶೀಲಿಸಿದರು. ಅವರು ಸ್ಥಳೀಯ ಅಧಿಕಾರಿಗಳು, ವಿಪತ್ತು ಪರಿಹಾರ ಪಡೆಗಳ ಸಿಬ್ಬಂದಿ ಮತ್ತು ರೈಲ್ವೆ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು.
Updated on: Jun 03, 2023 | 5:24 PM

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಭೇಟಿ ನೀಡಿ ಪರಿಸ್ಥಿತಿ ಅವಲೋಕನ ನಡೆಸಿದ್ದಾರೆ.

ಭಾರತೀಯ ವಾಯುಪಡೆಯ (ಐಎಎಫ್) ಹೆಲಿಕಾಪ್ಟರ್ ಮೂಲಕ ಬಹನಾಗಾದಲ್ಲಿ ಬಂದಿಳಿದ ಮೋದಿ

ಸ್ಥಳದಲ್ಲಿದ್ದ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಅಪಘಾತದ ಕುರಿತು ಪ್ರಧಾನಿಗೆ ಮಾಹಿತಿ ನೀಡಿದರು. ಕೇಂದ್ರ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ಉಪಸ್ಥಿತರಿದ್ದರು.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ ರಕ್ಷಣಾ ಕಾರ್ಯಾಚರಣೆಯ ಬಗ್ಗೆ ಸಚಿವರು ಮತ್ತು ರೈಲ್ವೆಯ ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದರು

ಮೋದಿ ಒಡಿಶಾದ ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವೆ ಪ್ರಮೀಳಾ ಮಲ್ಲಿಕ್ ಮತ್ತು ಸ್ಥಳೀಯ ಪೊಲೀಸ್ ಮುಖ್ಯಸ್ಥರೊಂದಿಗೆ ಸಂವಾದ ನಡೆಸಿದರು. ರೈಲು ಸೇವೆಗಳನ್ನು ಸಹಜ ಸ್ಥಿತಿಗೆ ತರಲು ದುರ್ಘಟನೆಯ ಸ್ಥಳದಲ್ಲಿ ಆರಂಭಿಸಲಾದ ಪುನಃಸ್ಥಾಪನೆ ಕಾರ್ಯದ ಪ್ರಗತಿಯ ಬಗ್ಗೆಯೂ ಮೋದಿ ವಿಚಾರಿಸಿದರು.

ದುರಂತ ಸ್ಥಳಕ್ಕೆ ಭೇಟಿ ನೀಡಿದ ಮೋದಿ ಹಾನಿಗೊಳಗಾದ ರೈಲುಗಳ ಕೋಚ್‌ಗಳನ್ನು ಪರಿಶೀಲಿಸಿದ್ದಾರೆ

ದುಃಖಿತ ಕುಟುಂಬಗಳಿಗೆ ಅನಾನುಕೂಲತೆ ಉಂಟಾಗದಂತೆ ವಿಶೇಷ ಕಾಳಜಿ ವಹಿಸಬೇಕು ಮತ್ತು ಸಂತ್ರಸ್ತರಿಗೆ ಅಗತ್ಯವಿರುವ ಸಹಾಯ ನೀಡಬೇಕು ಎಂದು ಮೋದಿ ಹೇಳಿದ್ದಾರೆ.

ಪ್ರಧಾನ ಮಂತ್ರಿ ಸಂಪುಟ ಕಾರ್ಯದರ್ಶಿ ಮತ್ತು ಆರೋಗ್ಯ ಸಚಿವರೊಂದಿಗೆ ಮಾತನಾಡಿದ್ದು ಗಾಯಾಳುಗಳು ಮತ್ತು ಅವರ ಕುಟುಂಬಗಳಿಗೆ ಅಗತ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಂತೆ ಹೇಳಿದ್ದಾರೆ



