- Kannada News Photo gallery PM Narendra Modi lands in Paris for two-day visit receives a ceremonial welcome
PM Modi France visit: ಎರಡು ದಿನಗಳ ಭೇಟಿಗಾಗಿ ಪ್ಯಾರಿಸ್‌ಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿಗೆ ಆತ್ಮೀಯ ಸ್ವಾಗತ
ಎರಡು ದಿನಗಳ ಫ್ರಾನ್ಸ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಸಾಕಷ್ಟು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕುವ ನಿರೀಕ್ಷೆ ಇದೆ.ಅವರು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಆಯೋಜಿಸಿದ ಖಾಸಗಿ ಭೋಜನ ಕೂಟದಲ್ಲಿ ಕೂಡಾ ಭಾಗವಹಿಸಲಿದ್ದಾರೆ.ಮೋದಿ ಪ್ಯಾರಿಸ್‌ಗೆ ಬಂದಿಳಿದಾಗ ಅವರಿಗೆ ಸಿಕ್ಕ ಸ್ವಾಗತ ಹೀಗಿತ್ತು
Updated on: Jul 13, 2023 | 5:10 PM

ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಭೇಟಿಗಾಗಿ ಗುರುವಾರ ಪ್ಯಾರಿಸ್‌ಗೆ ಆಗಮಿಸಿದ್ದಾರೆ.

ಮೋದಿ ಅವರನ್ನು ಫ್ರಾನ್ಸ್ ಪ್ರಧಾನಿ ಎಲಿಜಬೆತ್ ಬೋರ್ನ್ ಅವರು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.

ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರ ಆಹ್ವಾನದ ಮೇರೆಗೆ ಬಾಸ್ಟಿಲ್ ಡೇ ಪರೇಡ್‌ಗೆ ಗೌರವ ಅತಿಥಿಯಾಗಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ

ತಮ್ಮ ಭೇಟಿಯು ದ್ವಿಪಕ್ಷೀಯ ಕಾರ್ಯತಂತ್ರದ ಪಾಲುದಾರಿಕೆಗೆ ಹೊಸ ಪ್ರಚೋದನೆಯನ್ನು ನೀಡುತ್ತದೆ ಎಂದು ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

"ನಾನು ಅಧ್ಯಕ್ಷ ಮ್ಯಾಕ್ರಾನ್ ಅವರನ್ನು ಭೇಟಿ ಮಾಡಲು ಎದುರು ನೋಡುತ್ತಿದ್ದೇನೆ. ಮುಂದಿನ 25 ವರ್ಷಗಳಲ್ಲಿ ಈ ದೀರ್ಘಾವಧಿಯ ಮತ್ತು ಸಮಯ-ಪರೀಕ್ಷಿತ ಪಾಲುದಾರಿಕೆಯನ್ನು ಮುಂದಕ್ಕೆ ಕೊಂಡೊಯ್ಯುವ ಬಗ್ಗೆ ವ್ಯಾಪಕ ಚರ್ಚೆಗಳನ್ನು ನಡೆಸಲು ನಾನು ಎದುರು ನೋಡುತ್ತಿದ್ದೇನೆ" ಎಂದು ಮೋದಿ ಇಲ್ಲಿಂದ ಹೊರಡುವ ಮುನ್ನ ಹೇಳಿಕೆ ನೀಡಿದ್ದಾರೆ.

"ನಾವು ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆಯೂ ಒಟ್ಟಾಗಿ ಕೆಲಸ ಮಾಡುತ್ತೇವೆ" ಎಂದಿದ್ದಾರೆ ಮೋದಿ

ಪ್ರಧಾನಮಂತ್ರಿ ಮೋದಿಯವರು ಇಂದು ರಾತ್ರಿ 11 ಗಂಟೆಗೆ ಐಕಾನಿಕ್ ಲಾ ಸೀನ್ ಮ್ಯೂಸಿಕೇಲ್‌ನಲ್ಲಿ ಭಾರತೀಯ ಸಮುದಾಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
























