ಉಪರಾಷ್ಟ್ರಪತಿ ರಾಧಾಕೃಷ್ಣನ್ ಮನೆಗೆ ಭೇಟಿ ನೀಡಿ ದೀಪಾವಳಿ ಶುಭಾಶಯ ಕೋರಿದ ಪ್ರಧಾನಿ ಮೋದಿ

Updated on: Nov 07, 2026 | 7:26 PM

ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾಗಿ ದೀಪಾವಳಿ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಉಪರಾಷ್ಟ್ರಪತಿಯವರನ್ನು ಭೇಟಿಯಾದ ನಂತರ ಪ್ರಧಾನಿ ಮೋದಿ ಅವರು 'ಎಕ್ಸ್' (X) ಸಾಮಾಜಿಕ ಜಾಲತಾಣದಲ್ಲಿ, "ಉಪರಾಷ್ಟ್ರಪತಿ ತಿರು ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾಗಿ ದೀಪಾವಳಿ ಶುಭಾಶಯಗಳನ್ನು ಹಂಚಿಕೊಳ್ಳಲಾಯಿತು" ಎಂದು ಪೋಸ್ಟ್ ಮಾಡಿದ್ದಾರೆ.

1 / 7
ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ದೆಹಲಿಯ ಉಪರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿ, ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾದರು.

ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ದೆಹಲಿಯ ಉಪರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿ, ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾದರು.

2 / 7

ಈ ವೇಳೆ ಪ್ರಧಾನಿ ಮೋದಿಯವರನ್ನು ಸಿ.ಪಿ. ರಾಧಾಕೃಷ್ಣನ್ ಆತ್ಮೀಯವಾಗಿ ಆಹ್ವಾನಿಸಿದರು. ಬಳಿಕ ಉಭಯ ನಾಯಕರು ಪರಸ್ಪರ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.

3 / 7

ದೀಪಾವಳಿ ಪ್ರಯುಕ್ತ ಉಪರಾಷ್ಟ್ರಪತಿಗಳ ನಿವಾಸದಲ್ಲಿ ನಡೆದ ವಿಶೇಷ ಪೂಜೆಯಲ್ಲಿ ಪ್ರಧಾನಿ ಮೋದಿ ಕೂಡ ಭಾಗವಹಿಸಿದರು. ಸಿ.ಪಿ. ರಾಧಾಕೃಷ್ಣನ್ ಅವರ ನಿವಾಸದಲ್ಲಿ ದೇವರಿಗೆ ಪ್ರಧಾನಿ ಮೋದಿ ಆರತಿ ಬೆಳಗಿದರು.

4 / 7

ಉಪರಾಷ್ಟ್ರಪತಿ ಭವನದಲ್ಲಿ ನಡೆದ ಧಾರ್ಮಿಕ ಪೂಜಾ ವಿಧಿವಿಧಾನಗಳ ಸಂದರ್ಭದಲ್ಲಿ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಪ್ರಧಾನಿ ನರೇಂದ್ರ ಮೋದಿ ಅವರ ಹಣೆಗೆ ತಿಲಕವಿಟ್ಟರು.

5 / 7

ಈ ಭೇಟಿಯ ನೆನಪಾಗಿ ಉಪರಾಷ್ಟ್ರಪತಿಯವರು ಪ್ರಧಾನಿಯವರಿಗೆ ವಿಶೇಷ ಉಡುಗೊರೆಯನ್ನು ನೀಡಿದರು. ಈ ಆತ್ಮೀಯ ಭೇಟಿಯ ಫೋಟೋಗಳನ್ನು ಪ್ರಧಾನಿ ಮೋದಿ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ 'ಎಕ್ಸ್' ಖಾತೆಯಲ್ಲಿ ಹಂಚಿಕೊಂಡಿದ್ದಾರೆ. "ಉಪರಾಷ್ಟ್ರಪತಿ ತಿರು ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾಗಿ ದೀಪಾವಳಿ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು" ಎಂದು ಬರೆದುಕೊಂಡಿದ್ದಾರೆ.

6 / 7

ಇದಾದ ಬಳಿಕ ವಿಡಿಯೋ ಸಂದೇಶ ಹಾಗೂ ಬಹಿರಂಗ ಪತ್ರದ ಮೂಲಕ ಭಾರತೀಯರಿಗೆ ಪ್ರಧಾನಿ ಮೋದಿ ದೀಪಾವಳಿ ಹಬ್ಬದ ವಿಶೇಷ ಸಂದೇಶ ರವಾನಿಸಿದ್ದಾರೆ. "ದೀಪಾವಳಿಯು ಕತ್ತಲೆಯ ವಿರುದ್ಧ ಬೆಳಕಿನ, ಕೆಟ್ಟದ್ದರ ವಿರುದ್ಧ ಒಳಿತಿನ ಹಾಗೂ ನಿರಾಶೆಯ ವಿರುದ್ಧ ಭರವಸೆಯ ಶಾಶ್ವತ ವಿಜಯದ ಆಚರಣೆಯಾಗಿದೆ" ಎಂದು ಮೋದಿ ಬಣ್ಣಿಸಿದ್ದಾರೆ.

7 / 7

ದೇಶಾದ್ಯಂತ ನವೆಂಬರ್ 8ರಂದು ಲಕ್ಷ್ಮಿ ಪೂಜೆ ಹಾಗೂ ದೀಪಾವಳಿ ಹಬ್ಬವನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸಲಾಗುತ್ತಿದ್ದು, ಪ್ರತಿಯೊಬ್ಬರ ಮನೆ ಮನಗಳಲ್ಲೂ ಬೆಳಕು ಕಂಗೊಳಿಸಲಿ ಎಂದು ಪ್ರಧಾನಿ ಹಾರೈಸಿದ್ದಾರೆ.

ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
Loading...
Unable to load recommendations.
Follow Us