ಪುರಾತನ ಕಲಾಕೃತಿಗಳನ್ನು ಭಾರತಕ್ಕೆ ವಾಪಸ್ ತಂದ ಪ್ರಧಾನಿ ಮೋದಿ; ಇಲ್ಲಿವೆ ಫೋಟೋಗಳು

ನಿನ್ನೆ ಅವರ ಅಮೆರಿಕ ಪ್ರವಾಸ ಮುಕ್ತಾಯಗೊಂಡಿದ್ದು, ಈಗಾಗಲೇ ಅಲ್ಲಿಂದ ಹೊರಟಿದ್ದಾರೆ. ಆದರೆ ಹೀಗೆ ಭಾರತಕ್ಕೆ ಬರುವಾಗ, ನಮ್ಮ ದೇಶಕ್ಕೆ ಸಂಬಂಧಪಟ್ಟ ಸುಮಾರು 157 ಪುರಾತನ ಕಲಾಕೃತಿಗಳು, ದೇವರ ವಿಗ್ರಹಗಳನ್ನು ವಾಪಸ್ ತರುತ್ತಿದ್ದಾರೆ ಎಂದು ಹೇಳಲಾಗಿದೆ.

1/5
ಪ್ರಧಾನಿ ನರೇಂದ್ರ ಮೋದಿಯವರು ಮೂರು ದಿನಗಳ ಯುಎಸ್​ ಪ್ರವಾಸ ಮುಗಿಸಿ, ಅಲ್ಲಿಂದ ಹೊರಟಿದ್ದಾರೆ. ನಿನ್ನೆ ವಿಶ್ವಸಂಸ್ಥೆಯ 76ನೇ ಸಾಮಾನ್ಯ ಸಭೆಯಲ್ಲಿ ಭಾಷಣ ಮಾಡಿದ್ದರು. ಸೆಪ್ಟೆಂಬರ್​ 24ರಂದು ಕ್ವಾಡ್​ ಶೃಂಗಸಭೆಯಲ್ಲಿ ಮಾತನಾಡಿದ್ದರು. ನಿನ್ನೆ (ಸೆಪ್ಟೆಂಬರ್​ 25) ಅವರ ಅಮೆರಿಕ ಪ್ರವಾಸ ಮುಕ್ತಾಯಗೊಂಡಿದ್ದು, ಈಗಾಗಲೇ ಅಲ್ಲಿಂದ ಹೊರಟಿದ್ದಾರೆ. ಆದರೆ ಹೀಗೆ ಭಾರತಕ್ಕೆ ಬರುವಾಗ, ನಮ್ಮ ದೇಶಕ್ಕೆ ಸಂಬಂಧಪಟ್ಟ ಸುಮಾರು 157 ಪುರಾತನ ಕಲಾಕೃತಿಗಳು, ದೇವರ ವಿಗ್ರಹಗಳನ್ನು ವಾಪಸ್​ ತರುತ್ತಿದ್ದಾರೆ ಎಂದು ಹೇಳಲಾಗಿದೆ.

2/5
ಇದೀಗ ಪ್ರಧಾನಿ ಮೋದಿಯವರು ಭಾರತಕ್ಕೆ ತರಲಿರುವ ಪುರಾತನ ವಸ್ತುಗಳಲ್ಲಿ 12ನೇ ಶತಮಾನದ ಕಂಚಿನ ನಟರಾಜ ವಿಗ್ರಹ, 10ನೇ ಶತಮಾನದ ರೇವಂತ ದೇವರ ಮೂರ್ತಿಗಳು ಇವೆ. ಹೀಗೆ ವಾಪಸ್​ ತರಲಾದ 45 ಕಲಾಕೃತಿಗಳು ಸಾಮಾನ್ಯ ಯುಗಕ್ಕಿಂತಲೂ ಮುಂಚಿನವು. 71 ಸಾಂಸ್ಕೃತಿಕ ಕಲಾಕೃತಿಗಳಾಗಿದ್ದು, 60 ಹಿಂದೂ ಧರ್ಮ ಬಿಂಬಕ ಕಲಾಕೃತಿಗಳಾಗಿವೆ. ಇನ್ನು 16 ಕಲಾಕೃತಿಗಳು ಬೌದ್ಧಧರ್ಮಕ್ಕೆ ಸೇರಿದ್ದಾಗಿದ್ದು, 9 ಜೈನಧರ್ಮದ್ದಾಗಿವೆ.

3/5
ಕಂಚಿನಿಂದ ಮಾಡಲಾದ ಲಕ್ಷ್ಮೀ ನಾರಾಯಣ ಅಲಂಕೃತ ಮೂರ್ತಿಗಳು, ಬುದ್ಧ, ವಿಷ್ಣು, ಶಿವ-ಪಾರ್ವತಿ ಮತ್ತು 24 ಜೈನ ತೀರ್ಥಂಕರ ಮೂರ್ತಿಗಳ ವಿಗ್ರಹ ಇದೆ.  ದೇವರ ವಿಗ್ರಹಗಳ ಹೊರತಾಗಿಯೂ ಕೆಲವು ಸಾಂಸ್ಕೃತಿಕ ಪ್ರತಿಬಿಂಬಕ ಕಲಾಕೃತಿಗಳಿವೆ.

4/5
ಮೂರು ತಲೆಯ ಬ್ರಹ್ಮ, ರಥ ಚಾಲನೆ ಮಾಡುತ್ತಿರುವ ಸೂರ್ಯ, ವಿಷ್ಣು, ದಕ್ಷಿಣಾಮೂರ್ತಿಯಾಗಿರುವ ಶಿವ, ನೃತ್ಯ ಮಾಡುತ್ತಿರುವ ಗಣೇಶನ ವಿಗ್ರಹಗಳು, ತಾರ, ಜೈನ ತೀರ್ಥಂಕರ, ಪದ್ಮಾಸನ ತೀರ್ಥಂಕರ ಮತ್ತು ಜೈನ ಚೌಬಿಸಿ ಮೂರ್ತಿಗಳೂ ಇವೆ.

5/5
ಈ ಕಲಾಕೃತಿಗಳೆಲ್ಲ ಹಿಂದೆ ಕಳವಾಗಿ, ಯುಎಸ್​ಗೆ ಸಾಗಿಸಲ್ಪಟ್ಟಿದ್ದವು. ಅದನ್ನೀಗ ಪ್ರಧಾನಿ ಮೋದಿಯವರಿಗೆ ಅಮೆರಿಕ ಹಸ್ತಾಂತರ ಮಾಡಿದೆ.  ಈ ಬಗ್ಗೆ ಪ್ರಧಾನಿ ಮೋದಿಯವರೂ ಕೂಡ ತುಂಬ ಖುಷಿ ವ್ಯಕ್ತಪಡಿಸಿದ್ದಾರೆ.  

Click on your DTH Provider to Add TV9 Kannada