- Kannada News Photo gallery PM Narendra Modi will visits Mysore on April 8 and 9 and Bandipura tiger national Park
ಪ್ರಧಾನಿ ಸ್ವಾಗತಕ್ಕೆ ರಾಡಿಸನ್ ಬ್ಲೂ ಹೋಟೆಲ್‌ನಲ್ಲಿ ಭರ್ಜರಿ ಸಿದ್ದತೆ, ದಿಂಬು, ಬೆಡ್‌ಶೀಟ್ ಮೇಲೂ ಮೋದಿ ಭಾವಚಿತ್ರ
ಏಪ್ರಿಲ್ 9ರಂದು ರಾಜ್ಯಕ್ಕೆ ಆಗಮಿಸಲಿರುವ ಮೋದಿ, ಮೈಸೂರಿನಲ್ಲಿ ಹುಲಿ ಸಂರಕ್ಷಣೆ ಸಂಬಂಧಿತ 3 ದಿನಗಳ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ನಂತರ ಬಂಡೀಪುರ ಅರಣ್ಯವನ್ನು ರಾಷ್ಟ್ರೀಯ ಹುಲಿ ಸಂರಕ್ಷಿತಾರಣ್ಯವೆಂದು ಘೋಷಿಸಿ 50 ವರ್ಷಗಳು ಸಂದ ಹಿನ್ನೆಲೆ ಏಪ್ರಿಲ್ 9ರಂದು ಪ್ರಧಾನಿ ನರೇಂದ್ರ ಮೋದಿಯವರು ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೇ ಭೇಟಿ ನೀಡಲಿದ್ದು, ಅಲ್ಲಿ ಸಫಾರಿ ನಡೆಸಲಿದ್ದಾರೆ.
Updated on:Apr 08, 2023 | 8:04 AM

ಏಪ್ರಿಲ್ 9ರಂದು ರಾಜ್ಯಕ್ಕೆ ಆಗಮಿಸಲಿರುವ ಮೋದಿ, ಮೈಸೂರಿನಲ್ಲಿ ಹುಲಿ ಸಂರಕ್ಷಣೆ ಸಂಬಂಧಿತ 3 ದಿನಗಳ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ನಂತರ ಬಂಡೀಪುರ ಅರಣ್ಯವನ್ನು ರಾಷ್ಟ್ರೀಯ ಹುಲಿ ಸಂರಕ್ಷಿತಾರಣ್ಯವೆಂದು ಘೋಷಿಸಿ 50 ವರ್ಷಗಳು ಸಂದ ಹಿನ್ನೆಲೆ ಏಪ್ರಿಲ್ 9ರಂದು ಪ್ರಧಾನಿ ನರೇಂದ್ರ ಮೋದಿಯವರು ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೇ ಭೇಟಿ ನೀಡಲಿದ್ದು, ಅಲ್ಲಿ ಸಫಾರಿ ನಡೆಸಲಿದ್ದಾರೆ.

ನಾಳೆ (ಏ.8) ರಂದು ಮೈಸೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರು ಮೈಸೂರಿನ ಪ್ರತಿಷ್ಠಿತ ರಾಡಿಸನ್ ಬ್ಲೂ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಈ ಹಿನ್ನೆಲೆ ಪ್ರಧಾನಿ ಮೋದಿ ಸ್ವಾಗತಕ್ಕೆ ಭರ್ಜರಿ ಸಿದ್ದತೆ ಮಾಡಿಕೊಳ್ಳಲಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರಿಗಾಗಿ, ಮೋದಿ ಭಾವಚಿತ್ರದ ವಿಶೇಷ ಟವೆಲ್ ಸಿದ್ದಪಡಿಸಲಾಗಿದೆ.

ಅಲ್ಲದೇ ದಿಂಬಿನ ಕವರ್, ಬೆಡ್‌ಶೀಟ್ ಮೇಲೆ ಕೂಡ ಪ್ರಧಾನಿ ಮೋದಿ ಭಾವಚಿತ್ರವನ್ನು ಮುದ್ರಿಸಲಾಗಿದೆ

UR Leadership inspires Us Honorable Prime Minister ಅಂತ ಟೇಬಲ್ ಟಾಪ್ ತಯಾರಿಸಲಾಗಿದೆ. ಅದರ ಹಿಂಭಾಗ ಮೈಸೂರು ಬೆಂಗಳೂರು ಎಕ್ಸ್‌ಪ್ರೆಸ್ ಹೈವೆ ಮತ್ತು ಯೋಗ ಭಂಗಿಯ ಭಾವಚಿತ್ರವಿದೆ.

ವೆಲ್ ಕಮ್ ಬ್ಯಾಕ್ ಅಂತ ಆಹ್ವಾನ ಪತ್ರಿಕೆ ತಯಾರಿಸಲಾಗಿದೆ.
Published On - 12:54 pm, Fri, 7 April 23



















