- Kannada News Photo gallery Poco C55 A budget level best smartphone now available with big discount on Flipkart
50MP ಕ್ಯಾಮೆರಾ, 5000mAh ಬ್ಯಾಟರಿ: ಬೆಲೆ ಕೇವಲ 7,999 ರೂ.: ಈ ಫೋನ್ ಮೇಲಿನ ಆಫರ್ ಮಿಸ್ ಮಾಡ್ಬೇಡಿ
POCO C55 Price Cut: ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್ಕಾರ್ಟ್ನಲ್ಲಿ ಪೋಕೋ C55 ಫೋನ್ ಕಡಿಮೆ ಬೆಲೆಗೆ ಮಾರಾಟ ಆಗುತ್ತಿದೆ. ಈ ಫೋನ್ ಮೇಲೆ ಶೇ. 33 ರಷ್ಟು ರಿಯಾಯಿತಿ ಘೋಷಿಸಲಾಗಿದ್ದು, 7,999 ರೂ. ಮತ್ತು 8,999 ರೂ. ಗೆ ಪೋಕೋ C55 ಸ್ಮಾರ್ಟ್‌ಫೋನ್ ಖರೀದಿಸಬಹುದು.
Updated on: Aug 11, 2023 | 2:29 PM

ಭಾರತದಲ್ಲಿ ಬಜೆಟ್ ಬೆಲೆಯ ಫೋನ್ಗಳಿಗೆ ಭರ್ಜರಿ ಬೇಡಿಕೆ ಸೃಷ್ಟಿಯಾಗಿದೆ. ಇವುಗಳು ಮತ್ತಷ್ಟು ಕಡಿಮೆ ಬೆಲೆಗೆ ಮಾರಾಟ ಕಂಡರೆ ಕೆಲವೇ ಕ್ಷಣಗಳಲ್ಲಿ ಸೋಲ್ಡ್ ಔಟ್ ಆಗುತ್ತದೆ. ಈಗ ಅಂತಹದೆ ಫೋನ್ ಇಂದು ಅತಿ ಕಡಿಮೆ ದರಕ್ಕೆ ಸೇಲ್ ಆಗುತ್ತಿದೆ. ಐದು ತಿಂಗಳ ಹಿಂದೆ ಪೋಕೋ ಸಂಸ್ಥೆ ಬಿಡುಗಡೆ ಮಾಡಿದ ಪೋಕೋ C55 ಫೋನನ್ನು ಭರ್ಜರಿ ಡಿಸ್ಕೌಂಟ್ನಲ್ಲಿ ಖರೀದಿಸಬಹುದು.

ಪೋಕೋ C55 ಸ್ಮಾರ್ಟ್‌ಫೋನ್ ಭಾರತದಲ್ಲಿ ಎರಡು ಸ್ಟೋರೇಜ್ ಆಯ್ಕೆಯಲ್ಲಿ ಅನಾವರಣಗೊಂಡಿತ್ತು. ಇದರ 4GB RAM + 64GB ಸ್ಟೋರೇಜ್ ಸಾಮರ್ಥ್ಯಕ್ಕೆ ಕೇವಲ 11,999 ರೂ. ಇದೆ. ಅಂತೆಯೆ ಇದರ 6GB RAM + 128GB ಸ್ಟೋರೇಜ್ ಆಯ್ಕೆಗೆ 13,999 ರೂ. ಇದೆ.

ಇದೀಗ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್ಕಾರ್ಟ್ನಲ್ಲಿ ಈ ಫೋನ್ ಕಡಿಮೆ ಬೆಲೆಗೆ ಮಾರಾಟ ಆಗುತ್ತಿದೆ. ಈ ಫೋನ್ ಮೇಲೆ ಶೇ. 33 ರಷ್ಟು ರಿಯಾಯಿತಿ ಘೋಷಿಸಲಾಗಿದ್ದು, 7,999 ರೂ. ಮತ್ತು 8,999 ರೂ. ಗೆ ಪೋಕೋ C55 ಸ್ಮಾರ್ಟ್‌ಫೋನ್ ಖರೀದಿಸಬಹುದು. 8,450 ರೂ. ಗಳ ಎಕ್ಸ್ಚೇಂಜ್ ಆಫರ್ ಕೂಡ ಘೋಷಣೆ ಮಾಡಲಾಗಿದೆ.

ಪೋಕೋ C55 ಸ್ಮಾರ್ಟ್‌ಫೋನ್ 720*1650 ಪಿಕ್ಸೆಲ್ಸ್ ರೆಸಲೂಷನ್ ಸಾಮರ್ಥ್ಯದ 6.71 ಇಂಚಿನ ಹೆಚ್‌ಡಿ ಪ್ಲಸ್ ರೆಸಲೂಷನ್ನ ಎಲ್ಸಿಡಿ ಡಿಸ್ ಪ್ಲೇ ಹೊಂದಿದೆ. ಇದು 60Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಈ ಫೋನಿನ ಡಿಸೈನ್ ಅದ್ಭುತವಾಗಿದ್ದು ಗ್ರಾಹಕರು ಫಿದಾ ಆಗುವುದು ಗ್ಯಾರೆಂಟಿ.

ಅಂತೆಯೆ ಪೋಕೋ C55 ಸ್ಮಾರ್ಟ್ಫೋನ್ನಲ್ಲಿ ಬೆಲೆಗೆ ತಕ್ಕಂತೆ ಮೀಡಿಯಾಟೆಕ್ ಹೀಲಿಯೊ G85 SoC ಪ್ರೊಸೆಸರ್ ಬಲವನ್ನು ನೀಡಲಾಗಿದ್ದು ಆಂಡ್ರಾಯ್ಡ್ 12 ನ MIUI 13 ನಲ್ಲಿ ಕಾರ್ಯನಿರ್ವಹಿಸಲಿದೆ. ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕವೂ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಪೋಕೋ C55 ಸ್ಮಾರ್ಟ್‌ಫೋನ್ ಡ್ಯುಯೆಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ f/1.8 ಅಪಾರ್ಚರ್ ಲೆನ್ಸ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ.

ಇದಲ್ಲದೆ ಪೋಕೋ C55 ಸ್ಮಾರ್ಟ್ಫೋನ್ನಲ್ಲಿ ಮುಂಭಾಗ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಈ ಫೋನ್ನಲ್ಲಿರುವ ಕ್ಯಾಮೆರಾದಲ್ಲಿ ಪೊರ್ಟ್ರೈಟ್ ಮೋಡ್, ನೈಡ್ ಮೋಡ್, ಹೆಚ್ಡಿಆರ್ ಎಂಬ ಅನೇಕ ಆಯ್ಕೆಗಳನ್ನು ಕೂಡ ನೀಡಲಾಗಿದೆ.

ಈ ಸ್ಮಾರ್ಟ್‌ಫೋನ್ ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಬಹುದು. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಬೆಂಬಲ ಪಡೆದುಕೊಂಡಿಲ್ಲ. 4G LTE, Wi-Fi, ಬ್ಲೂಟೂತ್ v5.1, GPS/ A-GPS, ಇನ್‌ಫ್ರಾರೆಡ್ (IR) ಬ್ಲಾಸ್ಟರ್, USB ಟೈಪ್-C, ಮತ್ತು ಫಿಂಗರ್ಪ್ರಿಂಟ್ ಸ್ಕ್ಯಾನರ್ ಇದೆ.



















