
ಎರಡು ದಿನಗಳ ಹಿಂದೆಯಷ್ಟೆ ಪ್ರಸಿದ್ಧ ಪೋಕೋ ಸಂಸ್ಥೆ ಭಾರತದಲ್ಲಿ ಹೊಸ ಪೋಕೋ M6 5G (Poco M6 5G) ಸ್ಮಾರ್ಟ್ಫೋನ್ ಅನ್ನು ದೇಶದಲ್ಲಿ ರಿಲೀಸ್ ಮಾಡಿತ್ತು. ಈ ಕೈಗೆಟುಕುವ 5G ಫೋನ್ ಇಂದಿನಿಂದ ಮಾರಾಟ ಕಾಣಲಿದೆ. ಇದರಲ್ಲಿ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ ಪ್ರೊಸೆಸರ್ ಇದೆ.

ಗ್ಯಾಲಕ್ಟಿಕ್ ಬ್ಲ್ಯಾಕ್ ಮತ್ತು ಓರಿಯನ್ ಬ್ಲೂ ಬಣ್ಣಗಳಲ್ಲಿ ಬಿಡುಗಡೆ ಆಗಿರುವ ಪೋಕೋ M6 5G ಒಟ್ಟು ಮೂರು ಸ್ಟೋರೇಜ್ ಆಯ್ಕೆಯಲ್ಲಿ ಲಭ್ಯವಿದೆ. ಇದರ 4GB RAM + 128GB ಸ್ಟೋರೇಜ್ ಕಾನ್ಫಿಗರೇಶನ್‌ಗೆ 10,499 ರೂ., 6GB + 128GB ಮತ್ತು 8GB + 256GB ರೂಪಾಂತರಗಳ ಬೆಲೆ ಕ್ರಮವಾಗಿ ರೂ. 11,499 ಮತ್ತು 13,499 ರೂ. ಇದೆ.

ಪೋಕೋ M6 5G ಫೋನ್ ಡಿಸೆಂಬರ್ 26 ರಂದು ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್ ಮೂಲಕ ಖರೀದಿಸಲು ಲಭ್ಯವಿರುತ್ತದೆ. ಮಾರಾಟದ ಸಮಯದಲ್ಲಿ ICICI ಬ್ಯಾಂಕ್ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳನ್ನು ಬಳಸುವ ಮೂಲಕ 1,000 ರೂ. ಕ್ಯಾಶ್‌ಬ್ಯಾಕ್ ಕೊಡುಗೆ ಪಡೆಯಬಹುದು.

ಪೋಕೋ M6 5G ಫೋನ್ನಲ್ಲಿ 6.74-ಇಂಚಿನ HD+ (1,600 x 720 ಪಿಕ್ಸೆಲ್‌ಗಳು) ಡಿಸ್‌ಪ್ಲೇ ಜೊತೆಗೆ 90Hz ರಿಫ್ರೆಶ್ ರೇಟ್, 180Hz ನ ಟಚ್ ಸ್ಯಾಂಪ್ಲಿಂಗ್ ದರ ಮತ್ತು G Corning G3 3 ರಕ್ಷಣೆ ನೀಡಲಾಗಿದೆ. ಮೀಡಿಯಾಟೆಕ್ ಡೈಮೆನ್ಸಿಟಿ 6100+ ಚಿಪ್‌ಸೆಟ್‌ನಿಂದ ಕಾರ್ಯನಿರ್ವಹಿಸುತ್ತದೆ.

ಕ್ಯಾಮೆರಾ ವಿಭಾಗದಲ್ಲಿ, ಪೋಕೋ M6 5G 50-ಮೆಗಾಪಿಕ್ಸೆಲ್ AI-ಬೆಂಬಲಿತ ಪ್ರಾಥಮಿಕ ಮತ್ತು ಹಿಂಭಾಗದಲ್ಲಿ ಸೆಕೆಂಡರಿ ಸಂವೇದಕವನ್ನು ಹೊಂದಿದೆ. ಮುಂಭಾಗದ ಕ್ಯಾಮೆರಾವು 5-ಮೆಗಾಪಿಕ್ಸೆಲ್ ಸಂವೇದಕದಿಂದ ಕೂಡ ಕೂಡಿದೆ. 18W ವೈರ್ಡ್ ಚಾರ್ಜಿಂಗ್ ಬೆಂಬಲದೊಂದಿಗೆ 5,000mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ.

ಈ ಫೋನ್ ಆಂಡ್ರಾಯ್ಡ್ 13-ಆಧಾರಿತ MIUI 14 ಮೂಲಕ ರನ್ ಆಗುತ್ತದೆ. ಭದ್ರತೆಗಾಗಿ, ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಹೊಂದಿದೆ. ಫೋನ್ 3.5 ಎಂಎಂ ಆಡಿಯೊ ಜಾಕ್ ಅನ್ನು ಸಹ ಹೊಂದಿದೆ. ಇದು 5G, 4G LTE, Wi-Fi 5, ಬ್ಲೂಟೂತ್ 5.3, GPS ಮತ್ತು USB ಟೈಪ್-C ಸಂಪರ್ಕವನ್ನು ಬೆಂಬಲಿಸುತ್ತದೆ.
Published On - 6:55 am, Tue, 26 December 23