Kannada News Photo gallery Police alart In Gangavathi For Hindu Activists performs Pooja IN front off mosque during ganesha dissolution
ಗಣೇಶ ವಿಸರ್ಜನೆ ವೇಳೆ ಮಸೀದಿ ಮುಂದೆ ಮತ್ತೆ ಪೂಜೆ: ಗಂಗಾವತಿಯಲ್ಲಿ ಉದ್ವಿಗ್ನ ಪರಿಸ್ಥಿತಿ
ಸೆಪ್ಟೆಂಬರ್ 28 ರಂದು ಕೊಪ್ಪಳದ ಗಂಗಾವತಿಯ ಹಿಂದೂ ಮಹಾ ಮಂಡಳಿ ವತಿಯಿಂದ ನಡೆಯುತ್ತಿದ್ದ ಗಣೇಶ ವಿಸರ್ಜನೆ ವೇಳೆಯಲ್ಲಿ ಯುವಕರು ಮಸೀದಿ ಎದುರು ಮಂಗಳಾರತಿ ಮಾಡಿ, ‘ಗವಿ ಗಂಗಾಧರೇಶ್ವರ ಮಹಾ ರಾಜಕೀ ಜೈ’ ಎಂದು ಘೋಷಣೆ ಕೂಗಿದ ವೀಡಿಯೋ ವೈರಲ್ ಆಗಿತ್ತು. ಇದು ಕೋಮು ಗಲಭೆಗೆ ಪ್ರಚೋದನೆ ನೀಡುತ್ತದೆ ಎನ್ನುವ ಕಾರಣಕ್ಕೆ ಸೆ.30 ರಂದು ಮಂಗಳಾರತಿ ಮಾಡಿದ 4 ಜನರ ಮೇಲೆ ಪೊಲೀಸ್ ಸಿಬ್ಬಂದಿ ನೀಡಿದ ದೂರಿನ ಮೇರೆಗೆ ಪ್ರರಕಣ ದಾಖಲಾಗಿತ್ತು. ಈ ಪ್ರರಕಣ ಇನ್ನೂ ಹಸಿ ಇರುವಾಗಲೇ ಮತ್ತೆ ಅದೇ ಮಸೀದಿಯ ಮುಂದೆ ಮಂಗಳವಾರ ರಾತ್ರಿ ವೇಳೆ ಕೂಡ ಗಣೇಶ ವಿಸರ್ಜನೆ ಮಾಡುವ ಮೆರವಣಿಗೆ ಮಾಡಲಾಗಿದೆ. ಇದರಿಂದ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.