- Kannada News Photo gallery Pooja Hegde appears in red costume during Kisi Ka Bhai Kisi Ki Jaan movie promotion event in Mumbai
Pooja Hegde: ಕೆಂಪು ಉಡುಗೆಯಲ್ಲಿ ಮಿಂಚಿದ ಪೂಜಾ ಹೆಗ್ಡೆ; ಬಾಲಿವುಡ್ ಬೆಡಗಿಯ ಫೋಟೋ ಗ್ಯಾಲರಿ ಇಲ್ಲಿದೆ
Kisi Ka Bhai Kisi Ki Jaan: ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೂಜಾ ಹೆಗ್ಡೆ ಭಾಗಿ ಆಗಿದ್ದಾರೆ. ಈ ವೇಳೆ ಅವರು ಕೆಂಪು ಕಾಸ್ಟ್ಯೂಮ್ನಲ್ಲಿ ಕಂಗೊಳಿಸಿದ್ದಾರೆ.
Updated on:Apr 18, 2023 | 6:00 PM

ನಟಿ ಪೂಜಾ ಹೆಗ್ಡೆ ಅವರಿಗೆ ಭಾರತೀಯ ಚಿತ್ರರಂಗದಲ್ಲಿ ಸಖತ್ ಬೇಡಿಕೆ ಇದೆ. ಸ್ಟಾರ್ ಹೀರೋಗಳ ಜೊತೆ ನಟಿಸಿ ಅವರು ಫೇಮಸ್ ಆಗಿದ್ದಾರೆ. ದಿನದಿಂದ ದಿನಕ್ಕೆ ಪೂಜಾ ಹೆಗ್ಡೆ ಅವರ ಜನಪ್ರಿಯತೆ ಹೆಚ್ಚುತ್ತಿದೆ.

‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾಗೆ ಪೂಜಾ ಹೆಗ್ಡೆ ನಾಯಕಿ. ಈ ಸಿನಿಮಾದಲ್ಲಿ ಅವರು ಸಲ್ಮಾನ್ ಖಾನ್ಗೆ ಜೋಡಿಯಾಗಿ ಅಭಿನಯಿಸಿದ್ದಾರೆ. ಈ ಚಿತ್ರದ ಪ್ರಚಾರ ಕಾರ್ಯದಲ್ಲಿ ಪೂಜಾ ಹೆಗ್ಡೆ ಬ್ಯುಸಿ ಆಗಿದ್ದಾರೆ.

ಈದ್ ಹಬ್ಬದ ಪ್ರಯುಕ್ತ ಏಪ್ರಿಲ್ 21ರಂದು ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರದಿಂದ ಗೆಲ್ಲಲೇಬೇಕಾದ ಅನಿವಾರ್ಯತೆ ಪೂಜಾ ಹೆಗ್ಡೆ ಅವರಿಗೆ ಇದೆ. ಹಾಗಾಗಿ ತುಂಬ ಕಾಳಜಿವಹಿಸಿ ಅವರು ಪ್ರಚಾರ ಮಾಡುತ್ತಿದ್ದಾರೆ.

‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಪ್ರಚಾರದ ಸಲುವಾಗಿ ಮುಂಬೈನಲ್ಲಿ ನಡೆದ ಕಾರ್ಯಕ್ರಮಕ್ಕೆ ಪೂಜಾ ಹೆಗ್ಡೆ ಅವರು ಹಾಜರಿ ಹಾಕಿದ್ದಾರೆ. ಈ ವೇಳೆ ಅವರು ಕೆಂಪು ಕಾಸ್ಟ್ಯೂಮ್ನಲ್ಲಿ ಕಂಗೊಳಿಸಿದ್ದಾರೆ. ಅವರ ಫೋಟೋಸ್ ವೈರಲ್ ಆಗಿವೆ.

ಸೋಶಿಯಲ್ ಮೀಡಿಯಾದಲ್ಲಿ ಪೂಜಾ ಹೆಗ್ಡೆ ಅವರು ಆ್ಯಕ್ಟೀವ್ ಆಗಿದ್ದಾರೆ. ಆಗಾಗ ಅವರು ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈಗ ಪೂಜಾ ಶೇರ್ ಮಾಡಿಕೊಂಡಿರುವ ಈ ಫೋಟೋಗಳಿಗೆ ಫ್ಯಾನ್ಸ್ ಮೆಚ್ಚುಗೆ ಸೂಚಿಸಿದ್ದಾರೆ.
Published On - 6:00 pm, Tue, 18 April 23

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್ ಇಂಟರ್ನೆಟ್) ಸಂಸ್ಥೆಯಲ್ಲಿ ಕಂಟೆಂಟ್ ಪ್ರೊಡ್ಯೂಸರ್ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್ ಸಾಹಿತ್ಯದ ವಿದ್ಯಾರ್ಥಿ.
Read More




