Updated on:Apr 18, 2023 | 6:00 PM
ನಟಿ ಪೂಜಾ ಹೆಗ್ಡೆ ಅವರಿಗೆ ಭಾರತೀಯ ಚಿತ್ರರಂಗದಲ್ಲಿ ಸಖತ್ ಬೇಡಿಕೆ ಇದೆ. ಸ್ಟಾರ್ ಹೀರೋಗಳ ಜೊತೆ ನಟಿಸಿ ಅವರು ಫೇಮಸ್ ಆಗಿದ್ದಾರೆ. ದಿನದಿಂದ ದಿನಕ್ಕೆ ಪೂಜಾ ಹೆಗ್ಡೆ ಅವರ ಜನಪ್ರಿಯತೆ ಹೆಚ್ಚುತ್ತಿದೆ.
‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾಗೆ ಪೂಜಾ ಹೆಗ್ಡೆ ನಾಯಕಿ. ಈ ಸಿನಿಮಾದಲ್ಲಿ ಅವರು ಸಲ್ಮಾನ್ ಖಾನ್ಗೆ ಜೋಡಿಯಾಗಿ ಅಭಿನಯಿಸಿದ್ದಾರೆ. ಈ ಚಿತ್ರದ ಪ್ರಚಾರ ಕಾರ್ಯದಲ್ಲಿ ಪೂಜಾ ಹೆಗ್ಡೆ ಬ್ಯುಸಿ ಆಗಿದ್ದಾರೆ.
ಈದ್ ಹಬ್ಬದ ಪ್ರಯುಕ್ತ ಏಪ್ರಿಲ್ 21ರಂದು ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರದಿಂದ ಗೆಲ್ಲಲೇಬೇಕಾದ ಅನಿವಾರ್ಯತೆ ಪೂಜಾ ಹೆಗ್ಡೆ ಅವರಿಗೆ ಇದೆ. ಹಾಗಾಗಿ ತುಂಬ ಕಾಳಜಿವಹಿಸಿ ಅವರು ಪ್ರಚಾರ ಮಾಡುತ್ತಿದ್ದಾರೆ.
‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಪ್ರಚಾರದ ಸಲುವಾಗಿ ಮುಂಬೈನಲ್ಲಿ ನಡೆದ ಕಾರ್ಯಕ್ರಮಕ್ಕೆ ಪೂಜಾ ಹೆಗ್ಡೆ ಅವರು ಹಾಜರಿ ಹಾಕಿದ್ದಾರೆ. ಈ ವೇಳೆ ಅವರು ಕೆಂಪು ಕಾಸ್ಟ್ಯೂಮ್ನಲ್ಲಿ ಕಂಗೊಳಿಸಿದ್ದಾರೆ. ಅವರ ಫೋಟೋಸ್ ವೈರಲ್ ಆಗಿವೆ.
ಸೋಶಿಯಲ್ ಮೀಡಿಯಾದಲ್ಲಿ ಪೂಜಾ ಹೆಗ್ಡೆ ಅವರು ಆ್ಯಕ್ಟೀವ್ ಆಗಿದ್ದಾರೆ. ಆಗಾಗ ಅವರು ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈಗ ಪೂಜಾ ಶೇರ್ ಮಾಡಿಕೊಂಡಿರುವ ಈ ಫೋಟೋಗಳಿಗೆ ಫ್ಯಾನ್ಸ್ ಮೆಚ್ಚುಗೆ ಸೂಚಿಸಿದ್ದಾರೆ.
Published On - 6:00 pm, Tue, 18 April 23