ತೆಲುಗು ಚಿತ್ರರಂಗದಿಂದ ದೂರ ಸರಿದರೇ ಪೂಜಾ ಹೆಗ್ಡೆ? ಕೈಯಲ್ಲಿರುವ ಸಿನಿಮಾಗಳೆಷ್ಟು?
Pooja Hegde: ನಟಿ ಪೂಜಾ ಹೆಗ್ಡೆ ಬಾಲಿವುಡ್ ಚಿತ್ರರಂಗದತ್ತ ಹೆಚ್ಚು ಗಮನ ಕೇಂದ್ರೀಕರಿಸಿದ್ದು ತೆಲುಗು ಸಿನಿಮಾಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಅಂದಹಾಗೆ ಪೂಜಾ ಕೈಯಲ್ಲಿ ಈಗಿರುವ ಸಿನಿಮಾಗಳೆಷ್ಟು?
Updated on: Nov 24, 2023 | 8:53 PM
Share

ನಟಿ ಪೂಜಾ ಹೆಗ್ಡೆ ತೆಲುಗು ಚಿತ್ರರಂಗದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆವ ನಟಿ ಎನಿಸಿಕೊಂಡಿದ್ದವರು.

ಆದರೆ ಇತ್ತೀಚೆಗೆ ತೆಲುಗು ಚಿತ್ರಗಳಲ್ಲಿ ನಟಿಸುವುದನ್ನು ಬಹುವಾಗಿ ಕಡಿಮೆ ಮಾಡಿದ್ದಾರೆ ಪೂಜಾ ಹೆಗ್ಡೆ.

ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಸಿನಿಮಾದಿಂದಲೂ ಈ ನಟಿ ಹೊರನಡೆದರು.

ಹಿಂದಿ ಚಿತ್ರರಂಗದ ಕಡೆಗೆ ಹೆಚ್ಚು ಗಮನ ಹರಿಸಲು ಪೂಜಾ, ತೆಲುಗು ಸಿನಿಮಾಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಪೂಜಾ ಹೆಗ್ಡೆ ಬಳಿ ಈಗ ಹೆಚ್ಚು ಸಿನಿಮಾಗಳಿಲ್ಲ. ಪ್ರಸ್ತುತ ‘ದೇವಾ’ ಹೆಸರಿನ ಒಂದು ಹಿಂದಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಪೂಜಾ ಹೆಗ್ಡೆಗೆ ಹೋಗಬೇಕಾದ ಹಲವು ಸಿನಿಮಾ ಅವಕಾಶಗಳನ್ನು ಕನ್ನಡತಿಯರಾದ ರಶ್ಮಿಕಾ ಹಾಗೂ ಶ್ರೀಲೀಲಾ ಬಾಚಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಇನ್ಸ್ಟಾಗ್ರಾಂನಲ್ಲಿ ಸಖತ್ ಸಕ್ರಿಯವಾಗಿರುವ ಪೂಜಾ ಹೆಗ್ಡೆ ಆಗಾಗ್ಗೆ ತಮ್ಮ ಹಾಟ್ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.
Related Photo Gallery
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್‌ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ಅಲೋಕ್ ಕುಮಾರ್: ಏನು ವಿಚಾರಿಸಿದ್ರು?




