Updated on:Aug 31, 2022 | 4:02 PM
ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನದಲ್ಲಿ ಇಂದು ವಿಜೃಂಭಣೆಯಿಂದ ಗಣೇಶ ಚತುರ್ಥಿ ಹಬ್ಬ ಮಾಡಲಾಗಿದೆ. ವಿನಾಯಕನ ಪೂಜೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿಯಾಗಿದ್ದಾರೆ.
ಹಲವು ವರ್ಷಗಳ ಹೋರಾಟದ ನಂತರ ರಾಣಿ ಚೆನ್ನಮ್ಮ ಮೈದಾನದಲ್ಲಿ, ರಾಷ್ಟ್ರಧ್ವಜ ಹಾರಿಸಿ ರಾಷ್ಟ್ರಧರ್ಮ ಪಾಲನೆ ಮಾಡುವ ಅವಕಾಶ ಸಿಕ್ಕಿದೆ. ನನಗೆ ಇಂದು ಅದೇ ಮೈದಾನದಲ್ಲಿ ವಿಘ್ನ ನಿವಾರಕನ ಪೂಜೆ ಮಾಡುವ ಸೌಭಾಗ್ಯ ಒದಗಿ ಬಂದಿದೆ. ಧನ್ಯೋಸ್ಮಿ ಎಂದು ಸಂತಸ ವ್ಯಕ್ತಪಡಿಸಿದ್ರು.
ಹುಬ್ಬಳ್ಳಿಯ ಚೆನ್ನಮ್ಮ ಮೈದಾನದಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪನೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೈಕೋರ್ಟ್ ತೀರ್ಪಿನ ಬಗ್ಗೆ ಸಂತಸ ವ್ಯಕ್ತಪಡಿಸಿದ್ರು.
ಗಣೇಶನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜೊತೆ ಅನೇಕರು ಭಾಗಿಯಾಗಿದ್ರು.
ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನದಲ್ಲಿ ಇಂದು ವಿಜೃಂಭಣೆಯಿಂದ ಗಣೇಶ ಚತುರ್ಥಿ ಹಬ್ಬ ಮಾಡಲಾಗಿದೆ.
Published On - 4:02 pm, Wed, 31 August 22