
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನೂತನವಾಗಿ ಅಳವಡಿಸಲಾಗಿರುವ 2ಡಿ-4ಡಿ ಎಕೋ ಮಷೀನ್‌ನನ್ನು ಇಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರು ಉದ್ಘಾಟನೆ ಮಾಡಿದರು.

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆಯ ಅಡಿಯಲ್ಲಿ ಹೆಚ್ಚುವರಿ ಅನುದಾನವನ್ನು ಒದಗಿಸಿ ಅಳವಡಿಸಲಾಗಿರುವ ಎಕೋ ಮಷೀನ್ ಹೃದಯ ಸಂಬಂಧಿ ಕಾಯಿಲೆಗಳ ಚಿಕಿತ್ಸೆಗೆ ತುಂಬಾ ಅನುಕೂಲವಾಗಲಿದೆ.

2ಡಿ-4ಡಿ ಎಕೋ ಮೆಷಿನ್ ಉದ್ಘಾಟನೆಯ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಶಾಸಕರಾದ ಜಗದೀಶ್ ಶೆಟ್ಟರ್, ಸಚಿವರಾದ ಶಂಕರ ಪಾಟೀಲ್ ಮುನೇನಕೊಪ್ಪ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಈ ಕಾರ್ಯಕ್ರಮದ ಬಗ್ಗೆ ತಮ್ಮ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.