AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕವಿತಾ ಲಂಕೇಶ್ ಪುತ್ರಿ ಇಶಾ ಲಂಕೇಶ್ ಮೊದಲ ಸಿನಿಮಾಗೆ ಪ್ರೀತಂ ಗುಬ್ಬಿ ನಿರ್ದೇಶನ

ಪಿ. ಲಂಕೇಶ್ ಕುಟುಂಬದ ಮತ್ತೋರ್ವ ಪ್ರತಿಭೆ ಈಗ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಲಂಕೇಶ್ ಮೊಮ್ಮಗಳು ಇಶಾ ಲಂಕೇಶ್ ಅವರ ಹೊಸ ಸಿನಿಮಾದ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಚಿತ್ರಕ್ಕೆ ಪ್ರೀತಂ ಗುಬ್ಬಿ ಅವರು ಆ್ಯಕ್ಷನ್-ಕಟ್ ಹೇಳಲಿದ್ದಾರೆ. ರಂಗಭೂಮಿಯಲ್ಲಿ ಇಶಾ ಅವರು ಅನುಭವ ಪಡೆದಿದ್ದಾರೆ.

ಮದನ್​ ಕುಮಾರ್​
|

Updated on: Jul 08, 2026 | 9:04 PM

Share
ಪ್ರೀತಂ ಗುಬ್ಬಿ ನಿರ್ದೇಶನದ ನೂತನ ಚಿತ್ರದ ಮೂಲಕ ಕವಿತಾ ಲಂಕೇಶ್ ಪುತ್ರಿ ಇಶಾ ಲಂಕೇಶ್ ಅವರು ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಆ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ.

ಪ್ರೀತಂ ಗುಬ್ಬಿ ನಿರ್ದೇಶನದ ನೂತನ ಚಿತ್ರದ ಮೂಲಕ ಕವಿತಾ ಲಂಕೇಶ್ ಪುತ್ರಿ ಇಶಾ ಲಂಕೇಶ್ ಅವರು ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಆ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ.

1 / 5
ಇಶಾ ಲಂಕೇಶ್ ನಟನೆಯ ಈ ಹೊಸ ಚಿತ್ರಕ್ಕೆ ‘ನವಿಶಾ ಫಿಲ್ಮ್ಸ್’ ಬಂಡವಾಳ ಹೂಡಲಿದೆ. ಖ್ಯಾತ ಪತ್ರಕರ್ತ, ಲೇಖಕ ಪಿ. ಲಂಕೇಶ್ ಮೊಮ್ಮಗಳ ಸಿನಿಮಾ ಎಂಬ ಕಾರಣಕ್ಕೆ ಸಿನಿಪ್ರಿಯರಲ್ಲಿ ನಿರೀಕ್ಷೆ ಮೂಡಿದೆ.

ಇಶಾ ಲಂಕೇಶ್ ನಟನೆಯ ಈ ಹೊಸ ಚಿತ್ರಕ್ಕೆ ‘ನವಿಶಾ ಫಿಲ್ಮ್ಸ್’ ಬಂಡವಾಳ ಹೂಡಲಿದೆ. ಖ್ಯಾತ ಪತ್ರಕರ್ತ, ಲೇಖಕ ಪಿ. ಲಂಕೇಶ್ ಮೊಮ್ಮಗಳ ಸಿನಿಮಾ ಎಂಬ ಕಾರಣಕ್ಕೆ ಸಿನಿಪ್ರಿಯರಲ್ಲಿ ನಿರೀಕ್ಷೆ ಮೂಡಿದೆ.

2 / 5
ಈ ಸಿನಿಮಾವನ್ನು ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಪ್ರೀತಂ ಗುಬ್ಬಿ ನಿರ್ದೇಶಿಸಲಿದ್ದಾರೆ. ‘ನವಿಶಾ ಫಿಲ್ಮ್ಸ್’ ಮೂಲಕ ಶಿವರಾಜ್ ಕನಗನಪಲ್ಲಿ ಅವರು ನಿರ್ಮಾಣ ಮಾಡುತ್ತಿದ್ದಾರೆ. ಇದು ಈ ಸಂಸ್ಥೆಯ 2ನೇ ಚಿತ್ರವಾಗಿದೆ.

ಈ ಸಿನಿಮಾವನ್ನು ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಪ್ರೀತಂ ಗುಬ್ಬಿ ನಿರ್ದೇಶಿಸಲಿದ್ದಾರೆ. ‘ನವಿಶಾ ಫಿಲ್ಮ್ಸ್’ ಮೂಲಕ ಶಿವರಾಜ್ ಕನಗನಪಲ್ಲಿ ಅವರು ನಿರ್ಮಾಣ ಮಾಡುತ್ತಿದ್ದಾರೆ. ಇದು ಈ ಸಂಸ್ಥೆಯ 2ನೇ ಚಿತ್ರವಾಗಿದೆ.

3 / 5
ಈಗಾಗಲೇ ರಂಗಭೂಮಿಯಲ್ಲಿ ಸಾಕಷ್ಟು ಹೆಸರು ಮಾಡಿರುವ ಇಶಾ ಲಂಕೇಶ್, ನಟನೆಗೆ ಬೇಕಾಗಿರುವ ಪೂರ್ವತಯಾರಿಗಳನ್ನು ಮಾಡಿಕೊಂಡಿದ್ದಾರೆ. ಅವರ ಅಭಿನಯ ಹೇಗಿರಲಿದೆ ಎಂಬ ಕೌತುಕ ಪ್ರೇಕ್ಷಕರಿಗೆ ಇದೆ.

ಈಗಾಗಲೇ ರಂಗಭೂಮಿಯಲ್ಲಿ ಸಾಕಷ್ಟು ಹೆಸರು ಮಾಡಿರುವ ಇಶಾ ಲಂಕೇಶ್, ನಟನೆಗೆ ಬೇಕಾಗಿರುವ ಪೂರ್ವತಯಾರಿಗಳನ್ನು ಮಾಡಿಕೊಂಡಿದ್ದಾರೆ. ಅವರ ಅಭಿನಯ ಹೇಗಿರಲಿದೆ ಎಂಬ ಕೌತುಕ ಪ್ರೇಕ್ಷಕರಿಗೆ ಇದೆ.

4 / 5
ಸದ್ಯಕ್ಕೆ ಈ ಸಿನಿಮಾದ ಹೆಸರು ಏನೆಂಬುದು ಬಹಿರಂಗ ಆಗಿಲ್ಲ. ನೂತನ ಚಿತ್ರದ ನಾಯಕಿಯ ಕುರಿತಾಗಿ ಮಾತ್ರ ತಿಳಿಸಿರುವ ನಿರ್ದೇಶಕ ಪ್ರೀತಂ ಗುಬ್ಬಿ ಅವರು ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡಲಿದ್ದಾರೆ.

ಸದ್ಯಕ್ಕೆ ಈ ಸಿನಿಮಾದ ಹೆಸರು ಏನೆಂಬುದು ಬಹಿರಂಗ ಆಗಿಲ್ಲ. ನೂತನ ಚಿತ್ರದ ನಾಯಕಿಯ ಕುರಿತಾಗಿ ಮಾತ್ರ ತಿಳಿಸಿರುವ ನಿರ್ದೇಶಕ ಪ್ರೀತಂ ಗುಬ್ಬಿ ಅವರು ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡಲಿದ್ದಾರೆ.

5 / 5
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us