Pregnancy Mood Swings: ಗರ್ಭಾವಸ್ಥೆಯಲ್ಲಿರುವಾಗ ಪದೇ ಪದೇ ಕಿರಿಕಿರಿಯಾಗುವುದನ್ನು ತಪ್ಪಿಸಲು ಈ ರೀತಿ ಮಾಡಿ

ಗರ್ಭಾವಸ್ಥೆಯಲ್ಲಿ ಪ್ರತಿಯೊಬ್ಬ ಮಹಿಳೆಯೂ ಅನೇಕ ದೈಹಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಜೊತೆಗೆ, ಮಾನಸಿಕ ಸ್ಥಿತಿಯ ಮೇಲೂ ಪರಿಣಾಮ ಬೀರುತ್ತದೆ. ವಾಸ್ತವದಲ್ಲಿ, ಗರ್ಭಾವಸ್ಥೆಯಲ್ಲಿರುವಾಗ ಹಾರ್ಮೋನುಗಳ ಬದಲಾವಣೆಗಳಾಗುತ್ತವೆ. ಇದರಿಂದ ಮನಸ್ಥಿತಿ ಸರಿಯಾಗಿ ಇರುವುದಿಲ್ಲ, ನಿದ್ರಾಹೀನತೆ, ಆಯಾಸ ಮತ್ತು ಕಿರಿಕಿರಿಯಂತಹ ಸಮಸ್ಯೆಗಳು ಉಂಟಾಗಬಹುದು. ಆದರೆ ಈ ರೀತಿಯ ಸನ್ನಿವೇಶಗಳು ಬಂದಾಗ ಕೆಲವು ಸಲಹೆಗಳನ್ನು ಅನುಸರಿಸುವ ಮೂಲಕ ಈ ಸಮಸ್ಯೆಗಳನ್ನು ಸುಲಭವಾಗಿ ನಿವಾರಿಸಬಹುದು.

ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on:Jul 02, 2024 | 4:22 PM

ಪ್ರತಿಯೊಬ್ಬ ಮಹಿಳೆಗೂ ತಾಯ್ತನದ ದಿನಗಳು ತುಂಬಾ ವಿಶೇಷವಾಗಿದೆ. ಆದರೆ ಗರ್ಭಾವಸ್ಥೆಯಲ್ಲಿ ಪ್ರತಿಯೊಬ್ಬ ಮಹಿಳೆಯೂ ಅನೇಕ ದೈಹಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಜೊತೆಗೆ, ಮಾನಸಿಕ ಸ್ಥಿತಿಯ ಮೇಲೂ ಪರಿಣಾಮ ಬೀರುತ್ತದೆ. ವಾಸ್ತವದಲ್ಲಿ, ಗರ್ಭಾವಸ್ಥೆಯಲ್ಲಿರುವಾಗ ಹಾರ್ಮೋನುಗಳ ಬದಲಾವಣೆಗಳಾಗುತ್ತವೆ. ಇದರಿಂದ ಮನಸ್ಥಿತಿ ಸರಿಯಾಗಿ ಇರುವುದಿಲ್ಲ, ನಿದ್ರಾಹೀನತೆ, ಆಯಾಸ ಮತ್ತು ಕಿರಿಕಿರಿಯಂತಹ ಸಮಸ್ಯೆಗಳು ಉಂಟಾಗಬಹುದು. ಆದರೆ ಈ ರೀತಿಯ ಸನ್ನಿವೇಶಗಳು ಬಂದಾಗ ಕೆಲವು ಸಲಹೆಗಳನ್ನು ಅನುಸರಿಸುವ ಮೂಲಕ ಈ ಸಮಸ್ಯೆಗಳನ್ನು ಸುಲಭವಾಗಿ ನಿವಾರಿಸಬಹುದು.

1 / 6
ಗರ್ಭಾವಸ್ಥೆಯಲ್ಲಿ ಮನಸ್ಸಿನ ಸ್ಥಿತಿಯು ಹೆಚ್ಚಾಗಿ ದೇಹದ ಮೇಲೆ ಅವಲಂಬಿತವಾಗಿರುತ್ತದೆ. ಕಾಲು ನೋವು, ಹೊಟ್ಟೆಯ ಅಸ್ವಸ್ಥತೆ, ಆಯಾಸವಾಗುವುದು ಸಾಮಾನ್ಯವಾಗಿವೆ. ಇವುಗಳನ್ನು ತಪ್ಪಿಸಲು ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ವೈದ್ಯರ ಸಲಹೆಯಂತೆ ಎಳನೀರು, ಕಬ್ಬಿನ ರಸ, ನಿಂಬೆ ರಸ ಮತ್ತು ರಸಭರಿತ ಹಣ್ಣುಗಳನ್ನು ಆಹಾರದಲ್ಲಿ ಸೇರಿಸಿಕೊಳ್ಳಿ.

2 / 6
ಆಯಾಸ ನಿವಾರಿಸಿಕೊಳ್ಳಲು ಕೆಲವರು ಆಗಾಗ ಚಹಾ ಅಥವಾ ಕಾಫಿ ಕುಡಿಯುತ್ತಾರೆ. ಆದರೆ, ಗರ್ಭಾವಸ್ಥೆಯಲ್ಲಿರುವವರು ಇದನ್ನು ಮಾಡಬಾರದು. ಹೆಚ್ಚು ಚಹಾ ಅಥವಾ ಕಾಫಿ ಕುಡಿಯುವುದರಿಂದ ನಿರ್ಜಲೀಕರಣ ಉಂಟಾಗಬಹುದು. ಇದು ಆಯಾಸ, ನಿದ್ರಾಹೀನತೆ ಮತ್ತು ಸ್ನಾಯು ಸೆಳೆತದ ಸಮಸ್ಯೆಗಳನ್ನು ಹೆಚ್ಚಿಸುತ್ತದೆ.

3 / 6
ಅನೇಕ ಮಹಿಳೆಯರು ಗರ್ಭಾವಸ್ಥೆಯ ಸಮಯದಲ್ಲಿ ನಿದ್ರಾಹೀನತೆಯ ಸಮಸ್ಯೆಯಿಂದ ಬಳಲುತ್ತಾರೆ. ಈ ಸಮಸ್ಯೆಯನ್ನು ತಪ್ಪಿಸಲು ಮಲಗುವಾಗ ಮೃದುವಾದ ದಿಂಬನ್ನು ಬಳಸಬೇಕು. ನಿದ್ರೆ ಮಾಡುವ ಸಮಯದಲ್ಲಿ ಪಾದಗಳಿಗೆ ಎಣ್ಣೆಯಿಂದ ಮಸಾಜ್ ಮಾಡಿಕೊಳ್ಳಿ. ರಾತ್ರಿ ಮಲಗುವ ಮೊದಲು ಮೊಬೈಲ್ ಅಥವಾ ಟಿವಿ ನೋಡುವುದನ್ನು ತಪ್ಪಿಸಿ.

4 / 6
ಗರ್ಭಾವಸ್ಥೆಯಲ್ಲಿ ಕ್ರಿಯಾಶೀಲರಾಗಿರುವುದು ಆರೋಗ್ಯಕರ ದೇಹ, ಮನಸ್ಸು ಮತ್ತು ಹೆರಿಗೆಗೂ ಮುಖ್ಯವಾಗಿದೆ. ಎಲ್ಲಾ ಸಮಯದಲ್ಲೂ ಮಲಗುವ ಬದಲು ದೈನಂದಿನ ದಿನಚರಿಯಲ್ಲಿ ಲಘು ಚಟುವಟಿಕೆಗಳನ್ನು ಸೇರಿಸಿಕೊಳ್ಳಿ. ಮುಂಜಾನೆ ಸಮಯದಲ್ಲಿ ಲಘು ಯೋಗ, ಪ್ರಾಣಾಯಾಮವನ್ನು  ಮಾಡಬೇಕು. ಆಗ ಮನಸ್ಥಿತಿ ಉತ್ತಮವಾಗಿರುತ್ತದೆ.

5 / 6
ಅದರಲ್ಲಿಯೂ ಗರ್ಭಿಣಿಯರಿಗೆ ಆಹಾರ ಬಹಳ ಮುಖ್ಯ. ಗರ್ಭಾವಸ್ಥೆಯಲ್ಲಿ ಅತಿಯಾಗಿ ತಿನ್ನುವುದು ಒಳ್ಳೆಯದಲ್ಲ. ಆದರೆ, ನೀವು ಸಮಯಕ್ಕೆ ಸರಿಯಾಗಿ ತಿನ್ನದಿದ್ದರೆ, ನಿಮ್ಮ ಹುಟ್ಟಲಿರುವ ಮಗುವಿನ ಆರೋಗ್ಯಕ್ಕೂ ಹಾನಿಯಾಗುತ್ತದೆ. ಆದ್ದರಿಂದ ಪೌಷ್ಟಿಕ ಆಹಾರವನ್ನು ಕಡಿಮೆ ಪ್ರಮಾಣದಲ್ಲಿ ತೆಗೆದುಕೊಳ್ಳಿ. ಎಣ್ಣೆ, ಮಸಾಲೆ, ಉಪ್ಪು ಮತ್ತು ಸಕ್ಕರೆಯಂತಹ ಆಹಾರಗಳನ್ನು ಕಡಿಮೆ ತಿನ್ನಿ. ಆಗ ದೇಹ ಮತ್ತು ಮನಸ್ಸು ಆರೋಗ್ಯಕರವಾಗಿರುತ್ತದೆ.

6 / 6

Published On - 4:20 pm, Tue, 2 July 24

Follow us
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ

ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ

ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು

ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?

ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ

ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ

ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ

Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು

ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು

ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ