2021ರಲ್ಲಿ ತೆರೆಗೆ ಬಂದ ನೆನಪಿರಲಿ ಪ್ರೇಮ್ ಹಾಗೂ ಬೃಂದಾ ಆಚಾರ್ಯ ನಟನೆಯ ‘ಪ್ರೇಮಂ ಪೂಜ್ಯಂ’ ಸಿನಿಮಾ ಮೆಚ್ಚುಗೆ ಪಡೆದುಕೊಂಡಿತು.
ಈ ಚಿತ್ರದಲ್ಲಿ ಬೃಂದಾ ಆಚಾರ್ಯ ಅವರು ನಟನೆ ಮೂಲಕ ಮೋಡಿ ಮಾಡಿದ್ದರು. ಈಗ ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ.
‘ಜೂಲಿಯಟ್ 2’ ಚಿತ್ರದ ಮೂಲಕ ತೆರೆಮೇಲೆ ಬರಲು ಬೃಂದಾ ಆಚಾರ್ಯ ರೆಡಿ ಆಗಿದ್ದಾರೆ. ಈ ಸಿನಿಮಾ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.
ಬೃಂದಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ.
ಬೃಂದಾ ಅವರ ಲುಕ್ ನೋಡಿ ಅನೇಕರು ಫಿದಾ ಆಗಿದ್ದಾರೆ. ಅವರ ಹೊಸ ಸಿನಿಮಾ ಶೀಘ್ರದಲ್ಲೇ ಸೆಟ್ಟೇರಲಿ ಎಂಬುದು ಫ್ಯಾನ್ಸ್ ಕೋರಿಕೆ.