- Kannada News Photo gallery President, Prime Minister and dignitaries paid tribute to Mahatma Gandhi's mausoleum
Gandhi Jayanti 2023: ಮಹಾತ್ಮ ಗಾಂಧೀಜಿ ಸಮಾಧಿಗೆ ರಾಷ್ಟ್ರಪತಿ, ಪ್ರಧಾನಿ ಸೇರಿದಂತೆ ಗಣ್ಯರಿಂದ ಗೌರವ
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 154ನೇ ಜನ್ಮದಿನದ ಪ್ರಯುಕ್ತ ರಾಜ್ಘಾಟ್ನಲ್ಲಿ ಅವರು ಸಮಾಧಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧನಕರ್, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಗಣ್ಯರು ಗೌರವ ಸಲ್ಲಿಸಿದರು.
Updated on: Oct 02, 2023 | 10:22 AM

ಇಂದು ರಾಜ್ಘಾಟ್ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 154ನೇ ಜನ್ಮದಿನದ ಪ್ರಯುಕ್ತ ಅವರ ಸಮಾಧಿಗೆ ರಾಷ್ಟ್ರಪತಿ, ಪ್ರಧಾನ ಮಂತ್ರಿ ಸೇರಿದಂತೆ ಅನೇಕ ಗಣ್ಯರು ಗೌರವ ಸಲ್ಲಿಸಿದ್ದಾರೆ.

ರಾಷ್ಟ್ರಪತಿ ಅವರು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಗಾಂಧೀಜಿಯವರ ಸಮಾಧಿಗೆ ಪುಷ್ಪರ್ಚಣೆಯನ್ನು ಮಾಡಿದರು.

ಪುಷ್ಪನಮನ ಸಲ್ಲಿಸಿದ ನಂತರ ಪ್ರಧಾನಿ ಮೋದಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಸ್ವಾತಂತ್ರ್ಯ ಹೋರಾಟದಲ್ಲಿ ಗಾಂಧೀಜಿ ಅವರ ಪಾತ್ರ ದೊಡ್ಡದ್ದು ಎಂದು ಬಣ್ಣಿಸಿದರು.

ಉಪರಾಷ್ಟ್ರಪತಿ ಜಗದೀಪ್ ಧನಕರ್ ಪ್ರಧಾನಿ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ಗಾಂಧಿ ಸಮಾಧಿ ನಮಿಸಿದರು.

ಲೋಕಸಭೆ ಸ್ವೀಕರ್ ಓಂ ಬಿರ್ಲಾ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಗಾಂಧೀಜಿಯವರ ಸಮಾಧಿಗೆ ಪುಷ್ಪರ್ಚಣೆ ಮಾಡಿದರು.

ಇನ್ನು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಕೂಡ ಈ ಕಾರ್ಯಕ್ರಮದಲ್ಲಿ ಹಾಜರಾಗಿದ್ದು, ಗಾಂಧೀಜಿ ಸಮಾಧಿಗೆ ಗೌರವ ಸಲ್ಲಿಸಿದರು.

ಲೋಕಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಗಾಂಧಿ ಸಮಾಧಿಗೆ ಕೈಮುಗಿದು ಗೌರವ ಸೂಚಿಸಿದರು.




