- Kannada News Photo gallery Prime Minister Modi inaugurated the new campus of Nalanda University, here is the photo national News
Nalanda University: ನಳಂದ ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ ಉದ್ಘಾಟಿಸಿದ ಪ್ರಧಾನಿ ಮೋದಿ, ಇಲ್ಲಿದೆ ಫೋಟೋ
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬಿಹಾರದ ನಳಂದ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ್ದು, ಅಲ್ಲಿ ನೂತನವಾಗಿ ನಿರ್ಮಿಸಿರುವ ಕ್ಯಾಂಪಸ್ ಉದ್ಘಾಟಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೂಡ ಭಾಗಿಯಾಗಿದ್ದಾರೆ.
Updated on: Jun 19, 2024 | 11:11 AM

ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಇಂದು ಮೊದಲ ಬಾರಿಗೆ ಬಿಹಾರಕ್ಕೆ ಭೇಟಿ ನೀಡಿದ್ದಾರೆ. ರಾಜಗೀರ್ ಅಂತರಾಷ್ಟ್ರೀಯ ನಳಂದ ವಿಶ್ವವಿದ್ಯಾಲಯದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ಪ್ರಧಾನಿ ಮೋದಿಯವರ ರಾಜಗೀರ್ ಭೇಟಿಯು ಬನಾರಸ್‌ನಿಂದ ಪ್ರಾರಂಭವಾಗಿದ್ದು, ಅಂತಾರಾಷ್ಟ್ರೀಯ ನಳಂದಾ ವಿಶ್ವವಿದ್ಯಾಲಯದ ಆವರಣದಲ್ಲಿ ನಿರ್ಮಿಸಲಾದ ಹೆಲಿಪ್ಯಾಡ್‌ನಲ್ಲಿ ಇಳಿದಿದ್ದಾರೆ. ಒಟ್ಟು ಒಂದೂವರೆ ಗಂಟೆಗಳ ಕಾಲ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ.

ನಳಂದಾ ವಿಶ್ವವಿದ್ಯಾಲಯದಲ್ಲಿ ಓದುತ್ತಿರುವ ಭಾರತ ಮತ್ತು ವಿದೇಶಗಳ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ. 21 ನೇ ಶತಮಾನದಲ್ಲಿ ಹೊಸ ನಳಂದ ವಿಶ್ವವಿದ್ಯಾಲಯಕ್ಕೆ ಹಿಂದಿನ (800 ನೂರು ವರ್ಷಗಳ ಹಿಂದೆ) ಅದೇ ಸ್ಥಾನವನ್ನು ನೀಡುವುದು ಭಾರತ ಸರ್ಕಾರದ ಪ್ರಯತ್ನವಾಗಿದೆ.

ಹೊಸ ಕ್ಯಾಂಪಸ್ ಶಿಕ್ಷಣ ಕ್ಷೇತ್ರದಲ್ಲಿ ಪ್ರಮುಖ ಕೇಂದ್ರವಾಗಿ ಸ್ಥಾಪಿಸುವ ಸರ್ಕಾರದ ಉದ್ದೇಶವನ್ನು ಪ್ರತಿಬಿಂಬಿಸುತ್ತದೆ. 2010 ರಲ್ಲಿ, ಭಾರತ ಸರ್ಕಾರವು ಈ ಕಾರ್ಯಕ್ಕೆ ಚಾಲನೆಯನ್ನು ನೀಡಿತ್ತು.

ನಳಂದ ವಿಶ್ವವಿದ್ಯಾನಿಲಯದ ಹೊಸ ಕ್ಯಾಂಪಸ್ನಲ್ಲಿ ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್, ಬಿಹಾರ ರಾಜ್ಯಪಾಲ ರಾಜೇಂದ್ರ ಅರ್ಲೇಕರ್, ಸಿಎಂ ನಿತೀಶ್ ಕುಮಾರ್, ಉಪ ಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಸಿನ್ಹಾ ಮತ್ತು ಇತರ ಪ್ರತಿನಿಧಿಗಳು ಹಾಗೂ 17 ದೇಶಗಳ ರಾಯಭಾರಿಗಳೂ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

ವಿಶ್ವವಿದ್ಯಾನಿಲಯವನ್ನು ಭಾರತ ಮತ್ತು ಪೂರ್ವ ಏಷ್ಯಾ ಶೃಂಗಸಭೆ (EAS) ದೇಶಗಳ ಜಂಟಿ ಸಹಯೋಗವಾಗಿ ಕಲ್ಪಿಸಲಾಗಿದೆ. ಅತ್ಯಾಧುನಿಕ ಮೂಲಸೌಕರ್ಯಗಳೊಂದಿಗೆ ವಿಶ್ವವಿದ್ಯಾಲಯದ ಕ್ಯಾಂಪಸ್ 450 ಎಕರೆಗಳ ವಿಸ್ತರಣೆಯನ್ನು ಹೊಂದಿದೆ.




