- Kannada News Photo gallery Prime Minister Narendra Modi inaugurate Sri Madhusudan Sai Institute of Medical Sciences and Research in Chikkaballapur
Chikkaballapur Medical College: ಮಧುಸೂದನ್ ವೈದ್ಯಕೀಯ ಶಿಕ್ಷಣ ಸಂಸ್ಥೆ ಉದ್ಘಾಟಿಸಿದ ನರೇಂದ್ರ ಮೋದಿ
PM Modi in Chikkaballapur: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು (ಮಾರ್ಚ್ 25) ಭಾರತರತ್ನ ಸರ್ ಎಂ.ವಿಶ್ವೇಶ್ವರಯ್ಯನವರ ಜನ್ಮಸ್ಥಳ ಮುದ್ದೇನಹಳ್ಳಿ ಗ್ರಾಮಕ್ಕೆ ಆಗಮಿಸಿದ್ದು ಮುದ್ದೇನಹಳ್ಳಿ ಬಳಿ ಇರುವ ಸತ್ಯಸಾಯಿ ಆಶ್ರಮದಲ್ಲಿ ಖಾಸಗಿ ಮೆಡಿಕಲ್ ಕಾಲೇಜು ಉದ್ಘಾಟನೆ ಮಾಡಿದ್ದಾರೆ.
Updated on: Mar 25, 2023 | 12:46 PM

ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು (ಮಾರ್ಚ್ 25) ಭಾರತರತ್ನ ಸರ್ ಎಂ.ವಿಶ್ವೇಶ್ವರಯ್ಯನವರ ಜನ್ಮಸ್ಥಳ ಮುದ್ದೇನಹಳ್ಳಿ ಗ್ರಾಮಕ್ಕೆ ಆಗಮಿಸಿದ್ದು ಮುದ್ದೇನಹಳ್ಳಿ ಬಳಿ ಇರುವ ಸತ್ಯಸಾಯಿ ಆಶ್ರಮದಲ್ಲಿ ಖಾಸಗಿ ಮೆಡಿಕಲ್ ಕಾಲೇಜು ಉದ್ಘಾಟನೆ ಮಾಡಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಗ್ರಾಮದ ಬಳಿ ಇರುವ ಸತ್ಯಸಾಯಿ ಗ್ರಾಮದಲ್ಲಿ ಸುಮಾರು 400 ಕೋಟಿ ರೂಪಾಯಿ ವೆಚ್ಚದಲ್ಲಿ ಸತ್ಯಸಾಯಿ ಲೋಕಸೇವಾ ಟ್ರಸ್ಟ್ನಿಂದ ಮಧುಸೂದನ್‌ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಮೆಡಿಕಲ್ ಕಾಲೇಜು ತಲೆ ಎತ್ತಿದೆ. ನರೇಂದ್ರ ಮೋದಿಯವರು ಮೆಡಿಕಲ್ ಕಾಲೇಜು ಉದ್ಘಾಟಿಸಿದ್ದಾರೆ.

ಮಧುಸೂದನ್ ಸಾಯಿ ವೈದ್ಯಕೀಯ ಸಂಸ್ಥೆ ಉದ್ಘಾಟನಾ ಕಾರ್ಯಕ್ರಮದ ವೇದಿಕೆಯಲ್ಲಿ ಪ್ರಧಾನಿ ಮೋದಿಗೆ ಸ್ಮರಣಿಕೆ ನೀಡಿ ಸನ್ಮಾನ ಮಾಡಲಾಯಿತು. ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಡಾ.ಕೆ.ಸುಧಾಕರ್ ಉಪಸ್ಥಿತರಿದ್ದರು.

ಮಧುಸೂದನ್ ವೈದ್ಯಕೀಯ ಶಿಕ್ಷಣ ಸಂಸ್ಥೆ ಉದ್ಘಾಟಿಸಿದ ಮೋದಿ, ಕರ್ನಾಟಕದ ನನ್ನ ಸಹೋದರ, ಸಹೋದರಿಯರಿಗೆ ನಮಸ್ಕಾರ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದರು. ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ವಿಶ್ವೇಶ್ವರಯ್ಯ ಜನ್ಮಸ್ಥಳವಾಗಿದೆ. ಇಂತಹ ಪುಣ್ಯಭೂಮಿಗೆ ಬಂದಿದ್ದು ನನ್ನ ಸೌಭಾಗ್ಯ ಎಂದರು. ಹಾಗೂ ಸತ್ಯಸಾಯಿ ಆಶ್ರಮದಿಂದ ಶೈಕ್ಷಣಿಕ, ಸಾಮಾಜಿಕ, ವೈದ್ಯಕೀಯ ಸೇವೆ, ಸಾಮಾಜಿಕ ಕಾರ್ಯಗಳ ಬಗ್ಗೆ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದರು.

ಬೆಂಗಳೂರಿನ ಹೆಚ್‌ಎಎಲ್ ಏರ್ಪೋರ್ಟ್ನಿಂದ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಗ್ರಾಮಕ್ಕೆ ಬಂದಿಳಿದ ಮೋದಿ, ಅಲ್ಲಿಂದ ನೇರವಾಗಿ ಭಾರತರತ್ನ ಸರ್ ಎಂ.ವಿಶ್ವೇಶ್ವರಯ್ಯನವರ ಸಮಾಧಿ ಸ್ಮಾರಕ ಸ್ಥಳಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದರು.

ಸರ್ ಎಂ.ವಿಶ್ವೇಶ್ವರಯ್ಯನವರ ಸಮಾಧಿ ಸ್ಮಾರಕ ಹಾಗೂ ಮ್ಯೂಸಿಯಂಗೆ ಪ್ರಧಾನಿಗಳು ಭೇಟಿ ನೀಡಿದರು.



















