
ನಟಿ ಪ್ರಿಯಾ ಆನಂದ್ ಅವರು ಕನ್ನಡ ಮಂದಿಗೆ ಹೆಚ್ಚು ಪರಿಚಿತರಾಗಿದ್ದಾರೆ. ಪುನೀತ್ ರಾಜ್ಕುಮಾರ್ ನಟನೆಯ ‘ರಾಜಕುಮಾರ’ ಹಾಗೂ ‘ಜೇಮ್ಸ್’ ಚಿತ್ರದಲ್ಲಿ ಅವರು ನಟಿಸಿದ್ದಾರೆ. ಈ ಕಾರಣಕ್ಕೆ ಅವರು ಕರ್ನಾಟಕದಲ್ಲಿ ಸಖತ್ ಜನಪ್ರಿಯತೆ ಪಡೆದುಕೊಂಡಿದ್ದಾರೆ.

ಪ್ರಿಯಾ ಆನಂದ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಹಲವು ಫೋಟೋಶೂಟ್ಗಳನ್ನು ಮಾಡಿ ಹಂಚಿಕೊಳ್ಳುತ್ತಿರುತ್ತಾರೆ. ಈ ಕಾರಣದಿಂದಲೂ ಅವರಿಗೆ ಅಭಿಮಾನಿ ಬಳಗ ಹಿರಿದಾಗುತ್ತಿದೆ. ಅವರನ್ನು ಒಂದು ಕೋಟಿಗೂ ಅಧಿಕ ಮಂದಿ ಹಿಂಬಾಲಿಸುತ್ತಿದ್ದಾರೆ.

ಪ್ರಿಯಾ ಆನಂದ್ ಹಾಗೂ ಪುನೀತ್ ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಪುನೀತ್ ನಿಧನ ಹೊಂದಿದ ಸಂದರ್ಭದಲ್ಲಿ ಪ್ರಿಯಾ ಆನಂದ್ ಸಂತಾಪ ಸೂಚಿಸಿದ್ದರು.

ಸದ್ಯ ಪ್ರಿಯಾ ಆನಂದ್ ಅವರು ಮೂರು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಈ ವರ್ಷ ‘ಜೇಮ್ಸ್’ ಹೊರತುಪಡಿಸಿ ಅವರ ಬೇರೆ ಯಾವುದೇ ಸಿನಿಮಾ ತೆರೆಗೆ ಬಂದಿಲ್ಲ.

ಪ್ರಿಯಾ ಆನಂದ್