ಬೆಂಗಳೂರು ಗ್ರಾಮಾಂತರ: ತ್ಯಾಜ್ಯ ವಸ್ತುಗಳಿಂದ ಮಾದರಿ ಶೌಚಾಲಯ ನಿರ್ಮಾಣ; ಪರಿಶೀಲಿಸಿದ ಖರ್ಗೆ, ಇಲ್ಲಿದೆ ಪೋಟೋಸ್​

Edited By: ಕಿರಣ್ ಹನುಮಂತ್​ ಮಾದಾರ್

Updated on: Nov 03, 2023 | 10:29 PM

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶದ ಖಾಸಗಿ ಕೈಗಾರಿಕೆಯಲ್ಲಿ ನೂತನವಾಗಿ ತ್ಯಾಜ್ಯ ವಸ್ತುಗಳನ್ನ ಬಳಕೆ ಮಾಡಿಕೊಂಡು ನಿರ್ಮಾಣ ಮಾಡಿರುವ ಕಡಿಮೆ‌ ವೆಚ್ಚದ ಶೌಚಾಲಯಗಳ ಮಾದರಿಯನ್ನ ತಯಾರಿಸಿದ್ದಾರೆ. ಇಂದು(ನ.03) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್​ ಖರ್ಗೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.

1 / 6
ತ್ಯಾಜ್ಯ ವಸ್ತುಗಳಿಂದ ಮಾದರಿ ಶೌಚಾಲಯ ನಿರ್ಮಾಣ ಮಾಡಲಾಗಿದ್ದು, ಕಲ್ಯಾಣ ಕರ್ನಾಟಕದಲ್ಲಿ 400 ಶೌಚಾಲಯ ನಿರ್ಮಾಣಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಚಿಂತನೆ ನಡೆಸಿದ್ದಾರೆ.

ತ್ಯಾಜ್ಯ ವಸ್ತುಗಳಿಂದ ಮಾದರಿ ಶೌಚಾಲಯ ನಿರ್ಮಾಣ ಮಾಡಲಾಗಿದ್ದು, ಕಲ್ಯಾಣ ಕರ್ನಾಟಕದಲ್ಲಿ 400 ಶೌಚಾಲಯ ನಿರ್ಮಾಣಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಚಿಂತನೆ ನಡೆಸಿದ್ದಾರೆ.

2 / 6

ಹೌದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಸುಲಭವಾಗಿ ಕಡಿಮೆ ಖರ್ಚಿನಲ್ಲಿ, ಕಡಿಮೆ ಅವಧಿಯಲ್ಲಿ ಮಾದರಿ ಶೌಚಾಲಯಗಳನ್ನ ನಿರ್ಮಾಣ ಮಾಡಲು ಸಚಿವ ಪ್ರಿಯಾಂಕ್​ ಖರ್ಗೆ ಚಿಂತನೆ ನಡೆಸಿದ್ದು, ಮಾದರಿ ಶೌಚಾಲಯಗಳ ಪರಿಶೀಲನೆಯನ್ನ ನಡೆಸಿದ್ದಾರೆ.

3 / 6

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶದ ಖಾಸಗಿ ಕೈಗಾರಿಕೆಯಲ್ಲಿ ನೂತನವಾಗಿ ತ್ಯಾಜ್ಯ ವಸ್ತುಗಳನ್ನ ಬಳಕೆ ಮಾಡಿಕೊಂಡು ನಿರ್ಮಾಣ ಮಾಡಿರುವ ಕಡಿಮೆ‌ ವೆಚ್ಚದ ಶೌಚಾಲಯಗಳ ಮಾದರಿಯನ್ನ ತಯಾರಿಸಿದ್ದಾರೆ.

4 / 6

ಇಂದು(ನ.03) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್​ ಖರ್ಗೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.

5 / 6

ಜೊತೆಗೆ ಸುಲಭವಾಗಿ ನಿರ್ಮಾಣ ಮಾಡಬಹುದಾದ ಇಂತಹ 400 ಶೌಚಾಲಯಗಳನ್ನ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಹಿಳೆಯರಿಗಾಗಿ ನಿರ್ಮಾಣ ಮಾಡಲು ಚಿಂತನೆ ನಡೆಸಿದ್ದು, ಆ ನಿಟ್ಟಿನಲ್ಲಿ ತಜ್ಞರ ಜೊತೆ ಆಗಮಿಸಿದ್ದರು.

6 / 6

ಇನ್ನು ಈ ವೇಳೆ ಸಚಿವರಿಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಆಯುಕ್ತ ಪವನ್ ಕುಮಾರ್, ಪಂಚಾಯತ್ ರಾಜ್ ಆಯುಕ್ತರಾದ ಪ್ರಿಯಾಂಕಾ ಮೇರಿ ಪ್ರಾನ್ಸಿಸ್ ಸ್ಥಳೀಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು ಸೇರಿದಂತೆ ಹಲವು ಅಧಿಕಾರಿಗಳು ಸಾಥ್ ನೀಡಿದ್ರು.

ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More
Loading...
Unable to load recommendations.
Follow Us