
ಖ್ಯಾತ ಪಾಪ್ ಸಿಂಗರ್ ನಿಕ್ ಜೋನಸ್ ಜತೆ ವಿವಾಹವಾದ ನಂತರ ಪ್ರಿಯಾಂಕಾ ಚೋಪ್ರಾ ಅಮೆರಿಕದಲ್ಲಿಯೇ ಸೆಟಲ್ ಆಗಿದ್ದಾರೆ. ಅವರು ಭಾರತ ತೊರೆದರೂ ಇಲ್ಲಿಯ ಸಂಸ್ಕೃತಿಯನ್ನು ಚೂರೂ ಮರೆತಿಲ್ಲ.

ಅವರು ವಿದೇಶದಲ್ಲಿ ಇದ್ದುಕೊಂಡು ಭಾರತೀಯ ಸಂಸ್ಕೃತಿಯನ್ನು ಆಚರಿಸುತ್ತಿದ್ದಾರೆ. ಈಗ ದೀಪಾವಳಿ ಹಬ್ಬದ ಸಂಭ್ರಮ. ಹಿಂದುಗಳ ಪಾಲಿಗೆ ಇದು ದೊಡ್ಡ ಹಬ್ಬ. ಇದನ್ನು ಪ್ರಿಯಾಂಕಾ ಚೋಪ್ರಾ ಸಂಭ್ರಮದಿಂದ ಆಚರಿಸಿದ್ದಾರೆ.

ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಅವರ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅಕ್ಟೋಬರ್ 4ರಂದು ಎಲ್ಲೆಡೆ ಲಕ್ಷ್ಮೀ ಪೂಜೆ ಆಚರಿಸಲಾಗಿದೆ. ಪ್ರಿಯಾಂಕಾ ಚೋಪ್ರಾ ಕೂಡ ಇದನ್ನು ಮಾಡಿದ್ದಾರೆ.

ಪತಿ ನಿಕ್ ಜೋನಸ್ ಜತೆ ಸೇರಿಕೊಂಡು ಪ್ರಿಯಾಂಕಾ ಹಬ್ಬವನ್ನು ಆಚರಣೆ ಮಾಡಿದ್ದಾರೆ.

ನಿಕ್ ಜೋನಸ್ ಬಿಳಿ ಕುರ್ತಾ ತೊಟ್ಟರೆ, ಪ್ರಿಯಾಂಕಾ ಹಳದಿ ಬಣ್ಣದ ಸೀರೆ ಉಟ್ಟಿದ್ದಾರೆ.