Updated on: Jun 27, 2022 | 6:46 PM
ನಟಿ ಪ್ರಿಯಾಂಕಾ ಚೋಪ್ರಾ ಅವರು ಸದ್ಯ ಹಾಲಿವುಡ್ನಲ್ಲಿ ಸೆಟಲ್ ಆಗಿದ್ದಾರೆ. ಅಲ್ಲಿನ ವೆಬ್ ಸೀರಿಸ್ಗಳಲ್ಲಿ ನಟಿಸುತ್ತಿದ್ದಾರೆ. ಈಗ ಪ್ರಿಯಾಂಕಾ ಚೋಪ್ರಾ ಅವರು ವೆಕೇಶನ್ ಮೂಡ್ಗೆ ತೆರಳಿದ್ದಾರೆ. ಪತಿಯ ಜತೆ ಅವರು ಬೀಚ್ನಲ್ಲಿ ಸಮಯ ಕಳೆಯುತ್ತಿದ್ದಾರೆ.
ಪ್ರಿಯಾಂಕಾ ಚೋಪ್ರಾ ಅವರು ಬಾಲಿವುಡ್ನಲ್ಲಿ ಸಾಕಷ್ಟು ಹೆಸರು ಮಾಡಿದರು. ಆ ಬಳಿಕ ಅವರಿಗೆ ನಿಕ್ ಪರಿಚಯ ಆಯಿತು. ಪರಸ್ಪರ ಪ್ರೀತಿಸಿ ಇಬ್ಬರೂ ಮದುವೆ ಆದರು.
ನಿಕ್ ಜೋನಸ್ ಅಮೆರಿಕದ ಪಾಪ್ ಸಿಂಗರ್. ವಯಸ್ಸಿನಲ್ಲಿ ಪ್ರಿಯಾಂಕಾ ಚೋಪ್ರಾಗಿಂತ ಸಣ್ಣವರು. ಆದರೆ, ಇವರ ಪ್ರೀತಿಗೆ ವಯಸ್ಸು ಅಡ್ಡಿ ಆಗಲೇ ಇಲ್ಲ. ಇಬ್ಬರೂ ಮದುವೆ ಆಗಿ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ.
ಪ್ರಿಯಾಂಕಾ ಅವರು ಈಗ ವೆಕೇಶನ್ಮೂಡ್ನಲ್ಲಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತುತ್ತಿದ್ದಾರೆ.
ಇತ್ತೀಚೆಗೆ ಪ್ರಿಯಾಂಕಾ ಹಾಗೂ ನಿಕ್ ಬಾಡಿಗೆ ತಾಯ್ತನದ ಮೂಲಕ ಮಗು ಪಡೆದರು. ಈ ಮಗುವಿಗೆ ಪ್ರಿಯಾಂಕಾ ಅವರು ಮಾಲ್ತಿ ಎಂದು ಹೆಸರು ಇಟ್ಟಿದ್ದಾರೆ.