
ನಟಿ ಪ್ರಿಯಾಂಕಾ ಚೋಪ್ರಾ ಅವರು ಬಾಲಿವುಡ್ಗಿಂತಲೂ ಹಾಲಿವುಡ್ನಲ್ಲೇ ಹೆಚ್ಚು ಬ್ಯುಸಿ ಆಗಿದ್ದಾರೆ. ನಿಕ್ ಜೋನಸ್ ಜೊತೆ ಮದುವೆ ಆದ ಬಳಿಕ ಅವರು ಅಮೆರಿಕದಲ್ಲಿ ಸೆಟ್ಲ್ ಆಗಿದ್ದಾರೆ. ಅಲ್ಲಿಯೂ ಅವರಿಗೆ ದೊಡ್ಡ ಮಟ್ಟದ ಅಭಿಮಾನಿ ಬಳಗ ಇದೆ.

ಜಾಗತಿಕ ಮಟ್ಟದಲ್ಲಿ ಖ್ಯಾತಿ ಗಿಟ್ಟಿಸಿಕೊಂಡಿರುವ ಪ್ರಿಯಾಂಕಾ ಚೋಪ್ರಾ ಅವರು ಅನೇಕ ಪ್ರತಿಷ್ಠಿತ ಬ್ರ್ಯಾಂಡ್ಗಳಿಗೆ ರೂಪದರ್ಶಿ ಕೂಡ ಆಗಿದ್ದಾರೆ. ಮಾಡೆಲಿಂಗ್ ಮೂಲಕವೂ ಅವರು ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತಾರೆ.

ಇತ್ತೀಚೆಗೆ ಪ್ರಿಯಾಂಕಾ ಚೋಪ್ರಾ ಅವರು ಖಾಸಗಿ ಆಭರಣ ಕಂಪನಿಯೊಂದಕ್ಕೆ ರಾಯಾಭಾರಿಯಾಗಿ ಆಯ್ಕೆಯಾದರು. ಅದರ ಸಮಾರಂಭದಲ್ಲಿ ಭಾಗವಹಿಸಿದ ಅವರು ಗ್ಲಾಮರಸ್ ಗೌನ್ ಧರಿಸಿ ಮಿಂಚಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಪ್ರಿಯಾಂಕಾ ಚೋಪ್ರಾ ಹಂಚಿಕೊಂಡಿರುವ ಫೋಟೋಗಳು ಸಖತ್ ವೈರಲ್ ಆಗಿವೆ. ಈ ಫೋಟೋಗಳನ್ನು ಕಂಡು ಅಭಿಮಾನಿಗಳು ವಾವ್ ಎಂದು ಕಮೆಂಟ್ ಮಾಡುತ್ತಿದ್ದಾರೆ. ಅಪ್ಲೋಡ್ ಮಾಡಿದ ಕೆಲವೇ ಗಂಟೆಗಳಲ್ಲಿ ಈ ಫೋಟೋವನ್ನು ಲಕ್ಷಾಂತರ ಮಂದಿ ಲೈಕ್ ಮಾಡಿದ್ದಾರೆ.

ಪ್ರಿಯಾಂಕಾ ಚೋಪ್ರಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಸಕ್ರಿಯರಾಗಿದ್ದಾರೆ. ತಮ್ಮ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರಲು ಅವರು ಆಗಾಗ ಇನ್ಸ್ಟಾಗ್ರಾಮ್ನಲ್ಲಿ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಅವರ ವೃತ್ತಿಜೀವನಕ್ಕೆ ಪತಿ ನಿಕ್ ಜೋನಸ್ ಬೆಂಬಲವಾಗಿ ನಿಂತಿದ್ದಾರೆ.

ನಿಕ್ ಜೋನಸ್ ಮತ್ತು ಪ್ರಿಯಾಂಕಾ ಚೋಪ್ರಾ ದಂಪತಿಗೆ ಹೆಣ್ಣು ಮಗು ಜನಿಸಿದೆ. ಈ ಮಗುವಿಗೆ ಮಾಲ್ತಿ ಮೇರಿ ಚೋಪ್ರಾ ಜೋನಸ್ ಎಂದು ನಾಮಕರಣ ಮಾಡಲಾಗಿದೆ. ಈವರೆಗೂ ಮಗುವಿನ ಮುಖವನ್ನು ಈ ದಂಪತಿ ರಿವೀಲ್ ಮಾಡಿಲ್ಲ.
Published On - 5:24 pm, Wed, 8 June 22