Priyanka Chopra: ‘ಸಿಟಾಡೆಲ್’ ಫಸ್ಟ್ಲುಕ್ನಲ್ಲಿ ಪ್ರಿಯಾಂಕಾ ಚೋಪ್ರಾ ಖಡಕ್ ಗೆಟಪ್; ಇದು ದೇಸಿ ಗರ್ಲ್ ಆ್ಯಕ್ಷನ್ ಅವತಾರ
Citadel First Look: ಅದ್ದೂರಿ ವೆಚ್ಚದಲ್ಲಿ ‘ಸಿಟಾಡೆಲ್’ ವೆಬ್ ಸೀರಿಸ್ ಸಿದ್ಧವಾಗುತ್ತಿದೆ. ಈಗ ಬಿಡುಗಡೆ ಆಗಿರುವ ಫಸ್ಟ್ ಲುಕ್ ಪೋಸ್ಟರ್ನಲ್ಲಿ ಪ್ರಿಯಾಂಕಾ ಚೋಪ್ರಾ ಗೆಟಪ್ ರಿವೀಲ್ ಆಗಿದೆ.
Updated on: Mar 01, 2023 | 1:11 PM

ನಟಿ ಪ್ರಿಯಾಂಕಾ ಚೋಪ್ರಾ ಅವರು ಈಗ ಬಾಲಿವುಡ್ನಿಂದ ದೂರ ಉಳಿದುಕೊಂಡಿದ್ದಾರೆ. ಹೆಚ್ಚಾಗಿ ಅವರು ಇಂಗ್ಲಿಷ್ ಪ್ರಾಜೆಕ್ಟ್ಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಜಾಗತಿಕ ಮಟ್ಟದಲ್ಲಿ ಅವರಿಗೆ ಬೇಡಿಕೆ ಸೃಷ್ಟಿ ಆಗಿದೆ.

ಸಿನಿಮಾ ಮಾತ್ರವಲ್ಲದೇ ವೆಬ್ ಸಿರೀಸ್ ಲೋಕದಲ್ಲೂ ಪ್ರಿಯಾಂಕಾ ಚೋಪ್ರಾ ಮಿಂಚುತ್ತಿದ್ದಾರೆ. ಅವರು ನಟಿಸಿರುವ ‘ಸಿಟಾಡೆಲ್’ ವೆಬ್ ಸೀರಿಸ್ ಮೇಲೆ ಸಾಕಷ್ಟು ನಿರೀಕ್ಷೆ ಇದೆ. ಈಗ ಅದರ ಫಸ್ಟ್ ಲುಕ್ ಬಿಡುಗಡೆ ಆಗಿದ್ದು, ಗಮನ ಸೆಳೆಯುತ್ತಿದೆ.

ಅದ್ದೂರಿ ವೆಚ್ಚದಲ್ಲಿ ‘ಸಿಟಾಡೆಲ್’ ಸೀರಿಸ್ ಸಿದ್ಧವಾಗುತ್ತಿದೆ. ಅಮೇಜಾನ್ ಪ್ರೈಂ ವಿಡಿಯೋ ಮೂಲಕ ಇದು ಸ್ಟ್ರೀಮ್ ಆಗಲಿದೆ. ಈಗ ಬಿಡುಗಡೆ ಆಗಿರುವ ಫಸ್ಟ್ ಲುಕ್ ಪೋಸ್ಟರ್ನಲ್ಲಿ ಪ್ರಿಯಾಂಕಾ ಚೋಪ್ರಾ ಅವರ ಪಾತ್ರದ ಗೆಟಪ್ ರಿವೀಲ್ ಆಗಿದೆ.

ಬಾಲಿವುಡ್ನಲ್ಲಿ ‘ದೇಸಿ ಗರ್ಲ್’ ಎಂದು ಫೇಮಸ್ ಆದವರು ಪ್ರಿಯಾಂಕಾ ಚೋಪ್ರಾ. ಹಾಗಂತ ಅವರು ಅದೇ ಇಮೇಜ್ಗೆ ಗಂಟು ಬಿದ್ದಿಲ್ಲ. ಸಾಹಸ ಪ್ರಧಾನ ಪಾತ್ರಗಳ ಮೂಲಕವೂ ರಂಜಿಸಿದ್ದಾರೆ. ‘ಸಿಟಾಡೆಲ್’ನಲ್ಲಿ ಅವರಿಗೆ ಅಂಥ ಪಾತ್ರ ಸಿಕ್ಕಿದೆ.

‘ಸಿಟಾಡೆಲ್’ ವೆಬ್ ಸರಣಿಯನ್ನು ಭಾರತದಲ್ಲೂ ನಿರ್ಮಾಣ ಮಾಡಲಾಗುತ್ತಿದೆ. ಇಂಡಿಯನ್ ವರ್ಷನ್ನಲ್ಲಿ ಸಮಂತಾ ರುತ್ ಪ್ರಭು ಅವರು ನಟಿಸುತ್ತಿದ್ದಾರೆ. ಅವರು ಕೂಡ ಭರ್ಜರಿ ಆ್ಯಕ್ಷನ್ ದೃಶ್ಯಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್ ಇಂಟರ್ನೆಟ್) ಸಂಸ್ಥೆಯಲ್ಲಿ ಕಂಟೆಂಟ್ ಪ್ರೊಡ್ಯೂಸರ್ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್ ಸಾಹಿತ್ಯದ ವಿದ್ಯಾರ್ಥಿ.
Read More



