- Kannada News Photo gallery Producer Geetha Shiva Rajkumar celebrated birthday with fans Kannada News
ನಿರ್ಮಾಪಕಿ ಗೀತಾ ಶಿವರಾಜ್ ಕುಮಾರ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು
ನಿರ್ಮಾಪಕಿ, ರಾಜಕಾರಣಿ ಗೀತಾ ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬವನ್ನು ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್ ಕನ್ನಡ ಸೇನೆಯ ಸದಸ್ಯರು ಆಚರಣೆ ಮಾಡಿದ್ದಾರೆ. ಇಲ್ಲಿವೆ ಅಭಿಮಾನಿಗಳೊಟ್ಟಿಗಿನ ಚಿತ್ರಗಳು.
Updated on: Jun 22, 2024 | 3:20 PM

ನಿರ್ಮಾಪಕಿ, ರಾಜಕಾರಣಿ ಗೀತಾ ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬವನ್ನು ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್ ಕನ್ನಡ ಸೇನೆಯ ಸದಸ್ಯರು ಆಚರಣೆ ಮಾಡಿದ್ದಾರೆ.

ಅಭಿಮಾನಿಗಳು ಪ್ರೀತಿಯಿಂದ ತಂದ ಕೇಕ್ ಅನ್ನು ಕತ್ತರಿಸುವ ಮೂಲಕ ಗೀತಾ ಶಿವರಾಜ್ ಕುಮಾರ್, ಶಿವರಾಜ್ ಕುಮಾರ್ ತಮ್ಮ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ.

ಗೀತಾ ಶಿವರಾಜ್ ಕುಮಾರ್ ಅವರು ಸಿನಿಮಾ ನಿರ್ಮಾಪಕಿಯಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ತಮ್ಮ ಗೀತಾ ಪಿಕ್ಚರ್ಸ್ ಮೂಲಕ ಕೆಲ ಒಳ್ಳೆಯ ಸಿನಿಮಾಗಳನ್ನು ನೀಡುತ್ತಿದ್ದಾರೆ.

ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಉದ್ಯಮಿಯಾಗಿಯೂ ಗುರುತಿಸಿಕೊಂಡಿದ್ದಾರೆ. ನಿರ್ಮಾಪಕಿ ಆಗಿರುವ ಜೊತೆಗೆ ಮೈಸೂರಿನ ಶಕ್ತಿಧಾಮ ಶಾಲೆಯನ್ನು ಸಹ ನಡೆಸುತ್ತಿದ್ದಾರೆ.

ಕಳೆದ ವರ್ಷ ಹೊಸಪೇಟೆಯ ಇಂಗಳಗಿ ಸಮೀಪದ ಅನ್ನಪೂರ್ಣೇಶ್ವರಿ ವಿದ್ಯಾಪೀಠ ವಸತಿಯುತ ಪ್ರೌಢಶಾಲೆಯನ್ನು ದತ್ತು ಪಡೆದಿದ್ದು ಅದಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸಿದ್ದಾರೆ.

ಚುನಾವಣಾ ರಾಜಕಾರಣದಲ್ಲಿಯೂ ಸಕ್ರಿಯವಾಗಿರು ಗೀತಾ ಶಿವರಾಜ್ ಕುಮಾರ್ ಈವರೆಗೆ ಮೂರು ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಆದರೆ ಮೂರು ಬಾರಿಯೂ ಸೋಲು ಕಂಡಿದ್ದಾರೆ.

ಗೀತಾ ಶಿವರಾಜ್ ಕುಮಾರ್ ಅವರು ಪ್ರಸ್ತುತ ‘ಭೈರತಿ ರಣಗಲ್’ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಹರ್ಷ ನಿರ್ದೇಶನ ಮಾಡಲಿರುವ ಹೊಸ ಸಿನಿಮಾ ಸಹ ನಿರ್ಮಾಣ ಮಾಡಲಿದ್ದಾರೆ ಎನ್ನಲಾಗುತ್ತಿದೆ.



















